NEWSನಮ್ಮಜಿಲ್ಲೆ

ಅವಶ್ಯವಿದ್ದಲ್ಲಿ ಫೀವರ್ ಕ್ಲಿನಿಕ್ ಸಂಖ್ಯೆ ಹೆಚ್ಚಿಸಿ

ರಾಮನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಜೆ. ಜಗದೀಶ್ ಸಲಹೆ

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಜಿಲ್ಲೆಯಲ್ಲಿ 9 ಫೀವರ್ ಕ್ಲಿನಿಕ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಇಲ್ಲಿ ಬರುವವರ ಸಂಖ್ಯೆ ಹೆಚ್ಚಾದಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಫೀವರ್ ಕ್ಲಿನಿಕ್ ತೆರೆಯಲು ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಜೆ. ಜಗದೀಶ್ ತಿಳಿಸಿದರು.

ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್-19ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮಾಡಿಕೊಂಡಿರುವ ಸಿದ್ಧತೆಯ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದರು. ರೇಷ್ಮೆ ಮಾರುಕಟ್ಟೆಯಲ್ಲಿ ಹೆಚ್ಚಿನ ಜನಸಂದಣಿಯನ್ನು ನಿಯಂತ್ರಿಸಲು ಎರಡು ಛತ್ರಗಳನ್ನು ಗುರುತಿಸ ಬೇಕು.  ರೈತರ ಮನವೊಲಿಸಿ ನಿಗದಿಪಡಿಸಿರುವ ಛತ್ರದಲ್ಲಿ ವಹಿವಾಟು ನಡೆಸುವಂತೆ ನೋಡಿಕೊಳ್ಳಬೇಕು. ಛತ್ರದವರೊಂದಿಗೆ ಚರ್ಚಿಸಿ, ಅದರ ಬಾಡಿಗೆ ದರ ನಿಗದಿಮಾಡಿ ತಿಳಿಸಿದರೆ ಅದನ್ನು ಪಾವತಿಸಲು ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದ ಅವರು, ರೇಷ್ಮೆ ಮಾರುಕಟ್ಟೆಯಲ್ಲಿ ಜನಸಂದಣಿ ಉಂಟಾಗದಂತೆ ಎರಡು ಅಥವಾ ಮೂರು ಸ್ಥಳಗಳಲ್ಲಿ ಯೋಜಿತ ರೂಪದಲ್ಲಿ ವಹಿವಾಟು ನಡೆಸಲು ಅಧಿಕಾರಿಗಳನ್ನೊಳಗೊಂಡ ಉಪ ಸಮಿತಿ ರಚಿಸುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಜಿಲ್ಲೆಯಲ್ಲಿ ಆಹಾರ ಕೊರತೆಯಿಲ್ಲ ಸ್ಲಂಗಳಲ್ಲಿ ವಾಸಿಸುವವರು, ವಸಲಿಗರು ವಾಸಿಸಲು ಮನೆ ಇಲ್ಲದ ಬಡವರು ಇವರಿಗೆ ಲಾಕ್‌ಡೌನ್‌ನಿಂದ ಆಹಾರದ ಕೊರತೆ ಉಂಟಾದAತೆ ಅವರನ್ನು ಗುರುತಿಸಿ ಸರಿಯಾದ ರೀತಿಯಲ್ಲಿ ತಲುಪಿಸುವ ಕೆಲಸವಾಗಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಿರಂಜನ್ ಮಾತನಾಡಿ ಜಿಲ್ಲೆಯಲ್ಲಿ ಮಾಡಿಕೊಂಡಿರುವ ಕ್ವಾರಂಟೈನ್ ಸೆಂಟರ್, ಸೂಪರ್‌ವೈಸಡ್ ಐಸೋಲೇಷನ್ ಸೆಂಟರ್, ಕೋವಿಡ್ ಆಸ್ಪತ್ರೆ, ಐ.ಸಿ.ಯು., ವೆಂಟಿಲೇಟರ್ ಸಿದ್ಧತೆಗಳ ಬಗ್ಗೆ ಸಭೆಗೆ ವಿವರಿಸಿದರು.

ಆಹಾರ ಇಲಾಖೆ ಉಪನಿರ್ದೇಶಕ ಕೃಷ್ಣ ಕುಮಾರ್ ಮಾತನಾಡಿ ಜಿಲ್ಲೆಯಲ್ಲಿ 4459 ವಲಸಿಗ ಕಾರ್ಮಿಕರು ಮತ್ತು ಮನೆಯಿಲ್ಲದ ನಿರಾಶ್ರಿತರನ್ನು ಗುರುತಿಸಿ ಇವರಿಗೆ ಅವಶ್ಯಕವಿರುವ ಆಹಾರ ಕಿಟ್‌ಗಳನ್ನು ವಿತರಿಸಲಾಗಿದೆ. ಮನೆಯಿಲ್ಲದ ನಿರಾಶ್ರಿತರಿಗೆ ಇಂದಿರಾ ಕ್ಯಾಂಟೀನ್ ಮೂಲಕ ಊಟವನ್ನು ಒದಗಿಸಲಾಗುತ್ತಿದೆ ಎಂದರು.

ಜಂಟಿ ಕೃಷಿ ನಿರ್ದೇಶಕರಾದ ಕೆ.ಎಚ್. ರವಿ ಮಾತನಾಡಿ ರೈತರಿಗೆ ಬೇಕಿರುವ ಬಿತ್ತನೆ ಬೀಜ, ರಸಗೊಬ್ಬರಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ರೈತ ಸಂಪರ್ಕ ಕೇಂದ್ರಗಳನ್ನು ತೆರೆಯುವಂತೆ ಸೂಚನೆ ನೀಡಲಾಗಿದೆ ಎಂದರು.

ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಕ್ರಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪ್ ಶೆಟ್ಟಿ, ಅಪರ ಜಿಲ್ಲಾಧಿಕಾರಿ ಬಿ.ಪಿ ವಿಜಯ್, ಉಪವಿಭಾಗಾಧಿಕಾರಿ ದ್ರಾಕ್ಷಾಯಿಣಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ