NEWSನಮ್ಮಜಿಲ್ಲೆ

ಅನಗತ್ಯವಾಗಿ ಮನೆಯಿಂದ ಹೊರಬರದೆ ಸ್ವಯಂ ಸುರಕ್ಷತೆ ಹೊಂದಿ

ಪ್ರಧಾನಿ ಮೋದಿ ಕರೆ ನೀಡಿರುವ ಕರ್ಫ್ಯೂ ಬೆಂಬಲಿಸಿ l ಸಚಿವ ಜಗದೀಶ್ ಶೆಟ್ಟರ್

ವಿಜಯಪಥ ಸಮಗ್ರ ಸುದ್ದಿ

ಹುಬ್ಬಳ್ಳಿ: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕರೆ ನೀಡಿರುವ 21 ದಿನಗಳ ಜನತಾ ಕರ್ಫ್ಯೂಗೆ ಸಾರ್ವಜನಿಕರು ಬೆಂಬಲಿಸಬೇಕು. ಸ್ವಯಂ ನಿಯಂತ್ರಣವನ್ನು ಹೇರಿಕೊಂಡು ಅನಗತ್ಯವಾಗಿ ಮನೆಯಿಂದ ಹೊರಬರದೆ ವೈರಾಣು ಹರಡುವುದನ್ನು ನಿಯಂತ್ರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಹುಬ್ಬಳ್ಳಿಯ ಹಳೇ ಬಸ್ ನಿಲ್ದಾಣದಲ್ಲಿ ಅಗ್ನಿಶಾಮಕದಳದಿಂದ ನಡೆಸಿದ ಡಿಸ್‍ಇನ್‍ಫಕ್ಷನ್ ಸ್ವಚ್ಛತಾ ಕಾರ್ಯ ವೀಕ್ಷಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಅಕ್ಷರಶಃ ಜನತಾ ಕರ್ಫ್ಯೂವನ್ನು ಪಾಲಿಸಿದಾಗ ಮಾತ್ರ ವೈರಾಣು ಹರಡುವುದನ್ನು ನಿಯಂತ್ರಿಸಬಹುದು. ಈ ಮೂಲಕ ನಾವು ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ರೋಗದ ವಿರುದ್ಧ ಹೊರಾಟ ನೆಡಸಬಹುದು. ಯಾವುದೇ ರೀತಿಯ ಅಲಕ್ಷ್ಯ ಸಲ್ಲದು. ವೈಯಕ್ತಿಕ, ಕುಟುಂಬ ಹಾಗೂ ದೇಶದ ಹಿತದೃಷ್ಟಿಯಿಂದ ಇದನ್ನು ಮಾಡುವುದು ಅಗತ್ಯವಿದೆ. ಪ್ರಧಾನ ಮಂತ್ರಿ ಹೇಳಿದಂತೆ ನಾವು 21 ದಿವಸ ನೆಡೆದುಕೊಳ್ಳಲಿದ್ದರೆ, 21 ವರ್ಷ ಹಿಂದೆ ಹೊಗುತ್ತವೆ. ವೈರಾಣುವಿನ ಹರಡುವಿಕೆ ಮೂರನೆ ಹಂತ ತಲುಪಿದರೆ ದೇಶಕ್ಕೆ ದೊಡ್ಡ ಗಂಡಾತರ ಒದಗಿ ಬರುತ್ತಿದೆ. ಆದರಿಂದ ಜನರು ಪ್ರಜ್ಞಾವಂತಿಕೆಯಿಂದ ವರ್ತಿಸಬೇಕು ಎಂದು ಕರೆ ನೀಡಿದರು.

ಅಗ್ನಿಶಾಮಕ ಇಲಾಖೆಯಿಂದ ಹುಬ್ಬಳ್ಳಿ ಹಾಗೂ ಧಾರವಾಡ ನಗರಗಳಲ್ಲಿ ಪ್ರತ್ಯೇಕವಾಗಿ ಅಗ್ನಿಶಾಮಕ ವಾಹನಗಳನ್ನು ಬಳಸಿ ದೊಡ್ಡ ಪ್ರಮಾಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗುತ್ತಿದೆ. ಸೋಡಿಯಂ ಹೈಪೋಕ್ಲೋರೈಡ್ ಮಿಶ್ರಿತ ದ್ರಾವಣವನ್ನು ಸಿಂಪಡಿಸುವುದರಿಂದ ವೈರಾಣು ಹಾಗೂ ಬ್ಯಾಕ್ಟೀರಿಯಾಗಳಿಂದ ಹರಡುವ ಕಾಯಿಲೆಗಳನ್ನು ನಿಯಂತ್ರಿಸಬಹುದಾಗಿದೆ. ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಈ ನಿಟ್ಟಿನಲ್ಲಿ ಉತ್ತಮ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ದೀಪಾ ಚೋಳನ್, ಹುಬ್ಬಳ್ಳಿ-ಧಾರವಾಡ ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್, ಮುಖ್ಯ ಅಗ್ನಿಶಾಮಕ ಅಧಿಕಾರಿ ಈಶ್ವರನಾಯ್ಕ, ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಶ್ರೀಕಾಂತ, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಚಂದ್ರಶೇಖರ್, ಹುಬ್ಬಳ್ಳಿ ಶಹರ ತಹಸೀಲ್ದಾರ್‌ ಶಶಿಧರ ಮಾಡ್ಯಾಳ, ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ್‌ ಪ್ರಕಾಶ್ ನಾಸಿ ಸೇರಿದಂತೆ ಇತರೆ ಅಗ್ನಿ ಶಾಮಕ ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ