NEWSನಮ್ಮಜಿಲ್ಲೆ

ಇಂದಿನಿಂದ ಮಂಡ್ಯ ಜಿಲ್ಲೆಯಾದ್ಯಂತ ಬೇಕರಿ, ಸಲೂನ್ ಓಪನ್‌

ಕೊರೊನಾ ಸೋಂಕಿತರು ಪತ್ತೆಯಾಗಿಲ್ಲ ಎಂದು ಲಾಕ್ ​ಡೌನ್ ಸಡಿಲಿಸಿದ ಜಿಲ್ಲಾಧಿಕಾರಿ ವೆಂಕಟೇಶ್‌

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ದೇಶಾದ್ಯಂತ ಲಾಕ್​ಡೌನ್​ ಮತ್ತಷ್ಟು ಬಿಗಿಗೊಳ್ಳುತ್ತಿದೆ ಆದರೆ ಮಂಡ್ಯದಲ್ಲಿ ಯಾವುದೇ ಕೊರೊನಾ ಪೀಡಿತರು ಪತ್ತೆಯಾಗಿಲ್ಲ ಎಂಬ ಒಂದೇ ಒಂದು ಕಾರಣವನ್ನಿಟ್ಟುಕೊಂಡು ಲಾಕ್‌ಡೌನ್‌ ಸಡಿಲಗೊಳಿಸಲು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್​​ ಆಲೋಚಿಸಿದ್ದಾರೆ.

ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಪತ್ತೆಯಾಗಿಲ್ಲ ಎಂದು ಮಂಡ್ಯ ಜಿಲ್ಲಾಡಳಿತ ಹಂತ ಹಂತವಾಗಿ ಲಾಕ್ ​ಡೌನ್ ಸಡಿಲಗೊಳಿಸಲು ಮುಂದಾಗಿದ್ದು, ಕೆಲವು ಷರತ್ತುಗಳನ್ನು ವಿಧಿಸಿ ಶನಿವಾರಂದಿ ಬೇಕರಿ, ಸಲೂನ್ ತೆರೆಯಲು ಅನುಮತಿಯನ್ನೂ ನೀಡಿದೆ.

ಒಂದಷ್ಟು ಸಲಹೆಗಳನ್ನು ನೀಡಿದ್ದು, ಬೇಕರಿಯಲ್ಲಿ ಮಾಸ್ಕ್​ ಮತ್ತು ಹ್ಯಾಂಡ್​ ಗ್ಲೌಸ್​ ಬಳಸುವುದು ಕಡ್ಡಾಯ ಎಂದು ಸೂಚನೆ ನೀಡಿದ್ದಾರೆ.  ಜಿಲ್ಲೆಯಲ್ಲಿ ಮಾಂಸ ಮಾರಾಟದ ಮೇಲಿದ್ದ ನಿರ್ಬಂಧವನ್ನು ನಿನ್ನೆಯಿಂದ ಸಡಿಲಿಸಿ ಕೋಳಿ, ಕುರಿ, ಮೇಕೆ, ಮೀನು ಮಾಂಸ ಮಾರಾಟ ನಡೆಸಲಾಗುತ್ತಿದೆ.

ಇದೀಗ ಬೇಕರಿ ಹಾಗೂ ಸಲೂನ್ ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಜಿಲ್ಲಾಡಳಿತದ ಈ ಕ್ರಮ ಜನರಲ್ಲಿ ಆತಂಕ ಮೂಡಿಸಿದೆ.  ಮೈಸೂರಿನಲ್ಲಿ ಕೊರೊನಾ ಪೀಡಿತರ ಸಂಖ್ಯೆ ಏರುತ್ತಿದೆ. ಇಂಥ ವೇಳೆಯಲ್ಲಿ ಮೈಸೂರಿನ ಪಕ್ಕದ ಜಿಲ್ಲೆಯಲ್ಲಿ ಸಲೂನ್, ಬೇಕರಿ ತೆರೆಯಲು ಅನುಮತಿ ಕೊಟ್ಟಿರುವುದು  ಭಯದ ವಾತಾವರಣಕ್ಕೂ ಎಡೆಮಾಡಿಕೊಟ್ಟಿದೆ.

ಈ ನಿಯಮ ಸಡಿಲಿಕೆಯಿಂದ ಜನ ಗುಂಪಾಗಿ ಸೇರುವ ಸಾಧ್ಯತೆಯೇ ಹೆಚ್ಚಿದ್ದು, ಮುಂಜಾಗ್ರತೆ ವಹಿಸದಿದ್ದರೆ ಸೋಂಕಿನಿಂದ ಪಾರಾಗುವುದು ಕಷ್ಟ ಎಂಬುದನ್ನು ಜಿಲ್ಲಾಡಳಿತ ಸೂಕ್ಷ್ಮವಾಗಿ ಅರ್ಥಮಾಡಿಕೊಳ್ಳಬೇಕು ಎಂಬುವುದು ಪ್ರಜ್ಞಾನವಂತರ ಅಭಿಪ್ರಾಯವಾಗಿದೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ