ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ವಾಣಿಜ್ಯ ವಿಭಾಗದಲ್ಲಿ ಆಟೋ ಚಾಲಕರ ಪುತ್ರ ಚಿರಂಜೀವಿ ಟಿ.ಆರ್. 600ಕ್ಕೆ 529 ಅಂಕ ಪಡೆಯುವ ಮೂಲಕ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
vijayapatha.in - ವಿಜಯಪಥ.ಇನ್ ನಿಮಗೆ ವಿಶ್ವಾಸನೀಯ ಸುದ್ದಿಗಳನ್ನು ಪ್ರಸಾರ ಮಾಡುತ್ತಿದೆ ಎಂದು ಅನಿಸಿದರೆ ನಮಗೆ ಆರ್ಥಕವಾಗಿ ಬಲ ನೀಡಿ. ಇನ್ನಷ್ಟು ಸತ್ಯನಿಷ್ಠ ವರದಿಗಳನ್ನು ಮಾಡುವುದಕ್ಕೆ ಬೆಂಬಲ ನೀಡಿ. ಕನಿಷ್ಠ 100 ರೂ. ಒಮ್ಮೆಗೆ ಹಾಕಿ. ನಮ್ಮನ್ನು ಪ್ರೋತ್ಸಾಹಿಸಿ.
ಚಿರಂಜೀವಿ ಟಿ.ಆರ್. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ, ಬಾಗೂರು ಹೋಬಳಿಯ ತಿಮ್ಮಲಾಪುರ ಗ್ರಾಮದ ನಿವಾಸಿ ಹಾಗೂ ಪ್ರಸ್ತುತ ಬೆಂಗಳೂರಿನಲ್ಲಿ ಆಟೋ ಚಾಲಕರಾಗಿರುವ ರಂಗಸ್ವಾಮಿ ಮತ್ತು ಸುಜಾತ ದಂಪತಿಯ ಪುತ್ರ.
ಚಿರಂಜೀವಿ ಬೆಂಗಳೂರಿನ ಪೀಣ್ಯ 2ನೇ ಹಂತದ ಗುಡ್‌ವೀಲ್ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಬುಧವಾರ ಹೊರಬಿದ್ದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 529 ಅಂಕ ಪಡೆಯುವ ಮೂಲಕ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯೊಂದಿದ್ದಾರೆ.
ಈ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದು, ಇದೇ ಸಂದರ್ಭದಲ್ಲಿ ಪ್ರಾಂಶುಪಾಲರು, ಕಾಲೇಜಿನ ಆಡಳಿತ ಮಂಡಳಿ, ಪೋಷಕರು ಹರ್ಷ ವ್ಯಕ್ತಪಡಿಸಿದ್ದಾರೆ.
![](https://vijayapatha.in/wp-content/uploads/2024/02/QR-Code-VP-1-1-300x62.png)