NEWSಶಿಕ್ಷಣ-

ಇನ್ನು ಐದು ವರ್ಷಗಳಲ್ಲಿ 2 ಸಾವಿರ ಕೆಪಿಎಸ್ ಶಾಲೆಗಳ ಆರಂಭಿಸುವ ಗುರಿ : ಸಚಿವ ಮಧು ಬಂಗಾರಪ್ಪ

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ, ಮುಂದಿನ ಭವಿಷ್ಯರೂಪಿಸುವ ಜವಾಬ್ದಾರಿ ಸರ್ಕಾರದ್ದು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ, ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾಭ್ಯಾಸ ಕಲ್ಪಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಮಧುಬಂಗಾರಪ್ಪ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನನ್ನ ಶಾಲೆ ನನ್ನ ಕೊಡುಗೆಯಡಿಯಲ್ಲಿ ಸಿ.ಎಸ್‌.ಆರ್ ಅನುದಾನದಲ್ಲಿ ಮಾದರಿ ಸರ್ಕಾರಿ ಶಾಲೆ ಯೋಜನೆ ಉದ್ಘಾಟನೆ ಮತ್ತು ನೂತನ ಶಾಲಾ ಕೊಠಡಿಗಳು ಹಾಗೂ ವಿವೇಕ ಶಾಲಾ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಶ್ರಮಿಸುತ್ತಿದ್ದು, ಹಲವು ಯೋಜನೆಗಳನ್ನು ಜಾರಿಗೆ ತಂದಿದೆ, ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆಗೆ ವಾರಕ್ಕೆ 2 ಮೊಟ್ಟೆ, ಚಿಕ್ಕಿ, ಬಾಳೆಹಣ್ಣು ನೀಡಲಾಗುತ್ತಿದೆ. ಈ ವರ್ಷ ಪಿಯುಸಿ ಫೇಲಾದ ವಿದ್ಯಾರ್ಥಿಗಳಿಗೆ 2 ಪೂರಕ ಪರೀಕ್ಷೆಗಳನ್ನು ನಡೆಸಿದ್ದೆವು. ಇದರ ಪ್ರತಿಫಲವಾಗಿ 4200 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಿದ್ಯಾರ್ಥಿಗಳು ಕಡಿಮೆ ಇರುವ ಶಾಲೆಗಳನ್ನು ಒಂದು ಕಡೆ ಸ್ಥಳಾಂತರಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದರಿಂದ ಶಿಕ್ಷಕರ ಹೊರೆ ಕಡಿಮೆ ಮಾಡಬಹುದು ಎಂದರು.

ಸಿ.ಎಸ್.ಆರ್ ಅನುದಾನದಡಿಯಲ್ಲಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಸರ್ಕಾರದ ಪ್ರಯತ್ನ ಗಳು ಕಾರ್ಯರೂಪದಲ್ಲಿದೆ. 01 ರಿಂದ 12 ನೇ ತರಗತಿಯವರೆಗೆ ಒಂದೇ ಶಾಲೆಯಲ್ಲಿ ವಿದ್ಯಾರ್ಥಿಗಳು ವ್ಯಾಸಂಗ ಮಾಡಲು ಅವಕಾಶ ಕಲ್ಪಿಸಲು ಹಾಗೂ ಮೂಲಭೂತ ಸೌಲಭ್ಯಗಳನ್ನು ಒಳಗೊಂಡ 600 ಕೆ.ಪಿ.ಎಸ್ (ಕರ್ನಾಟಕ ಪಬ್ಲಿಕ್ ಶಾಲೆ)ಶಾಲೆಗಳನ್ನು ಮುಂದಿನ ವರ್ಷದ ವೇಳೆಗೆ ರಾಜ್ಯಾದ್ಯಂತ ಪ್ರಾರಂಭ ಮಾಡಲಾಗುವುದು. ಮುಂದಿನ 5 ವರ್ಷಗಳಲ್ಲಿ ಎರಡು ಗ್ರಾಮಗಳಿಗೆ ಒಂದರಂತೆ 2000 ಕೆ.ಪಿ.ಎಸ್ ಶಾಲೆಗಳನ್ನು ನಿರ್ಮಿಸಲು ಗುರಿ ಹೊಂದಲಾಗಿದೆ ಎಂದು ಹೇಳಿದರು.

ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಕಾರ್ಯಕ್ರಮದ ಅಧ್ಯಕ್ಷತೆ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಹೊಸ ವಾತಾವರಣ ಸೃಷ್ಟಿ ಮಾಡುವ ದೃಷ್ಟಿಯಿಂದ ಹಾಗೂ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಸಿ.ಎಸ್.ಆರ್ ಅನುದಾನದಡಿ ಶಾಲೆಗಳನ್ನು ನವೀಕರಣ ಮಾಡಲಾಗುತ್ತದೆ ಎಂದರು.

ಇನ್ನು ಶಾಲಾ ಕೊಠಡಿ, ಆಟದ ಮೈದಾನ, ಕಂಪ್ಯೂಟರ್ ಸೌಲಭ್ಯ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಶಾಲೆಗೆ ಒದಗಿಸಿ, ಗುಣಮಟ್ಟದ ಶಿಕ್ಷಣ ನೀಡಲಾಗುವುದು. ಇದರಿಂದ ಮಕ್ಕಳ ಮುಂದಿನ ಭವಿಷ್ಯಕ್ಕೆ ಸಹಕಾರಿಯಾಗುತ್ತದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ನುಡಿದಂತೆ ನಡೆಯುತ್ತಿದ್ದು 100ದಿನಗಳು ಪೂರೈಸುವುದರೊಳಗಾಗಿ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ. ಐದನೇ ಯೋಜನೆಯನ್ನೂ ಯಶಸ್ವಿಯಾಗಿ ಜಾರಿಗೊಳಿಸಲಾಗುವುದ ಅವರು, ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೆಪಿಎಸ್ ಶಾಲೆಗಳನ್ನು ಆರಂಭಿಸುವ ಗುರಿ ಹೊಂದಿರುವ ಶಿಕ್ಷಣ ಸಚಿವರ ಯೋಜನೆಗಳು ಶ್ಲಾಘನೀಯ ಎಂದರು.

ಪ್ರೆಸ್ಟೀಜ್, ಎಂಬೆಸ್ಸಿ, ಚಾಂಪಿಯನ್ಸ್ ಗ್ರೂಪ್, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ , ಎಜಾಕ್ಸ್, ಎಕ್ಸೈಡ್ ಬ್ಯಾಟರಿ, ಮುಂತಾದ ಕಂಪನಿಗಳು ಜಿಲ್ಲೆಯ 14 ಶಾಲೆಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಿ ಅಭಿವೃದ್ಧಿ ಪಡಿಸಲು ಮುಂದಾಗಿವೆ. ಈ ಸಂದರ್ಭದಲ್ಲಿ ಸರ್ಕಾರದ ವತಿಯಿಂದ ಕಂಪನಿ ಮುಖ್ಯಸ್ಥರಿಗೆ ಪ್ರಶಂಸನಾ ಪತ್ರ ನೀಡಲಾಯಿತು.

ಹೊಸಕೋಟೆ ಶಾಸಕ ಶರತ್ ಕುಮಾರ್ ಬಚ್ಚೇಗೌಡ, ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್, ವಿಧಾನ ಪರಿಷತ್ ಸದಸ್ಯರಾದ ಎಸ್.ರವಿ, ಅ.ದೇವೇಗೌಡ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ್.ಎನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ‌.ಕೆ.ಎನ್.ಅನುರಾಧ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ವಿಶ್ವನಾಥಪುರ ಗ್ರಾಮ ಪಂಚಾಯತಿ ಅಧ್ಯಕ್ಷರು ವೆಂಕಟಮ್ಮ ದೊಡ್ಡಗಂಗಪ್ಪ, ಉಪಾಧ್ಯಕ್ಷರಾದ ಕಲ್ಪನಾ ನಾರಾಯಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ KSRTC ಬಸ್‌-ಬೈಕ್ ನಡುವೆ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್