NEWSನಮ್ಮಜಿಲ್ಲೆನಮ್ಮರಾಜ್ಯಬೆಂಗಳೂರು

ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಗೆ ಚಾಲನೆ ನೀಡಿದ ಸಿಎಂ, ಡಿಸಿಎಂ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಇಂದು ಸಂಜೆ ಚಾಲನೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈ ಸಮಾರಂಭದಲ್ಲೇ ಯೋಜನೆಯ ಲೋಗೋ ಕೂಡ ಬಿಡುಗಡೆ ಮಾಡಿದರು. ಇದೇ ವೇಳೆ 10 ಕೆಜಿ ಅಕ್ಕಿಯ ಪೈಕಿ ಐದು ಕೆಜಿ ಅಕ್ಕಿಯ 170 ರೂ.ಗಳ ಮೈಸೂರು, ಕೋಲಾರ ಜಿಲ್ಲೆಯ ಫಲಾನುಭವಿಗಳ ಖಾತೆಗೆ ಹಾಕುವ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಸಿದ್ದರಾಮಯ್ಯ, ​ದೇಶದಲ್ಲಿ ಆಹಾರ ಭದ್ರತೆ ಕಾಯ್ದೆ ಜಾರಿಗೆ ತಂದಿದ್ದು ಮನಮೋಹನ್​ ಸಿಂಗ್ ನೇತೃತ್ವದ ಯುಪಿಎ ಸರ್ಕಾರ. ಮೊದಲ ಸಂಪುಟದಲ್ಲೇ ಐದು ಗ್ಯಾರಂಟಿ ಜಾರಿಗೆ ತೀರ್ಮಾನ ಮಾಡಿದ್ದೆವು. ನಮ್ಮ ಐದು ಗ್ಯಾರಂಟಿಗಳಲ್ಲಿ ಪ್ರಮುಖವಾದದ್ದು ಅನ್ನಭಾಗ್ಯ ಯೋಜನೆ ಎಂದು ತಿಳಿಸಿದರು.

ಇನ್ನು ರಾಜ್ಯದ 1.28 ಕೋಟಿ ಕುಟುಂಬಕ್ಕೆ ಅನ್ನಭಾಗ್ಯ ಯೋಜನೆ ತಲುಪುತ್ತದೆ. ರಾಜ್ಯದ 4.42 ಕೋಟಿ ಜನರಿಗೆ ಉಚಿತವಾಗಿ ಅಕ್ಕಿ ಕೊಡುತ್ತಿದ್ದೇವೆ. ಅಂತ್ಯೋದಯ, BPL ಕಾರ್ಡ್​ದಾರರು ಸೇರಿ 4.42 ಕೋಟಿ ಜನರಿಗೆ ಅನುಕೂಲವಾಗಲಿದೆ. ನಾವು ಹೆಚ್ಚುವರಿಯಾಗಿ ತಲಾ 10 ಕೆಜಿ ಅಕ್ಕಿ ಕೊಡುತ್ತೇವೆ ಅಂತಾ ಹೇಳಿಲ್ಲ. ಒಟ್ಟು 10 ಕೆಜಿ ಅಕ್ಕಿ ಕೊಡುತ್ತೇವೆ ಅಂತಾ ಹೇಳಿದ್ದೆವು ಎಂದರು.

ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ಐದು ಗ್ಯಾರಂಟಿಗಳಲ್ಲಿ ಮೂರನೇ ಗ್ಯಾರಂಟಿಯಾಗಿರುವ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದೇವೆ. ನಾವು ನುಡಿದಂತೆ ನಡೆದಿದ್ದೇವೆ, ಮುಂದೆಯೂ ನಡೆಯುತ್ತೇವೆ. ನಮ್ಮ ಐದು ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿದೆ ಎಂದರು.

ಕೇಂದ್ರ ಸರ್ಕಾರ ಹೃದಯ ಶ್ರೀಮಂತಿಕೆ ತೋರಿಸಿ ಅಕ್ಕಿ ಕೊಡಬಹುದಿತ್ತು ಎಂದು ಕುಟುಕಿದ ಅವರು, ನಮಗೂ ಅಕ್ಕಿ ಹೊಂದಿಸುವ ಶಕ್ತಿ ಇದೆ. ನಾವು ಅನ್ನ ಭಾಗ್ಯ ಭರವಸೆ ಜಾರಿ ಕಾರ್ಯಕ್ರಮದ ಮೂಲಕ ಕೇವಲ ಕರ್ನಾಟಕ ರಾಜ್ಯಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಇಂದು ಸಂದೇಶ ರವಾನೆಸಿದ್ದೇವೆ ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಯಾದ ದಿನವೇ ಬಸವ ಜಯಂತಿಯಂದು ಅನ್ನಭಾಗ್ಯ ಯೋಜನೆ ಜಾರಿ ಮಾಡಿದ್ದನ್ನು ಈ ದಿನ ಸ್ಮರಿಸುತ್ತೇನೆ. ನಂತರ ನಮ್ಮ ಸರ್ಕಾರ ಆ ಯೋಜನೆಯಲ್ಲಿ ಅಕ್ಕಿಯ ಪ್ರಮಾಣವನ್ನು 7 ಕೆಜಿಗೆ ಹೆಚ್ಚಳ ಮಾಡಿತ್ತು. ನಂತರದ ಸರ್ಕಾರ ಅದನ್ನು 5 ಕೆಜಿಗೆ ಇಳಿಸಿತ್ತು. ನಂತರ ನಮ್ಮ ಪಕ್ಷ ಮತ್ತೆ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ನೀಡುವುದಾಗಿ ನಮ್ಮ ಐದು ಗ್ಯಾರಂಟಿ ಯೋಜನೆಗಳಲ್ಲಿ ಸೇರಿಸಿದ್ದೆವು ಎಂದರು.

ನಮ್ಮ ಈ ಯೋಜನೆಗಳ ಬಗ್ಗೆ ದೇಶಾದ್ಯಂತ ಚರ್ಚೆ ನಡೆಯುತ್ತಿದೆ. ಅದರ ಜತೆಗೆ ರಾಜಕೀಯ ಕೂಡ ನಡೆಯುತ್ತಿದೆ. ಈ ಯೋಜನೆಗೆ ಅಗತ್ಯವಿರುವ ಅಕ್ಕಿಯನ್ನು ನೀಡಿ ಕೇಂದ್ರ ಸರ್ಕಾರ ತನ್ನ ಹೃದಯ ಶ್ರೀಮಂತಿಕೆ ಮೆರೆಯಬಹುದಿತ್ತು. ಆದರೆ ಅವರು ಅದನ್ನು ಮಾಡಲಿಲ್ಲ.

ಈ ಸಂದರ್ಭದಲ್ಲಿ ಬಿಜೆಪಿ ಸ್ನೇಹಿತರಿಗೆ ಒಂದು ಮಾತು ಹೇಳಬಯಸುತ್ತೇನೆ. ಆಹಾರ ಭದ್ರತೆ ಕಾಯ್ದೆ ತಂದವರು ಯಾರು? ಏಕೆ ತಂದರು ಎಂದು ಅರಿಯಬೇಕು. ದೇಶವನ್ನು ಹಸಿವುಮುಕ್ತ ಮಾಡುವ ಉದ್ದೇಶದಿಂದ ಯುಪಿಎ ಸರ್ಕಾರ ಆಹಾರ ಭದ್ರತಾ ಕಾಯ್ದೆ ಜಾರಿ ಮಾಡಿ ಬಡ ಜನರಿಗೆ ಆಹಾರ ಧಾನ್ಯ ನೀಡುವುದನ್ನು ಸಂವಿಧಾನದ ಹಕ್ಕಾಗಿ ತಂದಿದ್ದನ್ನು ನೆನಪಿಸಿಕೊಳ್ಳಬೇಕು ಎಂದು ಹೇಳಿದರು.

ಸೋನಿಯಾ ಗಾಂಧಿ ಅವರು ಯುಪಿಎ ಅಧ್ಯಕ್ಷೆಯಾಗಿ, ಮನಮೋಹನ್ ಸಿಂಗ್ ಅವರು ಪ್ರಧಾನಮಂತ್ರಿ ಆಗಿದ್ದಾಗ ಇದನ್ನು ಜಾರಿಗೆ ತರಲಾಗಿತ್ತು. ಆದರೆ ಬಿಜೆಪಿಯ ಕೇಂದ್ರ ಸರ್ಕಾರ ಬಡವರಿಗೆ ಅಕ್ಕಿ ಯೋಜನೆ ಜಾರಿ ಮಾಡಿದೆ ಎಂದು ಕೆಲವರು ಜನರನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ಇದು ಯುಪಿಎ ಸರ್ಕಾರದ ಯೋಜನೆ ಎಂಬುದು ಸತ್ಯ. ನಮ್ಮ ರಾಜ್ಯದಲ್ಲಿ ಮಾತ್ರ ಅನ್ನಭಾಗ್ಯ ಯೋಜನೆ ಮೂಲಕ ಜನರಿಗೆ ಉಚಿತವಾಗಿ ಅಕ್ಕಿ ನೀಡಿ, ರಾಜ್ಯವನ್ನು ಹಸಿವುಮುಕ್ತ ಮಾಡುವ ಪ್ರಯತ್ನ ನಡೆದಿದೆ. ದೇಶದ ಬೇರೆ ಯಾವುದೇ ರಾಜ್ಯದಲ್ಲಿ ಈ ರೀತಿ ಜಾರಿ ಮಾಡಿಲ್ಲ ಎಂದು ತಿಳಿಸಿದರು.

ಈಗ ನಾವು ಕೊಟ್ಟ ಮಾತಿನಂತೆ ಅನ್ನಭಾಗ್ಯ ಯೋಜನೆ ಜಾರಿ ಮಾಡಿದ್ದೇವೆ. 10 ಕೆ.ಜಿ ಅಕ್ಕಿ ನೀಡುವವರೆಗೂ ಹೆಚ್ಚುವರಿ ಐದು ಕೆ.ಜಿ ಅಕ್ಕಿಯ ಹಣವನ್ನು ಜನರಿಗೆ ನೀಡಲು ಸರ್ಕಾರ ತೀರ್ಮಾನಿಸಿದ್ದು, ಇಂದು ಫಲಾನುಭವಿಗಳಿಗೆ ಹಣ ನೀಡುತ್ತಿದ್ದೇವೆ. ಪ್ರತಿ ನಿತ್ಯ ನಾಲ್ಕೈದು ಜಿಲ್ಲೆಯ ಫಲಾನುಭವಿಗಳ ಖಾತೆಗೆ ಹಣ ಜಮಾವಣೆ ಆಗಲಿದೆ ಎಂದರು.

ನಾವು ಬಸವಣ್ಣನ ನಾಡಿನವರು, ನುಡಿದಂತೆ ನಡೆದಿದ್ದೇವೆ. ನಾನು ಈ ಹಿಂದೆ ಹೇಳಿದ್ದಂತೆ 200 ಯೂನಿಟ್ ಉಚಿತ, 2 ಸಾವಿರ ಖಚಿತ 10 ಕೆ.ಜಿ ಅಕ್ಕಿ ನಿಶ್ಚಿತ ಎಂಬುದನ್ನು ಮಾಡಿದ್ದೇವೆ. ನಮ್ಮ ಈ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ. ನಾವು ಈ ಅನ್ನಭಾಗ್ಯ ಯೋಜನೆಯನ್ನು ಯಾವ ರೀತಿ ಜಾರಿಗೆ ತರುತ್ತಿದ್ದೇವೆ ಎಂಬುದರ ಬಗ್ಗೆ ವಿವಿಧ ರಾಜ್ಯಗಳ ವಿವಿಧ ಪಕ್ಷಗಳ ನಾಯಕರು ಮಾಹಿತಿ ಪಡೆಯುತ್ತಿದ್ದಾರೆ ಎಂದರು.

ದೇಶದಲ್ಲಿ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ನೆರವಾಗಲು ನಮ್ಮ ಐದು ಗ್ಯಾರಂಟಿ ಯೋಜನೆಗಳಿಂದ ಪ್ರತಿ ತಿಂಗಳು ಪ್ರತಿ ಕುಟುಂಬಕ್ಕೆ 4-5 ಸಾವಿರ ರೂಪಾಯಿಯಷ್ಟು ನೆರವಾಗಲಿದೆ. ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕ ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನರಿಗೆ ಈ ರೀತಿ ನೆರವು ನೀಡುತ್ತಿದೆ. ಆಹಾರ ಸಚಿವರ ನೇತೃತ್ವದಲ್ಲಿ ಈ ಯೋಜನೆಯನ್ನು ಬಹಳ ಉತ್ತಮವಾಗಿ ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು