VIJAYAPATHA.IN > ವಿಜಯಪಥ > NEWS > ವಿಡಿಯೋ > ಅಗತ್ಯ ಸೇವೆಗಳಿಗೆ ಪಾಸ್ ಅವಶ್ಯಕತೆ ಇಲ್ಲ
ಅಗತ್ಯ ಸೇವೆಗಳಿಗೆ ಪಾಸ್ ಅವಶ್ಯಕತೆ ಇಲ್ಲ
ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಸ್ಪಷ್ಟ ಸಂದೇಶ
admin.savhnMarch 28, 2020
ಮೈಸೂರು: ಸಾರ್ವಜನಿಕರಿಗೆ ಅಗತ್ಯವಿರುವ ಸೇವೆಗಳಿಗೆ ಪಾಸ್ ಅವಶ್ಯಕತೆ ಇಲ್ಲ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಸ್ಪಷ್ಟವಾಗಿ ತಿಳಿಸಿದ್ದಾರೆ.
ಕೊರೊನಾ ವೈರೆಸ್ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಾರ್ತ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಫೆಸ್ ಬುಕ್ ಪೇಜ್ ನಲ್ಲಿ ಲೈವ್ ಸಂದೇಶ ನೀಡಿದ ಅವರು, ಸರ್ಕಾರಿ ಅಧಿಕಾರಿಗಳಿಗೆ, ಬ್ಯಾಂಕ್ ಅಧಿಕಾರಿಗಳಿಗೆ ಹಾಗೂ ಇನ್ನಿತರ ಅಗತ್ಯ ಸೇವೆಗಳನ್ನು ಒದಗಿಸುವ ಅಧಿಕಾರಿಗಳಿಗೆ ಪಾಸ್ ಅವಶ್ಯಕತೆಯಿಲ್ಲ ಎಂದರು.
ದಿನನಿತ್ಯ ಅಗತ್ಯ ವಸ್ತುಗಳನ್ನು ಸಾಗಿಸುವ ಸರಕು ವಾಹನಗಳಿನ್ನು ನಿರ್ಬಂಧಿಸಿಲ್ಲ. ಈ ಬಗ್ಗೆ ಜಿಲ್ಲೆಯ ಪೊಲೀಸ್ ಆಯುಕ್ತರ ಜೊತೆ ಮಾತನಾಡಿ, ರೈತರಿಗೆ ತೊಂದರೆ ಆಗದಂತೆ ಹೆಚ್ಚಿನ ಗಮನ ಹರಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಅಂತರ್ಜಾಲದ ಬಳಕೆಯನ್ನು ನಿಷೇಧಿಸಲಾಗುವುದು ಎಂಬ ಸುಳ್ಳು ಸುದ್ದಿ ಹರಿದಾಡುತ್ತಿದೆ. ಯಾವುದೇ ಕಾರಣಕ್ಕೂ ಅಂತರ್ಜಾಲವನ್ನು ನಿಷೇಧಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.
Related
admin.savhn