NEWSನಮ್ಮಜಿಲ್ಲೆ

ಇಂದಿರಾ ಕ್ಯಾಂಟೀನ್‌ನಲ್ಲಿ ಉಪಾಹಾರ ವಿತರಿಸಿದ ಜಿಲ್ಲಾಧಿಕಾರಿ

ದೊಡ್ಡಬಳ್ಳಾಪುರದ ಕ್ಯಾಂಟೀನ್‌ಗೆ ಭೇಟಿ l ಆಹಾರದ ಗುಣಮಟ್ಟ ಪರಿಶೀಲನೆ

ವಿಜಯಪಥ ಸಮಗ್ರ ಸುದ್ದಿ

ದೊಡ್ಡಬಳ್ಳಾಪುರ: ಇಂದಿರಾ ಕ್ಯಾಂಟೀನ್‌ನಲ್ಲಿ ಬೆಳಗಿನ ಉಪಾಹಾರವನ್ನು ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ ವಿತರಿಸುವ ಮೂಲಕ ಬಡವರ ಹಸಿವು ನೀಗಿಸಿದರು.

ಕೊರೋನಾ ವೈರಾಣು ಸೋಂಕು ಹರಡದಂತೆ ಲಾಕ್ ಡೌನ್ ಆದೇಶ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೂ ಜಾರಿಯಲ್ಲಿರುವ ಹಿನ್ನೆಲೆ, ಕ್ಯಾಂಟೀನ್ ಭೇಟಿ ನೀಡಿದ ಜಿಲ್ಲಾಧಿಕಾರಿ ಆಹಾರವನ್ನು ಪರಿಶೀಲಿಸಿದ ನಂತರ ಸಾರ್ವಜನಿಕರಿಗೆ ವಿತರಿಸಿದರು.

ಜಿಲ್ಲೆಯಲ್ಲಿ ಇಬ್ಬರಿಗೆ ಕೊರೊನಾ ಪಾಸಿಟಿವ್‌ ಇರುವುದು ದೃಢಪಟ್ಟಿರುವುದರಿಂದ ಪ್ರತಿಯೊಬ್ಬರೂ ಎಚ್ಚರಿಕೆಯಿಂದ ಇರಬೇಕು ಎಂದು ಸಲಹೆ ನೀಡಿದರು.

ದಿನದಿಂದ ದಿನಕ್ಕೆ ಮಹಾಮಾರಿ ಎಲ್ಲೆಡೆಯೂ ಆವರಿಸುತ್ತಿದೆ. ಆದ್ದರಿಂದ ಅಕ್ಕಪಕ್ಕದ ಮನೆಯವರು ಪರ ಸ್ಥಳಗಳಿಗೆ ಹೋಗಿ ಬಂದಿದ್ದರೆ ಅವರ ವಿವರವನ್ನು ಕೊಡಿ ವೈದ್ಯರ ತಂಡ ಸ್ಥಳಕ್ಕೆ ಧಾವಿಸಿ ಪರೀಕ್ಷಿಸಲಿದೆ ಎಂದು ತಿಳಿಸಿದರು.

ದೊಡ್ಡಬಳ್ಳಾಪುರ ತಾಲೂಕು ತಹಸೀಲ್ದಾರ್ ಶಿವರಾಜು,  ನಗರಸಭೆ ಮುಖ್ಯಾಧಿಕಾರಿ ಮಂಜುನಾಥ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...