NEWSದೇಶ-ವಿದೇಶರಾಜಕೀಯ

ಅಬಕಾರಿ ನೀತಿ ನೆಪಹೇಳಿ ನನ್ನನ್ನು 3-4 ದಿನದಲ್ಲಿ ಬಂಧಿಸುವ ಸಾಧ್ಯತೆ ಇದೆ : ದೆಹಲಿ ಡಿಸಿಎಂ ಸಿಸೋಡಿಯಾ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಅಬಕಾರಿ ನೀತಿಯ ಕಾರಣದ ನೆಪ ಹೇಳಿಕೊಂಡು ವಿವಾದವನ್ನು ಕೆಲವರು ಸೃಷ್ಟಿಸಿದ್ದಾರೆ ಎಂದು ಬಿಜೆಪಿ ಹೆಸರೇಳದೆ ದೆಹಲಿ ಡಿಸಿಎಂ ಮತ್ತು ಶಿಕ್ಷಣ ಸಚಿವ ಮನೀಶ್ ಸಿಸೋಡಿಯಾ ಪರೋಕ್ಷವಾಗಿ ಗುಡುಗಿದ್ದಾರೆ.

ತಮ್ಮ ವಿರುದ್ಧ ನಡೆದ ಸಿಬಿಐ ದಾಳಿಗೆ ಸಂಬಂಧಿಸಿದಂತೆ ಆಯೋಜಿಸಿದ್ದ ಸುದ್ದಿಗೋಷ್ಠಿ ಮಾತನಾಡಿದ ಅವರು, ಅಬಕಾರಿ ನೀತಿ ಇದು ದೇಶದ ಅತ್ಯುತ್ತಮ ನೀತಿಯಾಗಿದೆ. ನಾವು ಅದನ್ನು ಪಾರದರ್ಶಕತೆ ಮತ್ತು ಪ್ರಾಮಾಣಿಕತೆಯಿಂದ ಅನ್ವಯಿಸುತ್ತಿದ್ದೇವೆ. ಹೀಗಾಗಿ ಇದನ್ನು ಸಹಿಸಿಕೊಳ್ಳಲಾಗದವರು ಏನೇನೋ ಪ್ರಯೋಗ ಮಾಡುತ್ತಿರುತ್ತಾರೆ ಎಂದು ಹೇಳಿದರು.

ಇನ್ನು ಅಬಕಾರಿ ನೀತಿ ಸಂಬಂಧ ಬಹುಶಃ 3-4 ದಿನಗಳಲ್ಲಿ ಸಿಬಿಐ-ಇಡಿ ಅಧಿಕಾರಿಗಳು ನನ್ನನ್ನು ಬಂಧಿಸುವ ಸಾಧ್ಯತೆಯಿದೆ. ಆದರೆ ನಾವು ಯಾವುದಕ್ಕೂ ಹೆದರುವುದಿಲ್ಲ, ನಮ್ಮನ್ನು ಒಡೆಯಲು ಸಾಧ್ಯವಿಲ್ಲ ಎಂದರು.

ಇನ್ನು ಶುಕ್ರವಾರ (ನಿನ್ನೆ) ನನ್ನ ನಿವಾಸಕ್ಕೆ ಸಿಬಿಐ ಅಧಿಕಾರಿಗಳು ಬಂದಿದ್ದರು. ಶಿಕ್ಷಣ ಇಲಾಖೆಯ ಕಚೇರಿ ಮೇಲೂ ದಾಳಿ ನಡೆಸಿದ್ದಾರೆ. ಎಲ್ಲ ಅಧಿಕಾರಿಗಳು, ಎರಡೂ ಸ್ಥಳಗಳಲ್ಲಿ ಅಧಿಕಾರಿಗಳು ತುಂಬಾ ಚೆನ್ನಾಗಿ ವರ್ತಿಸಿದರು. ಅವರು ಹೈಕಮಾಂಡ್‍ನ ಆದೇಶಗಳನ್ನು ಪಾಲಿಸಬೇಕಾಗಿತ್ತು. ಆದರೆ, ತುಂಬಾ ಚೆನ್ನಾಗಿ ವರ್ತಿಸಿದ್ದಕ್ಕಾಗಿ ನಾನು ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಹೇಳಿದರು.

ಅಬಕಾರಿ ನೀತಿಯನ್ನು ವಿಫಲಗೊಳಿಸಲು ಸಂಚು ರೂಪಿಸಿ ದೆಹಲಿ ಎಲ್‍ಜಿ ತನ್ನ ನಿರ್ಧಾರವನ್ನು ಬದಲಾಯಿಸದಿದ್ದರೆ, ದೆಹಲಿ ಸರ್ಕಾರವು ಪ್ರತಿ ವರ್ಷ ಕನಿಷ್ಠ 10 ಸಾವಿರ ಕೋಟಿ ರೂಪಾಯಿಗಳನ್ನು ಪಡೆಯುತ್ತಿತ್ತು ಎಂದು ಎಲ್‍ಜಿ ವಿರುದ್ಧ ಸಿಸೋಡಿಯಾ ವಾಗ್ದಾಳಿ ನಡೆಸಿದರು.

ಅವರ ಸಮಸ್ಯೆ ಮದ್ಯ ಅಥವಾ ಅಬಕಾರಿ ಹಗರಣವಲ್ಲ ಅವರಿಗಿರುವುದು ಅರವಿಂದ್ ಕೇಜ್ರಿವಾಲ್ ಎಂಬ ನಿಷ್ಠ ಮುಖ್ಯಮಂತ್ರಿಯ ಸಮಸ್ಯೆ. ನನ್ನ ವಿರುದ್ಧದ ಸಂಪೂರ್ಣ ಪ್ರಕ್ರಿಯೆಗಳು, ನನ್ನ ನಿವಾಸ ಮತ್ತು ಕಚೇರಿ ಮೇಲೆ ದಾಳಿಗಳು, ಅರವಿಂದ್ ಕೇಜ್ರಿವಾಲ್ ಅವರನ್ನು ತಡೆಯಲು ಮಾಡಿದ ಸಂಚು ಎಂದು ಕಿಡಿಕಾರಿದರು.

ಇನ್ನು ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ, ನಾನು ಕೇವಲ ಅರವಿಂದ್ ಕೇಜ್ರಿವಾಲ್ ಅವರ ಸರ್ಕಾರದಲ್ಲಿ ಕೇಲವ ಶಿಕ್ಷಣ ಸಚಿವ ಅಷ್ಟೇ ಎಂದು ತಿಳಿಸಿದರು.

ದೆಹಲಿಯ ಶಿಕ್ಷಣ ಮಾದರಿಯನ್ನು ಅಮೆರಿಕದ ಅತಿದೊಡ್ಡ ಪತ್ರಿಕೆ ದಿ ನ್ಯೂಯಾರ್ಕ್ ಟೈಮ್ಸ್ ತನ್ನ ಮೊದಲ ಪುಟದಲ್ಲಿ ಪ್ರಕಟಿಸಿದೆ. ಇದು ಭಾರತಕ್ಕೆ ಒಂದು ಹೆಮ್ಮೆ. ಈ ಪತ್ರಿಕೆ ಸುಮಾರು 1.5 ವರ್ಷಗಳ ಹಿಂದೆ, ಗಂಗಾ ನದಿಯ ಉದ್ದಕ್ಕೂ ಸಾವಿರಾರು ದೇಹಗಳನ್ನು ಸುಡುತ್ತಿರುವುದನ್ನು ತೋರಿಸುವ ಮತ್ತೊಂದು ಕಥೆಯನ್ನು ಪ್ರಕಟಿಸಿತು, ಇದು ನಾಚಿಕೆಗೇಡಿನ ಸಂಗತಿ ಎಂದು ಬಿಜೆಪಿ ಸರ್ಕಾರದ ವಿರುದ್ಧ ಗುಡುಗಿದರು.

ಬಿಜೆಪಿ ನಾಯಕರು ಆಪ್ ಕಾರ್ಯಗಳಿಂದ ಹೆದರಿದ್ದಾರೆ. ಹೀಗಾಗಿ ನಮ್ಮನ್ನು ತಡೆಯುವ ಪ್ರಯತ್ನಗಳು ನಡೆಯುತ್ತಿದೆ. ಇದಕ್ಕೆ ನಾವು ಹೆದರುವುದಿಲ್ಲ, ಬಗ್ಗುವುದಿಲ್ಲ. ಮುಂಬರುವ 2024ರ ಲೋಕಸಭೆ ಚುನಾವಣೆ ಬಿಜೆಪಿ V/S ಆಪ್ ನಡುವೆ ಇರಲಿದೆ ಎಂದು ಎಚ್ಚರಿಕೆ ನೀಡಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ KSRTC ಬಸ್‌-ಬೈಕ್ ನಡುವೆ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್...