ಬೆಂಗಳೂರು: ಒತ್ತಡದ ಬದುಕಿನ ನಡುವೆ ಆರೋಗ್ಯವು ಮುಖ್ಯ. ಹೀಗಾಗಿ ಸಾಧ್ಯವಾದಷ್ಟು ಆಧುನಿಕ ಜೀವನ ಶೈಲಿಯಿಂದ ಹೊರಬರಬೇಕು ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಬೆಂಗಳೂರು ವಿಜಯನಗರ ಶಾಖಾ ಮಠದ ಶ್ರೀ ಸೌಮ್ಯನಾಥ ಸ್ವಾಮೀಜಿ ಸಲಹೆ ನೀಡಿದ್ದಾರೆ.
ಒಕ್ಕಲಿಗ ಯುವ ಬ್ರೀಗೇಡ್ ಹಾಗೂ ಎನ್ಆರ್ಐ ಒಕ್ಕಲಿಗರ ಬ್ರಿಗೇಡ್ ವತಿಯಿಂದ ನಗರದ ಪ್ಯಾಲೆಸ್ ಗುಟ್ಟಹಳ್ಳಿಯಲ್ಲಿರುವ ಪ್ರತಿಷ್ಠಿತ ಬಿಲ್ವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಉತ್ತಮ ಆಹಾರ ಪದ್ಧತಿ ಅಳವಡಿಸಿಕೊಳ್ಳುವುದು ಹಾಗೂ ನಿತ್ಯ ಲವಲವಿಕೆಯಿಂದ ಇರುವ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ಈ ಬಗ್ಗೆ ಪ್ರತಿಯೊಬ್ಬರೂ ಹೆಚ್ಚಿನ ಕಾಳಜಿ ವಹಿಸುವುದು ಮುಖ್ಯ ಎಂದು ಹೇಳಿದರು.
ಸಾಮಾನ್ಯ ಜನರಿಗೆ ಉಚಿತ ಆರೋಗ್ಯ ಸೇವೆ ಮತ್ತು ಉದ್ಯೋಗ ಕಲ್ಪಿಸುವುದು ಅತ್ಯುತ್ತಮ ಕೆಲಸಗಳಲ್ಲಿ ಒಂದಾಗಿದೆ. ಮುಖ್ಯವಾಗಿ ವಿಶೇಷಚೇತನರು, ದಿವ್ಯಾಂಗರಿಗೆ ಉದ್ಯೋಗ ಕಲ್ಪಿಸಿ ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಒಕ್ಕಲಿಗ ಬ್ರಿಗೇಡ್ನ ಕಾರ್ಯ ಶ್ಲಾನೀಯ. ಇದಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.
4 ಸಾವಿರ ಉದ್ಯೋಗ ಕಲ್ಪಿಸುವ ಗುರಿ: ಕಳೆದ ವರ್ಷ ಸುಮಾರು 3 ಸಾವಿರ ಯುವಜನರಿಗೆ ಉಚಿತ ಉದ್ಯೋಗಾವಕಾಶ ಕಲ್ಪಿಸಿದ್ದು, ಸುಮಾರು 150 ಮಕ್ಕಳಿಗೆ ಉನ್ನತ ಶಿಣಕ್ಕೆ ದಾರಿ ಮಾಡಿಕೊಡಲಾಗಿದೆ. ಬೆಂಗಳೂರು, ಮೈಸೂರಿನಲ್ಲಿ ಉಚಿತ ಆರೋಗ್ಯ ಮೇಳವನ್ನು ಹಮ್ಮಿಕೊಂಡು ಗ್ರಾಮೀಣ ಜನರಿಗೆ ಸೇವೆ ಒದಗಿಸಲು ಸಹಕಾರ ನೀಡಿದ್ದೇವೆ.
ಈ ವರ್ಷ 4 ಸಾವಿರ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಗುರಿ ಹೊಂದಲಾಗಿದೆ. ಈಗಾಗಲೇ ತುಮಕೂರಿನಲ್ಲಿ ಉದ್ಯೋಗ ಮೇಳ ಆಯೋಜಿಸಿ 750 ಯುವಕರಿಗೆ ಉದ್ಯೋಗ ಲಭಿಸಿದೆ. ಮುಂದಿನ ಉದ್ಯೋಗ ಮೇಳ ಮೈಸೂರಿನ ಪಿರಿಯಾಪಟ್ಟಣದಲ್ಲಿ ಜುಲೈನಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಒಕ್ಕಲಿಗರ ಯುವ ಬ್ರಿಗೇಡ್ ಹಾಗೂ ಎನ್ಆರ್ಐ ಒಕ್ಕಲಿಗರ ಬ್ರಿಗೇಡ್ ಸಂಸ್ಥಾಪಕ ಅಧ್ಯ ನಂಜೇಗೌಡ ನಂಜುಂಡ ಮಾಹಿತಿ ನೀಡಿದರು.
ಮುಂದಿನ ದಿನಗಳಲ್ಲಿ ಬಡವರು, ಮಧ್ಯಮ ವರ್ಗದ ಜನರಿಗೂ ಗುಣಮಟ್ಟದ ಆರೋಗ್ಯ ಸೇವೆ ಕಲ್ಪಿಸಲಾಗುವುದು. ದೊಡ್ಡ ಮಟ್ಟದಲ್ಲಿ ಉಚಿತ ಆರೋಗ್ಯ ಮೇಳ ನಡೆಸುವ ಮೂಲಕ ವೈದ್ಯಕಿಯ ಸೇವೆ ಪ್ರತಿಯೊಬ್ಬರಿಗೂ ತಲುಪಿಸುವ ಕಾರ್ಯ ಮಾಡಲಾಗುವುದು ಎಂದು ಬಿಲ್ವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಡಾ. ಕೇಶವಮೂರ್ತಿ ತಿಳಿಸಿದರು.
ಒಕ್ಕಲಿಗರ ಯುವ ಬ್ರಿಗೇಡ್ ಹಾಗೂ ಎನ್ಆರ್ಐ ಒಕ್ಕಲಿಗರ ಬ್ರಿಗೇಡ್ ಸಂಸ್ಥಾಪಕ ಅಧ್ಯ ನಂಜೇಗೌಡ ನಂಜುಂಡ ಅವರನ್ನು ಸ್ವಾಮೀಜಿ ಸನ್ಮಾನಿಸಿದರು. ಹಿರಿಯ ಪತ್ರಕರ್ತ ರವೀಂದ್ರ ಭಟ್, ರಾಜ್ಯ ಸರ್ಕಾರದ ಮುಖ್ಯ ಇಂಜಿನಿಯರ್ ಬಿ. ಕೆ ಪವಿತ್ರ, ಮೈಸೂರು ವಿ.ವಿ ಸಿಂಡಿಕೇಟ್ ಸದಸ್ಯ ಡಾ. ಟಿ.ಆರ್. ಚಂದ್ರಶೇಖರ್, ನಿವೃತ್ತ ಪ್ರಾಂಶುಪಾಲ ನಂಜುಂಡಯ್ಯ, ಬಿಲ್ವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಡಾ.ಕೇಶವಮೂರ್ತಿ, ಖ್ಯಾತ ಸಿರೋಗ ತ ಡಾ. ಗೋಪಿನಾಥ್ ಮತ್ತಿತರರಿದ್ದರು.
ನೂರಾರು ಮಂದಿಗೆ ಸಾಮಾನ್ಯ ವೈದ್ಯಕಿಯ ಪರೀಕ್ಷೆ, ದಂತ, ನರ ಮತ್ತು ಮಾನಸಿಕ ಪರೀಕ್ಷೆ, ಮಕ್ಕಳ ತರು, ಚರ್ಮರೋಗ, ಸಿರೋಗ, ಮೂಳೆ ತಜ್ಞರಿಂದ ಉಚಿತವಾಗಿ ಆರೋಗ್ಯ ತಪಾಸಣೆ ನಡೆಸಲಾಯಿತು. ಈ ವೇಳೆ ಉಚಿತ ಔಷಧಗಳನ್ನು ವಿತರಿಸಲಾಯಿತು.