ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದಡಿ ಇಬ್ಬರು ಅಧಿಕಾರಿಗಳ ಮನೆ ಮತ್ತು ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಶುಕ್ರವಾರ ಬೆಳಗ್ಗೆ ರಾಜ್ಯದ ವಿವಿಧ 6 ಸ್ಥಳಗಳಲ್ಲಿ ಏಕ ಕಾಲಕ್ಕೆ ದಾಳಿ ದಾಳಿ ನಡೆಸಿದ ಅಧಿಕಾರಿಗಳು ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಸರ್ಕಾರಿ ನೌಕರರು ಆದಾಯಕ್ಕಿಂತ ಹೆಚ್ಚು ಆಸ್ತಿ-ಪಾಸ್ತಿಗಳನ್ನು ಹೊಂದಿರುವ ಬಗ್ಗೆ ವಿಶ್ವಾಸಾರ್ಹ ಮಾಹಿತಿ ಸಂಗ್ರಹಿಸಿ ಅಕ್ರಮ ಆಸ್ತಿ ಗಳಿಕೆ ಪ್ರಕರಣಗಳನ್ನು ದಾಖಲಿಸಿ ಅವರಿಗೆ ಸಂಬಂಧಿಸಿದ 6 ಸ್ಥಳಗಳ ಮೇಲೆ ಇಂದು ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಇನ್ನೂ ಶೋಧ ಕಾರ್ಯ ಮುಂದುವರಿಸಿದ್ದಾರೆ.
ಹನಮಪ್ಪ ಅಂದಪ್ಪ ಪ್ರಭರಣ್ಣವರ
ಬಾಗಲಕೋಟೆಯ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಹನಮಪ್ಪ ಅಂದಪ್ಪ ಪ್ರಭರಣ್ಣವರ ಅವರ ಗದಗ ಜಿಲ್ಲೆ, ರಾಜೀವ ಗಾಂಧಿನಗರದಲ್ಲಿರುವ ವಾಸದ ಮನೆ ಹಾಗೂ ಬಾಗಲಕೋಟೆಯ ರೋಟ್ರಿ ಕ್ಲಬ್ ಕ್ರಾಸ್ ಬಳಿಯಲ್ಲಿರುವ ಪ್ರಸ್ತುತ ವಾಸದ ಬಾಡಿಗೆ ಮನೆ, ಕರ್ತವ್ಯ ನಿರ್ವಹಿಸುತ್ತಿರುವ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರ ಕಚೇರಿ ಮೇಲೆ ಏಕಕಾಲಕ್ಕೆ ದಾಳಿಮಾಡಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ವಿಶೇಷ ಭೂ ಸ್ವಾಧೀನಾಧಿಕಾರಿ ಎಂ. ದಾಸೇಗೌಡ
ಮಂಗಳೂರಿನ ಕೆ.ಐ., ಎ.ಡಿ.ಬಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಎಂ. ದಾಸೇಗೌಡ (ಹಾಲಿ ಅಮಾನತು) ಇವರ ಮಂಡ್ಯ ಜಿಲ್ಲೆ, ಕಾವೇರಿನಗರದ ನಿವಾಸ ಹಾಗೂ ಸ್ನೇಹಿತರ ಮಂಡ್ಯದ ಅಶೋಕ ನಗರದ ವಾಸದ ಮನೆ ಹಾಗೂ ಮಂಡ್ಯದ ಚಾಮುಂಡೇಶ್ವರಿನಗರದ ವಾಸದ ಮನೆ ಮೇಲೆ ದಾಳಿಮಾಡಿ ದಾಖಲೆಗಳನ್ನು ವಶಪಡಿಕೊಂಡಿದ್ದಾರೆ.
ಕರ್ನಾಟಕ ರಾಜ್ಯ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ವಿವಿಧ ತಂಡಗಳಿಂದ ಈ ಸರ್ಕಾರಿ ನೌಕರರ ವಿರುದ್ಧ ದಾಳಿ ಮುಂದುವರಿದಿದ್ದು, ಇವರು ಹೊಂದಿರುವ ಆಸ್ತಿ-ಪಾಸ್ತಿಗಳ ಮೂಲದ ಬಗ್ಗೆ ತನಿಖೆ ಮುಂದುವರಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
![](https://vijayapatha.in/wp-content/uploads/2024/02/QR-Code-VP-1-1-300x62.png)