NEWSನಮ್ಮರಾಜ್ಯ

ಇಂದು ಕೊರೊನಾಗೆ ಒಬ್ಬ ಬಲಿ, ಮತ್ತೆ 25 ಮಂದಿಯಲ್ಲಿ ಸೋಂಕು ದೃಢ

ರಾಜ್ಯದಲ್ಲಿ ಒಟ್ಟು 384ಕ್ಕೇರಿದ ಸೋಂಕಿತರ ಸಂಖ್ಯೆ l ದೇಶದಲ್ಲಿ 489ಕ್ಕೇರಿದ ಮೃತರ ಸಂಖ್ಯೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:ಕೊರೊನಾಗೆ ಇಂದು ವಿಜಯಪುರದಲ್ಲಿ ಒಬ್ಬರು ಬಲಿಯಾಗಿದ್ದಾರೆ. ಜತೆಗೆ ಇಂದು ಬೆಳಗ್ಗೆ 12 ಮಂದಿಗೆ ಕೊರೊನಾ ಪಾಸಿಟಿವ್‌ ಇತ್ತು. ಆದರೆ ಅದು ಸಂಜೆ ವೇಳೆಗೆ 25ಕ್ಕೇರಿದೆ. ಈ ಮೂಲಕ  ಸೋಂಕಿತರ ಸಂಖ್ಯೆ  384ಕ್ಕೇರಿದೆ.  ಅದರಲ್ಲಿ 100 ಮಂದಿ  ಸೋಂಕಿನಿಂದ ಗುಣಮುಖರಾಗಿದ್ದಾರೆ.

ವಿಜಯಪುರದ ಕೇಸ್‌ ನಂ.374 ರ ಸೋಂಕಿತ ವ್ಯಕ್ತಿ ಕೊರೊನಾ ಪಾಸಿಟಿವ್‌ ಇದೆ ಎಂಬುದರಿಂದ ಅಘಾತಕ್ಕೆ  ಒಳಗಾಗಿ ಹೃದಯಾಘಾತದಿಂದ ಮೃತಪಟ್ಟಿದ್ದು ಈ ಮೂಲಕ ರಾಜ್ಯದಲ್ಲಿ ಕೊರೊನಾಗೆ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

ಬೆಂಗಳೂರು ಮೂರು, ಗದಗ1, ಮಂಡ್ಯ 1, ಮೈಸೂರು 7, ಬಾಗಲಕೋಟೆ 7, ಬೆಳಗಾವಿಯಲ್ಲಿ 1, ಕಲಬುರಗಿ 2, ವಿಜಯಪುರ 2, ಹುಬ್ಬಳ್ಳಿ 1 ಸೇರಿದಂತೆ ಒಟ್ಟು 25 ಮಂದಿಗೆ ಸೋಂಕು ಇರುವುದು ದೃಢಪಟ್ಟ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅತ್ಯಂತ ಕಟ್ಟುನಿಟ್ಟಿನ ಕ್ರಮಕ್ಕೆ ಸರ್ಕಾರ ಮುಂದಾಗಿದೆ.

ರಾಜ್ಯದಲ್ಲಿ ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದ್ದು ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಇನ್ನು ಹೊಸ 25 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದ್ದು, ಈವರೆಗೆ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 384ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು ಮೂರು ಸೋಂಕು ಇರುವುದು ದೃಢಪಟ್ಟಿದ್ದು . ಹೀಗಾಗಿ ಅಲ್ಲಿ 88 ಸೋಂಕಿತರು ಇದ್ದಾರೆ. ಇನ್ನು ಮೈಸೂರಿನಲ್ಲಿ ನಿನ್ನೆ 73 ಇದ್ದು, ಇಂದು 7 ಹೊಸ ಪ್ರಕರಣ ಪಾಸಿಟಿವ್‌ ಆಗಿದ್ದು, 80 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ.

ರಾಜ್ಯದಲ್ಲಿ ಈವರೆಗೆ 14ಮಂದಿ ಅಸುನೀಗಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಸರ್ಕಾರ ಮತ್ತು ಅಧಿಕಾರಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. ಇನ್ನು ನಾಗರಿಕರು ಕೂಡ ಅವರ ಶ್ರಮಕ್ಕೆ ಕೈಜೋಡಿಸುವ ಮೂಲಕ ಈ ವಿಶ್ವಮಾರಿ ಕೊರೊನಾವನ್ನು ದೇಶದಿಂದ ಬಡಿದೋಡಿಸಲು ಮುಂದಾಗಬೇಕು.

ದೇಶದಲ್ಲಿ 14,438ಕ್ಕೇರಿದ ಸಾವಿನ ಸಂಖ್ಯೆ

ಇನ್ನು ದೇಶದಲ್ಲಿ ಈವರೆಗೆ 14438 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 489 ಮಂದಿ ಮೃತಪಟ್ಟಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 22,52,596 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 1,54,330 ಜನರು ಮೃತಪಟ್ಟಿದ್ದಾರೆ. 5,74,818 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ತಿಳಿಸಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ