NEWSನಮ್ಮರಾಜ್ಯಶಿಕ್ಷಣ-

ಇಂದು ಮುಗಿದೇ ಹೋಗಿತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆ!?

ಮಾ.27ರಂದು ಆರಂಭವಾಗಬೇಕಿದ್ದ ಎಕ್ಸಾಂ l ವಿಶ್ವಮಾರಿ ಕೊರೊನಾದಿಂದ ದೂರ...ದೂರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಾ.27ರಂದು ಆರಂಭವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದು ಮುಕ್ತಾಯವಾಗಿದೆ. ಇದರಿಂದ ಎಸ್‌ಎಸ್‌ಎಲ್‌ಸಿಯ ಎಲ್ಲಾ ವಿದ್ಯಾರ್ಥಿಗಳು ನಿರಾಳರಾಗಿದ್ದಾರೆ.!?

ಹೌದು! ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿಗದಿಪಡಿಸಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಮಯಕ್ಕೆ ಸರಿಯಾಗಿ ಆಗಿದ್ದರೆ ಈ ರೀತಿಯ ಶೀರ್ಷಿಕೆಯೊಂದಿಗೆ ದೃಶ್ಯ ಮತ್ತು ಪ್ರಿಂಟ್‌ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿತ್ತು.

ಆದರೆ, ಕೊರೊನಾ ಎಂಬ ವಿಶ್ವ ಹೆಮ್ಮಾರಿ ಆವರಿಸಿದ್ದು, ನಡೆಯಬೇಕಿದ್ದ ಪರೀಕ್ಷೆ ಅರ್ನಿದಿಷ್ಟ ಅವಧಿವರೆಗೆ ಮುಂದೂಡಿದೆ. ಪರಿಣಾಮ ಎಲ್ಲಾ ವಿಷಯದ ಪರೀಕ್ಷೆಗಳನ್ನು ಬರೆದು ಇಂದು ಕೊನೆಯ ವಿಷಯವಾದ ಸಮಾಜ ವಿಜ್ಞಾನ ಪರೀಕ್ಷೆ ಬರೆದು ಎಲ್ಲಾ ವಿದ್ಯಾರ್ಥಿಗಳು ನಿರಾಳರಾಗುತ್ತಿದ್ದರು. ಆದರೆ ಇಲ್ಲಿ ತಾನೊಂದು ಬಗೆದರೆ ದೈವವೊಂದು ಬಗೆದಂತೆ ಎಂಬ ಗಾದೆ ಮಾತುನಂತೆ ವಿದ್ಯಾರ್ಥಿಗಳು ಅಡಕತ್ತರಿಯಲ್ಲಿ ಇಂದು ಸಿಲುಕಿ ಒದ್ದಾಡುತ್ತಿದ್ದಾರೆ.

ಇಂದು ವಿದ್ಯಾರ್ಥಿಗಳಲ್ಲಿ ನಿರಾಳತೆ ಬದಲು ಆತಂಕದ ಛಾಯೆ ಮನೆಮಾಡಿದೆ. ನಮಗೆ ಪರೀಕ್ಷೆ ನಡೆಯುತ್ತದೋ ಇಲ್ಲವೋ ಎಂಬ ಆತಂಕದಲ್ಲಿ ಸಮಯವನ್ನು ಇಂದಿಗೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ದೂಡುತ್ತಿದ್ದಾರೆ. ಜತೆಗೆ ಪರೀಕ್ಷೆ ಸಮಯ ಮುಂದೊಂದುದಿನ ನಿಗದಿಯಾದರೆ ನಾವು ಮತ್ತೆ ಯಾವರೀತಿ ಪರೀಕ್ಷೆಗೆ ತಯಾರಿ ನಡೆಸಬೇಕು ಎಂಬ ಭಯದಲ್ಲಿಯೂ ಕಾಲ ದೂಡುತ್ತಿದ್ದಾರೆ.

ಇದನ್ನೂ ಓದಿರಿ ಮಾರ್ಚ್ 27 ರಿಂದ ಎಸ್ಎಸ್ಎಲ್‌ಸಿ ಪರೀಕ್ಷೆ

ಇನ್ನು ಕೆಲ ವಿದ್ಯಾರ್ಥಿಗಳು ನಮಗೆ ಯಾವ ಸಮಯದಲ್ಲಿ ಬೇಕಾದರೂ ಪರೀಕ್ಷೆ ದಿನಾಂಕ ನಿಗದಿಯಾಗಲಿ. ಮನಗೇನು ಭಯವಿಲ್ಲ. ನಾವು ಪರೀಕ್ಷೆ ಬರೆಯಲು ಸದಾ ಸಿದ್ಧರಿದ್ದೇವೆ ಎಂದು ಹೇಳುತ್ತಲ್ಲೂ ಇದ್ದಾರೆ.

ಒಟ್ಟಾರೆಯಾಗಿ ಯಾವುದೇ ಸಮಸ್ಯೆ ಇಲ್ಲದೆ ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿಗದಿಪಡಿಸಿದ್ದ ಸಮಯಕ್ಕೆ ಸರಿಯಾಗಿ ಎಕ್ಸಾಂ ಮುಗಿದಿದ್ದರೆ ಇಂದು ವಿದ್ಯಾರ್ಥಿಗಳಲ್ಲಿರುವ ಆತಂಕ ದುಗುಡ ದೂರವಾಗುತ್ತಿತ್ತು. ಆದರೆ ಇಡೀ ವಿಶ್ವವನ್ನೇ ಕಾಡುತ್ತಿರುವ ಕೋವಿಡ್‌ 19 ವಿದ್ಯಾರ್ಥಗಳನ್ನು ಒಂದು ರೀತಿಯಲ್ಲಿ ಪೀಡಿಸದೆಬಿಡುತ್ತಿಲ್ಲ.

Leave a Reply

error: Content is protected !!
LATEST
KSRTC: ಏಪ್ರಿಲ್‌-ಜೂನ್‌ ಪೀಕ್‌ ಸೀಸನ್‌ ಎಂದು ಚಾಲನಾ ಸಿಬ್ಬಂದಿಗಳಿಗೆ ರಜೆ ಕೊಡದೆ ಹಿಂಸಿಸುತ್ತಿರುವ ಅಧಿಕಾರಿಗಳು..! ಬಿಜೆಪಿ ರಾಜಕೀಯ ಲಾಭಕ್ಕೆ ನೇಹಾ ಪ್ರಕರಣ ಬಳಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ವಿಚಾರ: ಜಗದೀಶ್ ವಿ. ಸದಂ IVRS, ಬಲ್ಕ್ SMS ಮೂಲಕ ಮತದಾರರಿಗೆ ಮೊಬೈಲ್‌ ಸಂದೇಶ: ತುಷಾರ್ ಗಿರಿನಾಥ್ KSRTC: ವೇತನ ಸಮಸ್ಯೆ ಪರಿಹರಿಸದೆ ಅಸಡ್ಡೆ ತೋರಲು ಇವರು ಕಾರಣಗಳು....!? ರಾಜಕೀಯ ಪಕ್ಷಗಳ ಚುನಾವಣಾ ಪ್ರಣಾಳಿಕೆಗಳು ಜನರ ವಂಚಿಸುವ ಮಂತ್ರ ದಂಡಗಳು : ಕುರುಬೂರ್‌ ಶಾಂತಕುಮಾರ್‌ 'ನಮ್ಮ ನಡೆ ಮತಗಟ್ಟೆಯ ಕಡೆ' ಜಾಗೃತಿ ಜಾಥಾಗೆ ಮನೋಜ್ ಕುಮಾರ್ ಮೀನಾ, ತುಷಾರ್ ಗಿರಿನಾಥ್ ಚಾಲನೆ ಕೊಡಗು: ಹುಲಿದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ ತಾಳವಾಡಿ: ಜಮೀನಿಗೆ ನುಗ್ಗುತ್ತಿರುವ ಕಾಡಾನೆ ಹಿಮ್ಮೆಟ್ಟಿಸಿದ ರೈತರು ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ : ಬೆಚ್ಚಿಬಿದ್ದ ಜನತೆ ಇಂದು ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ: 102 ಕ್ಷೇತ್ರಗಳಲ್ಲಿ ಆರಂಭ