NEWS

ಅಂಚೆ ಮೂಲಕ ವಿವಿಧ ಔಷಧ ರವಾನೆ

ಅಂಚೆ ಕಚೇರಿಗಳು ಈಗಾಗಲೇ ಈ ನಿಟ್ಟಿನಲ್ಲಿ ಕಾರ್ಯಾರಂಭಿಸಿ ಸೇವೆಯಲ್ಲಿ ನಿರತ

ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ಕೊರೊನಾ ವೈರಸ್ ಮುನ್ನೆಚ್ಚರಿಕಾ ಕ್ರಮವಾಗಿ ಲಾಕ್ ಡೌನ್ ಅವಧಿಯಲ್ಲಿ ಅಂಚೆ ಇಲಾಖೆಯು ಅಗತ್ಯ ಸೇವೆಗಳನ್ನು ನೀಡುತ್ತಿದೆ. ಮಂಗಳೂರು ವಿಭಾಗದಲ್ಲಿ ಎಲ್ಲಾ ಇಲಾಖಾ ಮತ್ತು ಶಾಖಾ  ಅಂಚೆ ಕಚೇರಿಗಳು ಈಗಾಗಲೇ ಈ ನಿಟ್ಟಿನಲ್ಲಿ ಕಾರ್ಯಾರಂಭಿಸಿವೆ.

ಔಷಧ ರವಾನೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಯಾವುದೇ ಊರಿನಿಂದ ಯಾವುದೇ ಊರಿಗೆ ಅಂಚೆ ಮೂಲಕ ಔಷಧ ಮತ್ತು ತುರ್ತು ಅಗತ್ಯದ ವಸ್ತುಗಳನ್ನು ರವಾನಿಸಬಹುದಾಗಿದೆ. ಸಮೀಪದ ಜಿಲ್ಲೆಗಳಾದ ಶಿವಮೊಗ್ಗ, ಮೈಸೂರು, ಕೊಡಗು  ಹಾಗೂ ಚಿಕ್ಕಮಗಳೂರು ಇತ್ಯಾದಿ ಊರುಗಳಿಗೆ ಕೂಡ ಔಷಧ ಮತ್ತು ಅಗತ್ಯ ವಸ್ತುಗಳನ್ನು ಕ್ಷಿಪ್ರವಾಗಿ ತಲುಪಿಸಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ.

ನೆರೆಯ ಹಾಗೂ ಇತರ ರಾಜ್ಯಗಳಿಗೆ ಮಂಗಳೂರಿನಿಂದ ನೇರ ಸಾಗಾಣಿಕೆ ಇಲ್ಲದಿರುವುದರಿಂದ ಮಂಗಳೂರಿನಿಂದ ಬೆಂಗಳೂರು ಮೂಲಕ ಕಳುಹಿಸಲಾಗುತ್ತಿದೆ. ಇದರಿಂದ ವಿಳಂಬವಾಗುವ ಸಾಧ್ಯತೆ ಇದೆ. ಇವುಗಳನ್ನು ರವಾನಿಸುವಾಗ ಅಂಚೆ ಕಚೇರಿಗೆ  ತುರ್ತು ಅಗತ್ಯದ ಬಗ್ಗೆ ತಿಳಿಸಿದರೆ, ಶೀಘ್ರ ರವಾನೆ ಹಾಗೂ ಬಟವಾಡೆಯ ವ್ಯವಸ್ಥೆಗಳನ್ನು ಮಾಡಲು ಸಹಾಯಕವಾಗುತ್ತದೆ.

ತಂತ್ರಜ್ಞಾನ ಆಧಾರಿತ ಇ ಮನಿಯಾರ್ಡರ್ ಸೇವೆ

ಲಾಕ್ ಡೌನ್ ಅವಧಿಯಲ್ಲಿ ಕುಟುಂಬಿಕರಿಗೆ ಹಣ ಕಳಿಸುವ ಅಗತ್ಯತೆಗಳು ಎಲ್ಲರಿಗೂ ಬರಬಹುದು.  ಇದಕ್ಕಾಗಿ ಅಂಚೆ ಕಚೇರಿಯಲ್ಲಿ ವಿಶೇಷವಾದ ಇ ಮನಿಯಾರ್ಡರ್ ಸೇವೆ ಲಭ್ಯವಿದೆ. ಸಾರಿಗೆ ಸಂಪರ್ಕ ವ್ಯವಸ್ಥೆ ಇಲ್ಲದಿರುವುದು ಈ ಸೇವೆಯ ಮೇಲೆ ಪರಿಣಾಮ ಬೀರುವುದಿಲ್ಲ. ಇಲೆಕ್ಟ್ರಾನಿಕ್  ತಂತ್ರಜ್ಞಾನದ ಮೂಲಕ ಪಿನ್ ಕೋಡ್ ಆಧಾರಿತವಾಗಿ ಕಳುಹಿಸುವ ವ್ಯವಸ್ಥೆ ಇರುವುದರಿಂದ ದೇಶದ ಯಾವುದೇ ಭಾಗಕ್ಕೂ ಇ  ಮನಿಯಾರ್ಡರ್  ಮೂಲಕ ಹಣವನ್ನು ಸಾರ್ವಜನಿಕರು ಅಂಚೆಕಚೇರಿಗಳಿಂದ ಕಳುಹಿಸಬಹುದಾಗಿದೆ.

ಸಾಮಾಜಿಕ ಭದ್ರತೆ ಯೋಜನೆಗಳ ಹಣ ಪಾವತಿ

ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಲ್ಲಿ ಈ-ಮನಿಯಾರ್ಡರ್ ಹಾಗೂ ಅಂಚೆ ಉಳಿತಾಯ ಖಾತೆಗಳ ಮೂಲಕ ಸಂಬಂಧಿಸಿದ ಫಲಾನುಭವಿಗಳಿಗೆ ಹಣವು ಅಂಚೆ ಕಛೇರಿಗಳಲ್ಲಿ ಪಾವತಿಯಾಗುತ್ತಿದ್ದು, ಕಳೆದ ಒಂದು ವಾರದಲ್ಲಿ ಸುಮಾರು 5500 ಫಲಾನುಭವಿಗಳಿಗೆ ಇ ಮನಿಯಾರ್ಡರ್ ಗಳನ್ನು ಮಂಗಳೂರು ವಿಭಾಗದಲ್ಲಿ ವಿತರಿಸಲಾಗಿದೆ. ಇನ್ನೂ ಸುಮಾರು 24,0000 ಫಲಾನುಭವಿಗಳಿಗೆ ಈ ವಾರದಲ್ಲಿ ಇ ಮನಿಯಾರ್ಡರ್ ಗಳನ್ನು ಪಾವತಿಸಲಾಗುತ್ತಿದೆ.

ವಿದ್ಯುತ್ ಬಿಲ್ ಪಾವತಿ 

ಮಂಗಳೂರು ಅಂಚೆ ವಿಭಾಗದ ಎಲ್ಲಾ ಇಲಾಖಾ ಮತ್ತು ಶಾಖಾ  ಅಂಚೆ ಕಛೇರಿಗಳಲ್ಲಿ ವಿದ್ಯುತ್ ಬಿಲ್ ಪಾವತಿ ಸೇವೆ ಲಭ್ಯವಿದ್ದು, ಗ್ರಾಹಕರು ಈ ಸೇವೆಯ ಸದುಪಯೋಗ ಪಡೆದುಕೊಳ್ಳಬಹುದು. ಲಾಕ್ ಡೌನ್ ಅವಧಿಯಲ್ಲಿ ಮೆಸ್ಕಾಂ ಬಿಲ್ ಬಾರದಿದ್ದರೂ ಕೂಡ ಗ್ರಾಹಕರು ತಮ್ಮ ಆರ್.ಆರ್. ನಂಬರ್ ಹಾಗೂ ಮೆಸ್ಕಾಂ ಸಬ್ ಡಿವಿಷನ್ ಮಾಹಿತಿಯನ್ನು ಅಂಚೆ ಕಚೇರಿಯಲ್ಲಿ ನೀಡಿ ವಿದ್ಯುತ್ ಬಿಲ್ ಪಾವತಿ ಮಾಡಬಹುದಾಗಿದೆ.

ಮೊಬೈಲ್ ಮತ್ತು ಡಿ.ಟಿ.ಎಚ್ ರೀಚಾರ್ಜ್

ಲಾಕ್ ಡೌನ್ ಅವಧಿಯಲ್ಲಿ ಹೆಚ್ಚಿನ ಅಂಗಡಿಗಳು ಮುಚ್ಚಿರುವುದರಿಂದ ಮೊಬೈಲ್/ಡಿ.ಟಿ.ಎಚ್ ರೀಚಾರ್ಜ್ ಸೌಲಭ್ಯಗಳು ಕೂಡ ಅಂಚೆ ಕಚೇರಿಯಲ್ಲಿ ಲಭ್ಯವಿದೆ. ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಖಾತೆಯ ಮೂಲಕ ಗ್ರಾಹಕರು ತಮ್ಮ ಸಮೀಪದ ಅಂಚೆ ಕಚೇರಿಯಲ್ಲಿ ಮೊಬೈಲ್/ ಡಿ.ಟಿ.ಎಚ್ ರೀಚಾರ್ಜ್ ನ್ನು ಮಾಡಬಹುದಾಗಿದೆ. ಅಲ್ಲದೆ ಮೊಬೈಲ್ ಬ್ಯಾಂಕಿಂಗ್ ಮೂಲಕ ಮನೆಯಲ್ಲೇ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಮಂಗಳೂರು ವಿಭಾಗೀಯ ಕಚೇರಿಯ ವಾಟ್ಸಾಪ್ ಸಂಖ್ಯೆ   9448291072ಗೆ ಸಂದೇಶ  ಕಳುಹಿಸಬಹುದಾಗಿದೆ ಎಂದು ಹಿರಿಯ ಅಂಚೆ ಅಧೀಕ್ಷಕರು, ಮಂಗಳೂರು ವಿಭಾಗ  ಇವರ   ತಿಳಿಸಿದೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ