NEWSಕೃಷಿ

ಆಲಿಕಲ್ಲು ಮಳೆಗೆ ಭತ್ತ ಹಾನಿ: ರೈತರಿಗೆ ಪರಿಹಾರದ ಭರವಸೆ

ಅನ್ನದಾತರ ಹೊಲ ಗದ್ದೆಗಳಿಗೆ ಭೇಟಿ ನೀಡಿದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ 

ವಿಜಯಪಥ ಸಮಗ್ರ ಸುದ್ದಿ

ರಾಯಚೂರು: ಇತ್ತೀಚಿಗೆ ಸುರಿದ ಅಲಿಕಲ್ಲು ಮಳೆಯಿಂದ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಭತ್ತ ಹಾನಿಯಾಗಿದ್ದು, ಈಗಾಗಲೇ ಕಂದಾಯ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ನೀಡಿದ್ದಾರೆ. ಭತ್ತ ಹಾನಿಯಾದ ರೈತರಿಗೆ ಪರಿಹಾರ ನೀಡಲಾಗುತ್ತದೆ. ರಾಜ್ಯದಲ್ಲಿ ಕೊರೊನಾ ಇರುವುದರಿಂದ ಆರ್ಥಿಕ ಪರಿಸ್ಥಿತಿಯನ್ನು ಪರಿಶೀಲಿಸಿ ರೈತರಿಗೆ ಪ್ರತಿ ಎಕರೆಗೆ ಪರಿಹಾರ ನೀಡಲು ದರ ನಿಗದಿಪಡಿಸಲಾಗುತ್ತದೆ ರಾಜ್ಯದ ಉಪ ಮುಖ್ಯಮಂತ್ರಿ, ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಹೇಳಿದರು.

ಸೋಮವಾರ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಸತ್ಯನಾರಾಯಣ, ಮಾರ್ಕಂಡಯ್ಯ ಮತ್ತು ಆದಪ್ಪ ಅವರ ಹೊಲಕ್ಕೆ ಭೇಟಿ ನೀಡಿ ಆಲಿಕಲ್ಲು ಮಳೆಯಿಂದಾಗಿ ಹಾನಿಗೀಡಾದ ಭತ್ತದ ಬೆಳೆಯನ್ನು ಪರಿಶೀಲಿಸಿ, ಸಂಬಂಧಿಸಿದ ರೈತರೊಂದಿಗೆ ಸಮಸ್ಯೆ ಕುರಿತು ಚರ್ಚಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ಕರ್ನಾಟಕ ಸಾರಿಗೆ ಸಂಸ್ಥೆಯು ೨೦೧೪ ರಿಂದಲೂ ಇದುವರೆಗೂ ಅಪಾರ ನಷ್ಟದಲ್ಲಿದ್ದರೂ ಸಿಬ್ಬಂದಿಗೆ ವೇತನ ಪಾವತಿಸಲಾಗುತ್ತದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಡಿಸೇಲ್ ಬೆಲೆ ಏರಿಕೆ ಮತ್ತು ಟಿಕೇಟ್ ದರ ಹೆಚ್ಚಳ ಮಾಡದೆ ಇರುವುದರಿಂದ ಸಾರಿಗೆ ಇಲಾಖೆ ಸುಮಾರು ೧ ಸಾವಿರ ಕೋಟಿ ರೂ ನಷ್ಟದಲ್ಲಿದೆ. ಇಲಾಖೆಗೆ ೩೪೬ ಕೋಟಿ ರೂ ಅನುದಾನ ನೀಡುವಂತೆ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದಕ್ಕೆ ಸ್ಪಂದಿಸಿದ ಸರ್ಕಾರ 140 ಕೋಟಿ ರೂ ಅನುದಾನ ಬಿಡುಗಡೆ ಮಾಡಿದ್ದು, ಸಿಬ್ಬಂದಿ ವೇತನ ಪಾವತಿಗೆ ಉಪಯೋಗಿಸಿಕೊಳ್ಳಲಾಗುವುದು ಎಂದರು.

ಶೇ.12 ರಷ್ಟು ಟಿಕೆಟ್ ದರ ಹೆಚ್ಚಳ ಮಾಡಿರುವುದನ್ನು ಸಾರ್ವಜನಿಕು ಸ್ವಾಗತಿಸಿದ್ದಾರೆ. ಕೋವಿಡ್-19 ಪರೀಕ್ಷಾ ಪ್ರಯೋಗಲ್ಯಾಬ್ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಪ್ರಾರಂಭಿಸುವಂತೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. ಆದರೆ ರಾಜ್ಯ ಸರ್ಕಾರ ಕೋರೊನಾ ಸೋಂಕು ಪತ್ತೆಯಾಗಿರುವ ಜಿಲ್ಲೆಗಳಲ್ಲಿ ಲ್ಯಾಬ್ ಆರಂಭಿಸಲು ಪ್ರಥಮ ಆದ್ಯತೆ ನೀಡಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿಯು ಲ್ಯಾಬ್ ಆರಂಭಿಸಲಾಗುತ್ತದೆ ಎಂದರು.

ರಾಜ್ಯದಲ್ಲಿ ಲಾಕೌಡೌನ್ ಇದೇ ಮೇ 15ರ ವರೆಗೆ ವಿಸ್ತರಣೆ ಮಾಡುವ ಬಗ್ಗೆ ಈ ಕುರಿತು ತೀರ್ಮಾನ ತೆಗೆದುಕೊಳ್ಳಲಾಗುವುದು. ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರು ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಲಾಕ್‌ಡೌನ್ ವಿಸ್ತರಣೆ ಬಗ್ಗೆ ಆಯಾ ರಾಜ್ಯಗಳ ಮುಖ್ಯಮಂತ್ರಿಗಳ ಅಭಿಪ್ರಾಯ ಪಡೆದುಕೊಂಡಿದ್ದಾರೆ. ಈಗಾಗಲೇ ದೆಹಲಿ, ಪಶ್ಚಿಮ ಬಂಗಾಳ, ತೆಲಂಗಾಣ, ಮಧ್ಯಪ್ರದೇಶ, ಅರುಣಚಲ ಪ್ರದೇಶ ಸೇರಿದಂತೆ ಇನ್ನಿತರ ಹಲವು ರಾಜ್ಯಗಳು ಮೇ. 15ರ ವರೆಗೆ ಲಾಕ್‌ಡೌನ್ ವಿಸ್ತರಿಸುವಂತೆ ಮನವಿ ಮಾಡಿದ್ದಾರೆ ಎಂದು ವಿವರಿಸಿದರು.

ರಾಜ್ಯದಲ್ಲಿ ಲಾಕ್‌ಡೌನ್ ವಿಸ್ತರಣೆ ಮಾಡುವ ಬಗ್ಗೆ ಪ್ರಧಾನ ಮಂತ್ರಿಗಳ ಸಲಹೆ ಸೂಚನೆಗಳನ್ನು ಪಡೆದು ತೀರ್ಮಾನಿಸಲಾಗುತ್ತದೆ. ನಾಳೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಚಿವರ ಸಭೆ ನಡೆಯಲಿದೆ. ಅಲ್ಲಿ ಲಾಕ್‌ಡೌನ್ ವಿಸ್ತರಣೆ ಬಗ್ಗೆ ಎಲ್ಲ ಸಚಿವರ ಅಭಿಪ್ರಾಯ ಪಡೆದ ನಂತರ ಮುಖ್ಯಮಂತ್ರಿಗಳು ತೀರ್ಮಾನ ತೆಗೆದುಕೊಳ್ಳುವರು ಎಂದು ಉಪ ಮುಖ್ಯಮಂತ್ರಿಗಳು ತಿಳಿಸಿದರು.

ಸಂಸದ ಕರಡಿ ಸಂಗಣ್ಣ, ಶಾಸಕರಾದ ಕೆ. ಶಿವನಗೌಡ ನಾಯಕ್, ರಾಜಾ ವೆಂಕಟಪ್ಪ ನಾಯಕ್, ಡಾ.ಶಿವರಾಜ ಪಾಟೀಲ, ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಜಿ., ರಾಯಚೂರು ಸಹಾಯಕ ಆಯುಕ್ತ ಸಂತೋಷ್ ಕಾಮಗೌಡ, ತಹಸೀಲ್ದಾರ್ ಶೃತಿ, ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಭ್ರಷ್ಟಾಚಾರ, ಕಮಿಷನ್‌ ದಂಧೆ ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಕೊಟ್ಟು ಹಣ ಉಳಿಯುತ್ತದೆ : ಎಎಪಿ ಜೂ.24ರಂದು ಶಿವಮೊಗ್ಗದಲ್ಲಿ ರಾಷ್ಟ್ರ, ರಾಜ್ಯ ರೈತ ಮುಖಂಡರ ಸಮಾವೇಶ: ಕುರುಬೂರ್ ಶಾಂತಕುಮಾರ್ ಸಂತ್ರಸ್ತೆ ಅಪರಹರಣ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು KSRTCಯಿಂದ 300ಕ್ಕೂ ಹೆಚ್ಚು ಹೊಸ ಮಾರ್ಗಗಳಲ್ಲಿ ಬಸ್‌ ಓಡಾಟ: ಸಚಿವ ರಾಮಲಿಂಗಾರೆಡ್ಡಿ BMTC: 50ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್​​ಗಳ ಚಾಲಕರಿಗೆ ಗೇಟ್‌ಪಾಸ್‌ ಅತ್ಯಾಚಾರ ಆರೋಪಿ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನ ಎಸ್‌ಐಟಿ ಕಸ್ಟಡಿ ಅಂತ್ಯ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ವಿರೋಧಿಸಿ ನಾಳೆ ರಾಜ್ಯಾದ್ಯಂತ ಎಎಪಿ ಪ್ರತಿಭಟನೆ ನಟ ದರ್ಶನ್‌ ಸ್ಥಿತಿಗೆ ಮರುಗಿ ಅಭಿಮಾನಿ ಅನ್ನನೀರು ಬಿಟ್ಟು ಆತ್ಮಹತ್ಯೆಗೆ ಶರಣು? KSRTC ‘ಅಶ್ವಮೇಧ’ಗಳಿಂದ ಸಂಸ್ಥೆಗೆ ಶೇ.10ಕ್ಕೂ ಹೆಚ್ಚು ಲಾಭ : ಸಚಿವ ರಾಮಲಿಂಗಾರೆಡ್ಡಿ ಅತೀ ಶೀಘ್ರದಲ್ಲೇ NWKRTC ಒಡಲು ಸೇರಲಿವೆ 350 ಹೊಸ ಎಲೆಕ್ಟ್ರಿಕ್​ ಬಸ್‌ಗಳು