NEWS

ಆದ್ಯತಾ ಪಡಿತರ ಚೀಟಿ  ಹೊಂದಿರುವ ಕುಟುಂಬದ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ

ಪ್ರತಿ ತಿಂಗಳು ಕುಟುಂಬಕ್ಕೆ 2ಕೆಜಿ ಗೋದಿ ನೀಡಲು ಆಯವ್ಯಯದಲ್ಲಿ ಘೋಷಣೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:   ರಾಜ್ಯದಲ್ಲಿ 2020-21ನೇ ಸಾಲಿನಿಂದ ಆದ್ಯತಾ ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬದ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ಹಾಗೂ ಪ್ರತಿ ಕುಟುಂಬಕ್ಕೆ 2 ಕೆಜಿ ಗೋದಿಯನ್ನು ಪ್ರತಿ ತಿಂಗಳು ನೀಡಲು ಆಯವ್ಯಯದಲ್ಲಿ ಘೋಷಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.

ವಿಧಾನಸಭೆಯಲ್ಲಿ  ಅರಕಲಗೂಡು ಶಾಸಕ ರಾಮಸ್ವಾಮಿ ಎ.ಟಿ ಅವರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದ ಸಚಿವರು 2019-20ನೇ ಸಾಲಿನಲ್ಲಿ ರಾಜ್ಯದಲ್ಲಿನ ಪಡಿತರ ಚೀಟಿದಾರರಿಗೆ ಸಾರ್ವಜನಿಕ ವಿತರಣಾ ಪದ್ದತಿಯಡಿ ಅಕ್ಕಿಯನ್ನು ವಿತರಿಸಲಾಗುತ್ತಿದೆ. ಅಂತ್ಯೋದಯ ಪಡಿತರ ಚೀಟಿಗೆ 35 ಕೆ.ಜಿ. ಅಕ್ಕಿಯನ್ನು ಹಾಗೂ ಆದ್ಯತಾ ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬದ ಪ್ರತಿ ಸದಸ್ಯನಿಗೆ 7 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿದೆ ಎಂದರು.

ಆದ್ಯತೇತರ ಪಡಿತರ ಚೀಟಿಯನ್ನು ಹೊಂದಿದ್ದು, ಪಡಿತರ ಧಾನ್ಯವನ್ನು ಪಡೆಯಲು ಸಹಮತಿಯನ್ನು ನೀಡಿರುವ ಏಕ ಸದಸ್ಯ ಪಡಿತರ ಕುಟುಂಬಕ್ಕೆ 5 ಕೆ.ಜಿ ಅಕ್ಕಿಯನ್ನು, ಇಬ್ಬರು ಹಾಗೂ ಅದಕ್ಕಿಂತ ಹೆಚ್ಚಿನ ಸದಸ್ಯರು ಹೊಂದಿರುವ ಪಡಿತರ ಕುಟುಂಬಕ್ಕೆ 10 ಕೆ.ಜಿ ಅಕ್ಕಿಯನ್ನು 15 ರೂ. ದರದಲ್ಲಿ ನೀಡಲಾಗುತ್ತಿದೆ ಎಂದು ತಿಳಿಸಿದರು.

KIA  ಮತ್ತು ಆನ್‍ಲೈನ್‍ನಲ್ಲಿ ಬಿದರಿ ಕಲಾಕೃತಿ ಮಾರಾಟ

ಭೌಗೋಳಿಕ ಗುರುತಿನ ನೋಂದಣಿ ಹೊಂದಿರುವ ರಾಜ್ಯದ ಬಿದರಿ ಕಲಾಕೃತಿಗಳನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತು ಆನ್‍ಲೈನ್ ಮುಖಾಂತರ ಮಾರಾಟ ಮಾಡುವ ಮೂಲಕ ಕರಕುಶಲ ಕಲೆಯ ಕುಶಲಕರ್ಮಿಗಳಿಗೆ ಹೆಚ್ಚಿನ ಮಾರುಕಟ್ಟೆ ಸೌಲಭ್ಯವನ್ನು ಒದಗಿಸಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಮುಜುರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.

ವಿಧಾನಪರಿಷತ್ತಿನಲ್ಲಿ ಸದಸ್ಯ ವಿಜಯ ಸಿಂಗ್ ಅವರ ಪ್ರಶ್ನೆಗೆ ಮುಖ್ಯ ಮಂತ್ರಿಗಳ ಪರವಾಗಿ ಉತ್ತರಿಸಿ ಮಾತನಾಡಿದ ಅವರು, ಬೀದರ್ ಜಿಲ್ಲೆಯಲ್ಲಿ ವಿಶ್ವವಿಖ್ಯಾತ ಬಿದ್ರಿ ಕಲೆಯಲ್ಲಿ ಸುಮಾರು 300 ಕುಟುಂಬಗಳು ತೊಡಗಿದ್ದು, ಇದರಲ್ಲಿ 108 ಕರಕುಶಲಕರ್ಮಿಗಳು ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದಲ್ಲಿ ನೋಂದಾಯಿಸಿಕೊಂಡಿದ್ದಾರೆ ಎಂದು ಹೇಳಿದರು.

ನಿಗಮದ ವತಿಯಿಂದ ಬಿದರಿ ಕರಕುಶಲಕರ್ಮಿಗಳಿಗೆ ನೀಡುತ್ತಿರುವ ಅನೇಕ ಸೌಲಭ್ಯಗಳ ಕುರಿತು ಸಬೆಗೆ  ಮಾಹಿತಿ ನೀಡಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ