Please assign a menu to the primary menu location under menu

NEWSನಮ್ಮಜಿಲ್ಲೆ

ಅಂಗನವಾಡಿ ಆಹಾರ ಪದಾರ್ಥ ಫಲಾನುಭವಿಗಳ ಮನೆಬಾಗಿಲಿಗೆ

ವಿಜಯಪಥ ಸಮಗ್ರ ಸುದ್ದಿ

ಯಾದಗಿರಿ: ಕೊರೊನಾ ವೈರಸ್ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಲಾಕ್‍ಡೌನ್ ಅವಧಿಯು ಮೇ 17ರವರೆಗೆ ವಿಸ್ತರಿಸಿದ್ದು ಹಾಗೂ 2020-21ನೇ ಸಾಲಿನ ಅಂಗನವಾಡಿ ಕೇಂದ್ರದ ಬೇಸಿಗೆ ರಜೆಯು ಮೇ 30ರವರೆಗೆ ಘೋಷಿಸಲಾಗಿರುತ್ತದೆ.

ಈ ರಜೆ ಅವಧಿಯಲ್ಲಿ ಅಂಗನವಾಡಿ ಕೇಂದ್ರದ ಫಲಾನುಭವಿಗಳಿಗೆ ಬಳಸುವ ಆಹಾರ ಪದಾರ್ಥಗಳನ್ನು ಲೆಕ್ಕ ಹಾಕಿ ಮನೆಗೆ ವಿತರಿಸಲು ನಿರ್ದೇಶಿಸಲಾಗಿದೆ. ಅದರಂತೆ 6 ತಿಂಗಳಿಂದ 6 ವರ್ಷದೊಳಗಿನ ಮಕ್ಕಳಿಗೆ ಮತ್ತು ಗರ್ಭಿಣಿ, ಬಾಣಂತಿಯರಿಗೆ ಆಹಾರ ಪದಾರ್ಥಗಳನ್ನು ಮನೆಗೆ ಬಾಗಿಲಿಗೆ ವಿತರಿಸಲು ಆದೇಶಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪ್ರಭಾಕರ ತಿಳಿಸಿದ್ದಾರೆ.

ಆದೇಶದ ಪ್ರಕಾರ 6 ತಿಂಗಳಿಂದ 3 ವರ್ಷದೊಳಗಿನ ಮಕ್ಕಳಿಗೆ ನ್ಯೂಟ್ರಿಮಿಕ್ಸ್, ಹಾಲಿನಪುಡಿ, ಸಕ್ಕರೆ, ಸಾಧಾರಣಾ ಮತ್ತು ತೀವ್ರ ಅಪೌಷ್ಟಿಕ ಮಕ್ಕಳಿಗೆ ಮೊಟ್ಟೆ, 3ರಿಂದ 6 ವರ್ಷದೊಳಗಿನ ಮಕ್ಕಳಿಗೆ ಗೋಧಿ ಸಜ್ಜಿಗೆ ಪುಡಿ, ಬೆಲ್ಲಾ, ಶೇಂಗಾ, ಹೆಸರು ಕಾಳು, ಅಕ್ಕಿ, ತೊಗರಿ ಬೇಳೆ, ಹಾಲಿಪುಡಿ, ಸಕ್ಕರೆ, ಮೊಟ್ಟೆ ಹಾಗೂ ಗರ್ಭಿಣಿ ಮತ್ತು ಬಾಣಂತಿಯರಿಗೆ ಬೆಲ್ಲಾ, ಶೇಂಗಾ, ಅಕ್ಕಿ, ತೊಗರಿ ಬೇಳೆ, ಹಾಲಿನಪುಡಿ, ಸಕ್ಕರೆ, ಮೊಟ್ಟೆಗಳನ್ನು ಫಲಾನುಭವಿಗಳ ಮನೆ ಬಾಗಿಲಿಗೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಮೂಲಕ ವಿತರಿಸಲು ಸೂಚಿಸಲಾಗಿದೆ.

ಆಹಾರ ಸಾಮಗ್ರಿಗಳು ತಲುಪದಿರುವ ಫಲಾನುಭವಿಗಳು ಸಮೀಪದ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯನ್ನು ಸಂಪರ್ಕಿಸಲು ತಿಳಿಸಿದ್ದಾರೆ.

1 Comment

  • ಆಹಾರ ಸಾಮಗ್ರಿಗಳು ತಲುಪದಿರುವ ಫಲಾನುಭವಿಗಳು ಸಮೀಪದ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯನ್ನ ಭೇಟಿ ಮಾಡಿ ಉಪಯೋಗ ಪಡೆಯಿರಿ

Leave a Reply

error: Content is protected !!
LATEST
ಜ.6ರಿಂದ KSRTC ಸಂಸ್ಥೆಯ ನೌಕರರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ಜಾರಿ: ನಿರ್ದೇಶಕರ ಆದೇಶ ಸಾರಿಗೆ ಕಾರ್ಮಿಕರ ಬೀದಿಗೆ ತಂದಿದ್ದು ಹೊಸ ಸಂಘಟನೆ ಮುಖಂಡ ನಾವಲ್ಲ: ಜಂಟಿ ಪದಾಧಿಕಾರಿ ಡಿ.31ರಂದು ಜಗಜಿತ್ ಸಿಂಗ್ ದಲೈವಾಲರ ಹೋರಾಟ ಬೆಂಬಲಿಸಿ ರಾಜ್ಯಾದ್ಯಂತ ಪಂಜಿನ ಪ್ರತಿಭಟನಾ ಮೆರವಣಿಗೆ KSRTC: ಸಾರಿಗೆ ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ ಮುಂದೂಡಿದ ಜಂಟಿ ಕ್ರಿಯಾ ಸಮಿತಿ ಇಂದು ಸಾರಿಗೆ ನೌಕರರ ವೇತನ ಹೆಚ್ಚಳ ಸಂಬಂಧ ತುರ್ತು ಸಭೆ ಕರೆದ ಸಿಎಂ KSRTC ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರ ತಡೆಯಲು ಮುಂದಾದ ಸರ್ಕಾರ? NWKRTC: ಡಿ.31ರ ಮುಷ್ಕರಕ್ಕೆ ನಮ್ಮ ಬೆಂಬಲ ಇಲ್ಲ- ಹುಬ್ಬಳ್ಳಿ ಸಾರಿಗೆ ನೌಕರರ ಒಕ್ಕೂಟ NWKRTC: ಬಸ್‌-ಕಾರು ನಡುವೆ ಅಪಘಾತ - ಮಹಿಳೆ ಮೃತ, ಇಂಜಿನಿಯರ್‌ಗೆ ಗಾಯ ದೆಹಲಿ ರೈತರ ಹೋರಾಟ ಬೆಂಬಲಿಸಿ ಬನ್ನೂರಿನಲ್ಲಿ ರೈತರು- ರೈತ ಮುಖಂಡರ ಪ್ರತಿಭಟನೆ KSRTC: ಅಧಿಕಾರಿಗಳು ಬೀದಿಗಿಳಿಯದ ಹೊರತು ನಾವು ಮುಷ್ಕರ ಬೆಂಬಲಿಸಲ್ಲ- ಸಮಸ್ತ ಚಾಲನಾ ಸಿಬ್ಬಂದಿಗಳು