NEWSನಮ್ಮರಾಜ್ಯ

ಇಂದು ಮತ್ತೆ ರಾಜ್ಯದ 34 ಮಂದಿಗೆ ಕೊರೊನಾ ಪಾಸಿಟಿವ್‌

313ಕ್ಕೇರಿದ ಸೋಂಕಿತರ ಸಂಖ್ಯೆ l ಈವರೆಗೆ 13 ಜನರು ವಿಶ್ವಮಾರಿಗೆ ಬಲಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

 ಬೆಂಗಳೂರು: ಬೆಳಗಾವಿಯಲ್ಲಿ ಇಂದು ಒಂದೇ ದಿನ 17 ಮಂದಿಗೆ ಕೊರೊನಾ ಪಾಸಿಟಿವ್‌ ಪತ್ತೆಯಾಗಿದ್ದು, ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಅದರ ಜತೆಗೆ ರಾಜ್ಯದಲ್ಲಿ ಇಂದು ಮಧ್ಯಾಹ್ನದ ವೇಳಗೆ 34 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ.

ರಾಜ್ಯದಲ್ಲಿ ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದ್ದು ಇಂದೂ ಕೂಡ ಬೆಂಗಳೂರಿನಲ್ಲಿ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

ಇನ್ನು ಹೊಸ 34 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದ್ದು, ಈವರೆಗೆ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 313ಕ್ಕೆ ಏರಿಕೆಯಾಗಿದೆ.  ಬೆಳಗಾವಿಯಲ್ಲಿ 17 ಮಂದಿಗೆ ಸೋಂಕು ದೃಢಪಟ್ಟಿದ್ದು, ಅದರಲ್ಲಿ ಹಿರೇಬಾಗೇವಾಡಿಯ ಒಂದೇ ಕುಟುಂಬದ 8 ಮಂದಿಗೆ ತಗುಲಿದೆ. ಅದರಲ್ಲಿ 6ಮಂದಿ ಮಹಿಳೆಯರೆ ಆಗಿದ್ದಾರೆ. ಇಂದು ಬೆಳಗಾವಿಯಲ್ಲಿ 36ಕ್ಕೇರಿದೆ.

ಬೆಂಗಳೂರಿನಲ್ಲಿ ಐದು, ಮೈಸೂರಿನಲ್ಲಿ ಮೂರು, ವಿಜಯಪುರದಲ್ಲಿ ಏಳು, ಕಲಬುರಗಿ ಮತ್ತು ಗದಗದಲ್ಲಿ ತಲಾ ಒಂದು ಕೇಸ್‌ ಪತ್ತೆಯಾಗಿದೆ. ಈ ಮಧ್ಯೆ ಸೋಂಕಿತರ ಸಂಖ್ಯೆಯೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು,   ಕೊವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ತನ್ನ ಮರಣ ಮೃದಂಗಕ್ಕೆ ಮುಂದಾಗುತ್ತಿದೆ.

ಬೆಂಗಳೂರಿನಲ್ಲಿ ನಿನ್ನೆವರೆಗೆ 71 ಇತ್ತು ಇಂದು 5 ಮಂದಿಗೆ ಸೋಂಕು ದೃಢಪಟ್ಟಿದ್ದು, 76ಕ್ಕೇರಿದೆ. ಇನ್ನು ಮೈಸೂರಿನಲ್ಲಿ ನಿನ್ನೆ 58 ಇದ್ದು, ಇಂದು 3 ಹೊಸ ಪ್ರಕರಣ ಪಾಸಿಟಿವ್‌ ಆಗಿದ್ದು, 61ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ