NEWSದೇಶ-ವಿದೇಶವಿದೇಶ

ಅಫ್ಘಾನಿಸ್ತಾನದಿಂದ ಅಮೆರಿಕ ಸೈನ್ಯ ಹಿಂತೆಗೆತ ಅತ್ಯುತ್ತಮ ನಿರ್ಧಾರ: ಬೈಡನ್ ಸಮರ್ಥನೆ

ವಿಜಯಪಥ ಸಮಗ್ರ ಸುದ್ದಿ

ವಾಷಿಂಗ್ಟನ್:  ಮಂಗಳವಾರ ಅಮೆರಿಕದ ಕೊನೆಯಯುದ್ಧ ವಿಮಾನವು ಕಾಬೂಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಾರುವುದರೊಂದಿಗೆ 2001ರಿಂದ ಅಫ್ಘಾನಿಸ್ತಾನದಲ್ಲಿ ಅಮೆರಿಕವು ನಡೆಸುತ್ತಿದ್ದ ಎರಡು ದಶಕಗಳಯುದ್ಧವು ಕೊನೆಗೊಂಡಿದೆ.

ಅಮೆರಿಕದ ಪ್ರಮುಖ ರಾಷ್ಟ್ರೀ ಯ ಹಿತಾಸಕ್ತಿಗೆ ವಿರುದ್ಧವಾದ ಯುದ್ಧದಲ್ಲಿ ಮುಂದುವರಿಯುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್   ಹೇಳಿದ್ದಾರೆ.

ಈ ಮೂಲಕ ಅಫ್ಘಾನಿಸ್ತಾನದಿಂದ 20 ವರ್ಷಗಳ ಯುದ್ಧವನ್ನು ಕೊನೆಗೊಳಿಸಿ ಸೈನ್ಯವನ್ನು ಹಿಂತೆಗೆದುಕೊಂಡಿರುವುದು ಅತ್ಯುತ್ತಮ ಮತ್ತು ಸರಿಯಾದ ನಿರ್ಧಾರ ಎಂದು ಬೈಡನ್   ಸಮರ್ಥಿಸಿ ಕೊಂಡಿದ್ದಾರೆ.

ನಾನು ನನ್ನ ಮನಪೂರ್ವಕವಾಗಿ ಇದನ್ನು ಹೇಳುತ್ತಿದ್ದೇ ನೆ. ಇದು ಸರಿಯಾದ, ವಿವೇಚನೆಯ ನಿರ್ಧಾರ. ಅಮೆರಿಕದ ಪಾಲಿಗೆ ಅತ್ಯುತ್ತಮ ನಿರ್ಣಯ ಎಂದು ಭಾವಿಸುತ್ತೇನೆ ಎಂದು  ಶ್ವೇತ ಭವನದಲ್ಲಿ ರಾಷ್ಟ್ರವನ್ನು ಉದ್ದೇ ಶಿಸಿ ಮಾಡಿದ ಭಾಷಣದ ವೇಳೆ ತಿಳಿಸಿದ್ದಾರೆ.

ಅಮೆರಿಕ ಅಧ್ಯ ಕ್ಷ ಸ್ಥಾನಕ್ಕೆ ಸ್ಪರ್ಧಿಸುವಾಗ ಈಯುದ್ಧವನ್ನು ಕೊನೆಗೊಳಿಸುವುದಾಗಿ ಅಮೆರಿಕದ ಜನರಿಗೆ ಭರವಸೆಯನ್ನು ಕೊಟ್ಟಿದ್ದೇನೆ.

ನಾನು ಆ ಬದ್ಧತೆಯನ್ನು ಗೌರವಿಸುತ್ತೇನೆ. ಇದು ಅಮೆರಿಕದ ಜನರೊಂದಿಗೆ ಪ್ರಾಮಾಣಿಕವಾಗಿರುವ ಸಮಯ. ಇನ್ನು ಮುಂದೆ ಅಫ್ಘಾನಿಸ್ತಾನದಲ್ಲಿ ಮುಕ್ತ ಕಾರ್ಯಾಚರಣೆಯಲ್ಲಿ ನಾವು ಯಾವುದೇ ಸ್ಪಷ್ಟವಾದ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ.

ಜಗತ್ತು ಬದಲಾಗುತ್ತಿದ್ದು, ಅಮೆರಿಕ ಹೊಸ ಸವಾಲುಗಳನ್ನು ಎದುರಿಸುತ್ತಿದೆ. ಚೀನಾದಿಂದ ತೀವ್ರ ಸ್ಪರ್ಧೆಯನ್ನು ಎದುರಿಸುತ್ತಿದ್ದೇ ವೆ. ರಷ್ಯಾ ದಿಂದಲೂ ಅನೇಕ ಕ್ಷೇತ್ರ ಗಳಲ್ಲಿ ಸ್ಪರ್ಧೆ ಎದುರಾಗಿದೆ. ಸೈಬರ್ ದಾಳಿ ಮತ್ತು ಪರಮಾಣು ಪ್ರಸರಣದ ಸವಾಲುಗಳು ನಮ್ಮ ಮುಂದಿದೆ ಎಂದು ಹೇಳಿದ್ದಾರೆ.

ಏತನ್ಮಧ್ಯೆ ಭಯೋತ್ಪಾದನೆ ಬೆದರಿಕೆಯು ಕೇವಲ ಅಫ್ಘನ್‌ಗಷ್ಟೇ ಸೀಮಿತ ಅಲ್ಲ. ಜಗತ್ತಿನಾದ್ಯಂತ ಹರಡಿದೆ ಎಂದವರು ಸೇನೆಯ ನಿರ್ಗಮನವನ್ನು ಸಮರ್ಥಿಸಿದ್ದಾರೆ.

ಅಫ್ಘನ್‌ನಲ್ಲಿ 20 ವರ್ಷಗಳ ನಂತರ ಅಮೆರಿಕದ ಇನ್ನೊಂದು ತಲೆಮಾರಿನ ಗಂಡು ಹಾಗೂ ಹೆಣ್ಣು ಮಕ್ಕಳನ್ನು ಯುದ್ಧಕ್ಕೆ ಕಳುಹಿಸುವುದನ್ನು ನಿರಾಕರಿಸಿದ್ದೇನೆ. ಬಹಳ ಹಿಂದೆ ಈಯುದ್ಧ ಕೊನೆಗೊಳ್ಳಬೇಕಿತ್ತು ಎಂದು ಹೇಳಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ