ಹಾಸನ: ಅಂಗಾಂಗಳನ್ನು ದಾನ ಮಾಡುವ ಮೂಲಕ ಮಗನ ಸಾವಿನಲ್ಲೂ ಪಾಲಕರು ಸಾರ್ಥಕತೆ ಮೆರೆದಿದ್ದಾರೆ.
ಅಪಘಾತವೊಂದರಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ ಯುವಕ ಕಿರಣ್ (23) ಮೃತಪಟ್ಟವರು. ಅಪಘಾತದ ಬಳಿಕ ಮೆದುಳು ನಿಷ್ಕ್ರಿಯವಾಗಿದ್ದ ಹಿನ್ನೆಲೆ ಅಂಗಾಂಗ ದಾನ ಮಾಡಿ ಪಾಲಕರು ಇತರರಿಗೆ ಜೀವದಾನ ಮಾಡಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಕಿರಣ್ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ಇದರಿಂದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಪಾಲಕರು ಚಿಕಿತ್ಸೆ ಕೊಡಿಸುತ್ತಿದ್ದರು. ಆದ್ರೆ ಮೆದುಳು ನಿಷ್ಕ್ರಿಯಗೊಂಡಿದ್ದರಿಂದ ಮಗನ ಉಳಿಸಿಕೊಳ್ಳುವುದು ಅಸಾಧ್ಯ ಎಂದು ಅರಿತು ಈ ಕಾರ್ಯ ಮಾಡಿದ್ದಾರೆ.
ಕಿರಣ್ ಮೂಲತಃ ಹಾಸನದ ಹೊಳೆನರಸೀಪುರ ತಾಲೂಕಿನ ಹರಳಹಳ್ಳಿ ಗ್ರಾಮದ ಯೋಗೇಶ್, ರಾಣಿ ದಂಪತಿಯ ಮುದ್ದಿನ ಏಕಮಾತ್ರ ಪುತ್ರನಾಗಿದ್ದ.
ಕಿರಣ್ ಮಂಗಳವಾರ ರಾತ್ರಿ ಕೊನೆಯುಸಿರೆಳೆದಿದ್ದು, ಬುಧವಾರ ಮಧ್ಯಾಹ್ನ ಹುಟ್ಟೂರು ಹರಳಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.