NEWS

ಅಡ್ಡಂಡ ಕಾರ್ಯಪ್ಪ ಮೈಸೂರು ರಂಗಾಯಣ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಇದೇ ಮೇ 10ರಂದು ನಡೆದಿದ್ದ ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಮೇ 13ರಂದು ಹೊರಬಿದ್ದು ಕಾಂಗ್ರೆಸ್ ಸ್ಪಷ್ಟ ಬಹುಮತ ಸಾಧಿಸಿದ ಬೆನ್ನಲ್ಲೇ ಮೈಸೂರಿನ ರಂಗಾಯಣ ನಿರ್ದೇಶಕ ಸ್ಥಾನಕ್ಕೆ ಅಡ್ಡಂಡ ಕಾರ್ಯಪ್ಪ ರಾಜೀನಾಮೆ ನೀಡಿದ್ದಾರೆ.

ಅಡ್ಡಂಡ ಕಾರ್ಯಪ್ಪ ಮೈಸೂರು ರಂಗಾಯಣದ ನಿರ್ದೇಶಕರಾದ ಮೇಲೆ ಹಲವು ವಿವಾದಗಳನ್ನು ಮೈಮೇಲೆ ಎಳೆದುಕೊಂಡಿದ್ದರು.

‘ಟಿಪ್ಪು ನಿಜಕನಸುಗಳು’ ನಾಟಕ ರಚಿಸಿ ವಿವಾದವನ್ನು ಸೃಷ್ಟಿಸಿ ಬಳಿಕ ‘ಸಿದ್ದರಾಮಯ್ಯ ನಿಜ ಕನಸುಗಳು’ ಪುಸ್ತಕ ಬಿಡುಗಡೆ ಮಾಡಿ ತೀವ್ರ ಟೀಕೆಗೆ ಗುರಿಯಾಗಿದ್ದರು.

ಚುನಾವಣೆಗೆ ಮುನ್ನ ಉರಿಗೌಡ ಹಾಗೂ ನಂಜೇಗೌಡ ಪಾತ್ರಗಳನ್ನು ಮುನ್ನಲೆಗೆ ತಂದು ಒಕ್ಕಲಿಗ ಹಾಗೂ ಮುಸ್ಲಿಮರನ್ನು ಎತ್ತಿಕಟ್ಟುವ ಪ್ರಯತ್ನಕ್ಕೆ ಕೈ ಹಾಕಿದ್ದಾರೆ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಆರೋಪಿಸಿತ್ತು.

ನನ್ನನ್ನು ನಿರ್ದೇಶಕನನ್ನಾಗಿ ನೇಮಿಸಿದ ಸರ್ಕಾರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡಿದೆ. ಇದು ಜನಾದೇಶ, ಇದನ್ನು ಗೌರವಿಸುತ್ತೇನೆ. ಈ ಕಾರಣದಿಂದ ನೈತಿಕ ಜವಾಬ್ದಾರಿಯಿಂದ ನನ್ನ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅಡ್ಡಂಡ ಕಾರ್ಯಪ್ಪ ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ