NEWSನಮ್ಮರಾಜ್ಯ

ಇಂದು ಬೆಂಗಳೂರು, ಬೆಳಗಾವಿಯಲ್ಲಿ ತಲಾ ಆರು ಸೋಂಕಿತರು ಪತ್ತೆ

ರಾಜ್ಯದಲ್ಲಿ ಏ.25ರಂದು 15 ಹೊಸ ಸೋಂಕಿತರು l ಭಾರತದಲ್ಲಿ 24,506 ಜನರಲ್ಲಿ ವೈರಸ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ 15 ಹೊಸ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 489ಕ್ಕೆ ಏರಿಕೆ ಆಗಿದೆ.

ರಾಜ್ಯದ ರಾಜಧಾನಿಯಲ್ಲಿ ಇಂದು ಮಧ್ಯಾಹ್ನದ ವರೆಗೆ 6 ಹೊಸ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಈ ಮೂಲಕ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 126ಕ್ಕೆ ಏರಿಕೆ ಆಗಿದೆ.

ಬೆಂಗಳೂರಿನ 6, ಬೆಳಗಾವಿಯಲ್ಲಿ 6, ಮಂಡ್ಯ, ಬಂಟ್ವಾಳ ಮತ್ತು ಚಿಕ್ಕಬಳ್ಳಾಪುರದಲ್ಲೂ ತಲಾ ಒಂದೊಂದು ಪ್ರಕರಣ ಪತ್ತೆಯಾಗಿದೆ.

ಬೆಂಗಳೂರು ಮತ್ತು ಬೆಳಗಾವಿಯಲ್ಲಿ ಇಂದು ಮಧ್ಯಾಹ್ನದ ವರೆಗೆ ತಲಾ ಆರು ಕೊರೊನಾ ವೈರಸ್‌ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ ಬೆಂಗಳೂರಿನ ಐವರು ಪುರುಷರು ಮತ್ತು ಓರ್ವ ಮಹಿಳೆಗೆ ಸೋಂಕು ದೃಢಪಟ್ಟಿದೆ. ಇನ್ನು ಬೆಳಗಾವಿಯ ಹಿರೇಬಾಗೇವಾಡಿಯ ಇಬ್ಬರು ಪುರುಷರು ಮತ್ತು ನಾಲ್ವರು ಮಹಿಳೆಯರಿಗೆ ಸೋಂಕು ತಗುಳಿದೆ.

ಇನ್ನು ಮಂಡ್ಯ ಮತ್ತು ಮತ್ತು ಚಿಕ್ಕಬಳ್ಳಾಪುರದಲ್ಲಿ ಪುರುಷು ಹಾಗೂ ಬಂಟ್ವಾಳದಲ್ಲಿ ಮಹಿಳೆಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್‌-19 ಪ್ರಕರಣಗಳು 489ಕ್ಕೆ ಏರಿಕೆಯಾಗಿದ್ದು, ಅವುಗಳಲ್ಲಿ 18 ಮಂದಿ ಮೃತಪಟ್ಟಿದ್ದಾರೆ. 153 ಮಂದಿ ಗುಣಮುಖರಾಗಿದ್ದಾರೆ.

ಇದನ್ನೂ ಓದಿರಿ  ಏ.24ರ ಸಂಜೆ ವೇಳೆಗೆ 29 ಕೊರೊನಾ ಹೊಸ ಸೋಂಕಿತರು ಪತ್ತೆ

ದೇಶದಲ್ಲಿ 24,506 ಕ್ಕೇರಿದ ಸೋಂಕಿತರ ಸಂಖ್ಯೆ

ಇನ್ನು ದೇಶದಲ್ಲಿ ಈವರೆಗೆ 24,506 , ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 775 ಮಂದಿ ಮೃತಪಟ್ಟಿದ್ದಾರೆ. 5,063 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 28,34,136  ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 1,97,373 ಜನರು ಮೃತಪಟ್ಟಿದ್ದಾರೆ. 8,07,593 ಮಂದಿ ರೋಗದಿಂದ ಗುಣಮುಖರಾಗಿದ್ದಾರೆ.

 

Leave a Reply

error: Content is protected !!
LATEST
ಭ್ರಷ್ಟಾಚಾರ, ಕಮಿಷನ್‌ ದಂಧೆ ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಕೊಟ್ಟು ಹಣ ಉಳಿಯುತ್ತದೆ : ಎಎಪಿ ಜೂ.24ರಂದು ಶಿವಮೊಗ್ಗದಲ್ಲಿ ರಾಷ್ಟ್ರ, ರಾಜ್ಯ ರೈತ ಮುಖಂಡರ ಸಮಾವೇಶ: ಕುರುಬೂರ್ ಶಾಂತಕುಮಾರ್ ಸಂತ್ರಸ್ತೆ ಅಪರಹರಣ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು KSRTCಯಿಂದ 300ಕ್ಕೂ ಹೆಚ್ಚು ಹೊಸ ಮಾರ್ಗಗಳಲ್ಲಿ ಬಸ್‌ ಓಡಾಟ: ಸಚಿವ ರಾಮಲಿಂಗಾರೆಡ್ಡಿ BMTC: 50ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್​​ಗಳ ಚಾಲಕರಿಗೆ ಗೇಟ್‌ಪಾಸ್‌ ಅತ್ಯಾಚಾರ ಆರೋಪಿ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನ ಎಸ್‌ಐಟಿ ಕಸ್ಟಡಿ ಅಂತ್ಯ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ವಿರೋಧಿಸಿ ನಾಳೆ ರಾಜ್ಯಾದ್ಯಂತ ಎಎಪಿ ಪ್ರತಿಭಟನೆ ನಟ ದರ್ಶನ್‌ ಸ್ಥಿತಿಗೆ ಮರುಗಿ ಅಭಿಮಾನಿ ಅನ್ನನೀರು ಬಿಟ್ಟು ಆತ್ಮಹತ್ಯೆಗೆ ಶರಣು? KSRTC ‘ಅಶ್ವಮೇಧ’ಗಳಿಂದ ಸಂಸ್ಥೆಗೆ ಶೇ.10ಕ್ಕೂ ಹೆಚ್ಚು ಲಾಭ : ಸಚಿವ ರಾಮಲಿಂಗಾರೆಡ್ಡಿ ಅತೀ ಶೀಘ್ರದಲ್ಲೇ NWKRTC ಒಡಲು ಸೇರಲಿವೆ 350 ಹೊಸ ಎಲೆಕ್ಟ್ರಿಕ್​ ಬಸ್‌ಗಳು