NEWSನಮ್ಮಜಿಲ್ಲೆ

ಅಗತ್ಯ ವಸ್ತುಗಳ ಪೂರೈಕೆಗೆ ಬೇಕರಿ ಪುನರಾರಂಭ

ಕನಿಷ್ಠ ಸಿಬ್ಬಂದಿ ಮತ್ತು ಕಾರ್ಮಿಕರಿಂದ ಕೆಲಸ l ಜಿಲ್ಲಾಧಿಕಾರಿ ಲತಾ ಆದೇಶ

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಆಹಾರ ಘಟಕಗಳು, ಬೇಕರಿ ಮತ್ತು ಬಿಸ್ಕತ್‍, ಕಾಂಡಿಮೆಂಟ್ಸ್ ಹಾಗೂ ಸಿಹಿ ತಿಂಡಿಗಳ ಉತ್ಪದನಾ ಕೇಂದ್ರಗಳನ್ನು ಕನಿಷ್ಠ ಸಿಬ್ಬಂದಿ ಮತ್ತು ಕಾರ್ಮಿಕರೊಂದಿಗೆ ತಯಾರಿಸಲು ಹಾಗೂ ಚಿಲ್ಲರೆ ಮಾರಾಟ ಮಳಿಗೆಗಳನ್ನು ನಿರ್ವಹಿಸಲು ಕೋವಿಡ್-19 ರ ಸೋಕು ಹರಡದಂತೆ ಸಾಮಾಜಿಕ ಅಂತರ ಕಾಯ್ದುಕೊಂಡು ಶಿಷ್ಟಾಚಾರದಂತೆ ಎಲ್ಲಾ ನಿಯಮಗಳನ್ನು ಅನುಸರಿಸಿ ಷರತ್ತುಗಳಿಗೊಳಪಟ್ಟು ಕಾರ್ಯನಿರ್ವಹಣೆಗೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಆರ್. ಲತಾ ತಿಳಿಸಿದ್ದಾರೆ.

ಭಾರತವು ಸೇರಿದಂತೆ ವಿಶ್ವದಾದ್ಯಂತ ಮಹಾಮಾರಿಯಾಗಿ ಹಬ್ಬುತ್ತಿರುವ ಕೊರೋನಾ ವೈರೆಸ್ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಅತಿ ಮುಖ್ಯವಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಲಾಕ್‍ಡೌನ್ ಮಾಡಲಾಗಿರುತ್ತದೆ. ಇಂತಹ ಸಂದರ್ಭದಲ್ಲಿ ಸಾರ್ವಜನಿಕರಿಗೆ ಬೇಕಾಗುವ ಅಗತ್ಯ ವಸ್ತುಗಳ ಪೂರೈಕೆ ಮಾಡಲು ಬೇಕರಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ ಎಂದರು.

ಬೇಕರಿ ಮತ್ತು ಅದಕ್ಕೆ ಸಂಬಂಧಿಸಿದ ಉತ್ಪನ್ನಗಳನ್ನು ರೋಗಿಗಳು, ಹಿರಿಯ ನಾಗರಿಕರು, ಮಕ್ಕಳು ಮತ್ತು ಸಾರ್ವಜನಿಕರು ಹೆಚ್ಚಾಗಿ ಬಳಸುವುದರಿಂದ ಹಾಗೂ ಭಾರತ ಸರ್ಕಾರದ ಆದೇಶದಲ್ಲಿ ತಿಳಿಸಿರುವಂತೆ ಆಹಾರ ಘಟಕಗಳು, ಬೇಕರಿ ಮತ್ತು ಬಿಸ್ಕತ್‍, ಕಾಂಡಿಮೆಂಟ್ಸ್ ಹಾಗೂ ಸಿಹಿ ತಿಂಡಿಗಳ ಉತ್ಪಾದನಾ ಕೇಂದ್ರಗಳನ್ನು ಕನಿಷ್ಠ ಸಿಬ್ಬಂದಿ ಮತ್ತು ಕಾರ್ಮಿಕರೊಂದಿಗೆ ತಯಾರಿಸಲು ಹಾಗೂ ಚಿಲ್ಲರೆ ಮರಾಟ ಮಳಿಗೆಗಳನ್ನು ನಿರ್ವಹಿಸಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂದರು.

ಚಿಕ್ಕಬಳ್ಳಾಪುರದ ಅಂಗಡಿಗಳ ಮುಂದೆ ಯಾವುದೇ ಕಾರಣಕ್ಕೂ ಸಾರ್ವಜನಿಕರು ಆಹಾರವನ್ನು ಸೇವಿಸುವಂತಿಲ್ಲ ಅದನ್ನು ಪಾರ್ಸಲ್ ತೆಗೆದುಕೊಂಡು ಹೋಗಲು ಮಾತ್ರ ಅವಕಾಶ, ಆಹಾರ ಉತ್ಪಾದಿಸುವ ಘಟಕದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿ ಕಡ್ಡಾಯವಾಗಿ ಸ್ಯಾನಿಟೈಸರ್, ಸೋಪ್, ಮಾಸ್ಕ್ ಅನ್ನು ಬಳಸಬೇಕಾಗಿರುತ್ತದೆ, ಕಾರ್ಯನಿರ್ವಹಿಸುವ ಸ್ಥಳದಲ್ಲಿ ಕಾರ್ಮಿಕರು ಕನಿಷ್ಠ 1.5 ಮೀಟರ್ ಅಂತರವನ್ನು ಪಾಲಿಸಬೇಕಾಗಿರುತ್ತದೆ, ಇಂತಹ ಸ್ಥಳಗಳಲ್ಲಿ ಕೊರೊನಾ ವೈರೆಸ್ ಬಗ್ಗೆ ಜಾಗೃತಿ ಮೂಡಿಸುವ ಪೋಸ್ಟರ್ ಮತ್ತು ಬ್ಯಾನರ್‌ಗಳನ್ನು ಅಳವಡಿಸಬೇಕಾಗಿರುತ್ತದೆ ಎಂದು ಹೇಳಿದರು.

ಕಡ್ಡಾಯವಾಗಿ ಕುಡಿಯಲು ಬಿಸಿ ನೀರಿನ ವ್ಯವಸ್ಥೆಯನ್ನು ಕಲ್ಪಿಸುವುದು, ಕಾರ್ಯನಿರ್ವಹಿಸುವ ಸ್ಥಳದಲ್ಲಿ ಶುಚಿತ್ವ, ನೈರ್ಮಲ್ಯವನ್ನು ಕಾಪಾಡಬೇಕು, ಕೆಫೆ, ಕ್ಯಾಂಟೀನ್‍ಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಮತ್ತು ಗ್ಲೌಸ್‍ಗಳನ್ನು ಧರಿಸಬೇಕು. ಕಾರ್ಯನಿರ್ವಹಿಸುತ್ತಿರುವ ಸ್ಥಳಗಳಲ್ಲಿ ಯಾವುದೇ ಕಾರ್ಮಿಕರಿಗೆ ಕೆಮ್ಮು, ನೆಗಡಿ, ಜ್ವರ ಮತ್ತಿತರೆ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ವಿಶ್ರಾಂತಿ ಚಿಕಿತ್ಸೆಗೆ ಅನುಮತಿ ನೀಡಬೇಕು ಎಂದರು.

ಕಾರ್ಯನಿರ್ವಹಿಸುವ ಅಧಿಕಾರಿ, ನೌಕರರು ವಿದೇಶ ಪ್ರಯಾಣವನ್ನು ಮಾಡಿದ್ದರೆ ಅಂತಹವರಿಗೆ ಕಡ್ಡಾಯವಾಗಿ 2 ವಾರಗಳ ಕಾಲ ಪೂರ್ವಾನುಮತಿಯನ್ನು ಪಡೆದು ಹೋಂ ಕ್ವಾರಂಟೈನ್ ನಲ್ಲಿ ಇರಲು ಸೂಚಿಸುವುದು, ಕಾರ್ಯ ನಿರ್ವಹಿಸುವ ಸ್ಥಳಗಳಲ್ಲಿ ಯಾವುದೇ ಸಭೆ, ತರಬೇತಿ ಕಾರ್ಯಾಗಾರಗಳನ್ನು ನಡೆಸಲು ಅವಕಾಶ ನೀಡಬಾರದು. ಹಾಜರಾತಿಯನ್ನು ಪಡೆಯಲು ಬಯೋಮೆಟ್ರಿಕ್‍ನ್ನು ರದ್ದುಗೊಳಿಸುವುದು ಎಂದು ತಿಳಿಸಿದರು.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...