CrimeNEWSನಮ್ಮಜಿಲ್ಲೆನಮ್ಮರಾಜ್ಯ

ಅಂದು ಕೊಂಡಂತೆ ಸಾಧನೆ ಮಾಡಲಾಗುತ್ತಿಲ್ಲ ಅಂತ ನೇಣಿಗೆ ಶರಣಾದ ಬ್ಯಾಂಕ್‌ ವ್ಯವಸ್ಥಾಪಕಿ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ನಾನು ಅಂದು ಕೊಂಡಂತೆ ಸಾಧನೆ ಮಾಡಲು ಆಗುತ್ತಿಲ್ಲ ಎಂದು ನೊಂದ ಬ್ಯಾಂಕ್‌ನ ವ್ಯವಸ್ಥಾಪಕಿಯೊಬ್ಬರು ಆತ್ಮಹತ್ಯೆ ಮಾಡಿರುವ ಘಟನೆ ಮಂಡ್ಯ ನಗರದಲ್ಲಿ ನಡೆದಿದೆ.

ಕಾವೇರಿ ಗ್ರಾಮೀಣ ಬ್ಯಾಂಕ್‌ನ ಪ್ರಾದೇಶಿಕ ಕಚೇರಿಯ ಮ್ಯಾನೇಜರ್‌ ಶ್ರುತಿ (30) ಎಂಬುವರೆ ನಗರದ ವಿನಾಯಕ ಬಡಾವಣೆಯ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದವರು.

ಐಎಎಸ್ ಮಾಡಬೇಕು ಎಂಬ ಕನಸು ನನಸಾಗಲಿಲ್ಲ. ಇದರ ಜತೆಗೆ ಜೀವನದಲ್ಲಿ ಜಿಗುಪ್ಸೆಗೊಂಡಿದ್ದು, ನನ್ನ ಐಎಎಸ್ ಕನಸು ಮತ್ತು ಜೀವನದ ವೈಫಲ್ಯದಿಂದ ಇಹಲೋಕ ತ್ಯಜಿಸುತ್ತಿದ್ದೇನೆ ಎಂದು ಡೆತ್‌ನೋಟ್‌ ಬರೆದಿಟ್ಟಿದ್ದಾರೆ ಎನ್ನಲಾಗಿದೆ.

ಕೊಳ್ಳೇಗಾಲದ ನಿವಾಸಿ ಮಲ್ಲಪ್ಪ ಎಂಬುವರ ಪುತ್ರಿಯಾದ ಶ್ರುತಿ ಕಾವೇರಿ ಗ್ರಾಮೀಣ ಬ್ಯಾಂಕ್‌ನ ಉದ್ಯೋಗಿಯಾಗಿ ನೇಮಕಗೊಂಡು ಚಿಕ್ಕಮಗಳೂರಿನ ಶಾಖೆಯಲ್ಲಿ ಕಳೆದ ಏಳು ವರ್ಷ ಕಾರ್ಯನಿರ್ವಹಿಸಿದ್ದು, ಅಲ್ಲಿಂದ ಮಂಡ್ಯದ ಪ್ರಾದೇಶಿಕ ಕಚೇರಿಗೆ ಎರಡು ತಿಂಗಳ ಹಿಂದೆಯಷ್ಟೇ ವರ್ಗಾವಣೆ ಆಗಿ ಬಂದಿದ್ದರು.

ಅವಿವಾಹಿತರಾಗಿದ್ದ ಶ್ರುತಿ ಮಂಡ್ಯದ ವಿನಾಯಕ ಬಡಾವಣೆಯಲ್ಲಿ ರಾಜಣ್ಣ ಎಂಬುವರ ಮನೆಯನ್ನು ಬಾಡಿಗೆಗೆ ಪಡೆದು ಒಬ್ಬರೆ ವಾಸವಾಗಿದ್ದರು.

ಭಾನುವಾರ ರಾತ್ರಿ 7ಗಂಟೆ ಸುಮಾರಿಗೆ ತಂದೆ ಮಲ್ಲಪ್ಪ ಅವರಿಗೆ ಕರೆ ಮಾಡಿ ನಾನು ದೇವರ ಬಳಿ ಹೋಗುತ್ತಿದ್ದೇನೆ, ನನ್ನನ್ನು ಕ್ಷಮಿಸಿ ಎಂದು ಹೇಳಿ ಕರೆ ಕಟ್‌ ಮಾಡಿದ್ದಾರೆ. ಈ ಮಾತಿನಿಂದ ಗಾಬರಿಗೊಂಡ ತಂದೆ ತಕ್ಷಣ ಮತ್ತೆ ಕರೆ ಮಾಡಿದ್ದಾರೆ. ಆದರೆ ಅಷ್ಟರಲ್ಲೇ ಮೊಬೈಲ್ ಸ್ವಿಚ್ ಆಫ್ ಆಗಿತ್ತು.

ಇನ್ನಷ್ಟು ಗಾಬರಿಗೊಂಡ ತಂದೆ ಮಲ್ಲಪ್ಪ ಮಂಡ್ಯದಲ್ಲಿದ್ದ ಸಂಬಂಧಿಕರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಸಂಬಂಧಿಕರು ಮನೆ ಬಳಿ ಬಂದು ನೋಡುವಷ್ಟರಲ್ಲೇ ನೇಣು ಬಿಗಿದುಕೊಂಡಿದ್ದರು.

ಘಟನೆ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮೃತ ದೇಹವನ್ನು ಮಿಮ್ಸ್‌ಗೆ ರವಾನಿಸಿದ್ದಾರೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ