Please assign a menu to the primary menu location under menu

NEWSದೇಶ-ವಿದೇಶ

ಈವರೆಗೆ ದೇಶದಲ್ಲಿ 239ಮಂದಿ ಕೊರೊನಾಗೆ ಬಲಿ

ಕರ್ನಾಟಕದ 207 ಮಂದಿ ಸೇರಿ ಭಾರತದಲ್ಲಿ 7447  ಸೋಂಕಿತರು

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: 24 ಗಂಟೆಗಳಲ್ಲಿ ಭಾರತದ 40 ಮಂದಿ ಕೊರೊನಾ ವೈರಸ್‌ ಸೋಂಕಿಗೆ ಬಲಿಯಾಗಿದ್ದಾರೆ. ಜತೆಗೆ 1035 ಹೊಸ ಪ್ರಕರಣಗಳು ವರದಿಯಾಗಿವೆ, ದೇಶದಲ್ಲಿ ಸೋಂಕು ಕಾಣಿಸಿಕೊಂಡ ನಂತರ ಶುಕ್ರವಾರ ಕಂಡುಬಂದ ಅತಿಹೆಚ್ಚು ಪ್ರಕರಣವಾಗಿವೆ.

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 7447ಕ್ಕೇರಿದ್ದು ಅವರಲ್ಲಿ 6565 ಸೋಂಕಿತರು, 643 ಮಂದಿ ಗುಣಮುಖರಾಗಿದ್ದಾರೆ. ಇನ್ನು ಕೆಲವರು ವಲಸೆ ಹೋದವರು ಹಾಗೂ 239 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶ ಹೇಳುತ್ತಿದೆ.

ಜಾರ್ಖಂಡ್ ನಲ್ಲಿ 3 ಹೊಸ ಕೇಸುಗಳು ಪತ್ತೆಯಾಗಿದ್ದು ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 17ಕ್ಕೇರಿದೆ. ಆಂಧ್ರ ಪ್ರದೇಶದ ಕರ್ನೂಲ್ ನಲ್ಲಿ 5 ಹೊಸ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಬಿಹಾರದಲ್ಲಿ ಸೋಂಕಿತ 60 ವ್ಯಕ್ತಿಗಳಲ್ಲಿ 23 ಮಂದಿ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ.

ಆರೋಗ್ಯ ಸಚಿವಾಲಯ ಹೇಳುವ ಪ್ರಕಾರ ದೇಶದಲ್ಲಿ ಕೊರೊನಾ ಸೋಂಕು ಇನ್ನೂ ಮೂರನೇ ಹಂತ ತಲುಪಿಲ್ಲ. ಆದರೆ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ.

ನಮ್ಮ ದೇಶದಲ್ಲಿ ಒಡಿಶಾ ನಂತರ ಇದೀಗ ಪಂಜಾಬ್ ಸರ್ಕಾರ ಲಾಕ್ ಡೌನ್ ನ್ನು ಮೇ 1ರವರೆಗೆ ವಿಸ್ತರಿಸಿದೆ. ಪಂಜಾಬ್‌ ರಾಜ್ಯದಲ್ಲಿ ಕೊರೊನಾ ಸೋಂಕು ಸಮುದಾಯ ಹಂತಕ್ಕೆ ತಲುಪಲು ಆರಂಭವಾಗಿದೆ ಎಂಬ ವರದಿಗಳು ಬಂದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅಲ್ಲಿನ ಮುಖ್ಯಮಂತ್ರಿ ಅಮರಿಂದರ್ ಸಿಂಗ್‌ ನೇತೃತ್ವದ ಸರ್ಕಾರವೂ ಮೇ 1ವರೆಗೆ ಲಾಕ್‌ಡನ್‌ ಮುಂದುವರಿಸುವ ಕ್ರಮ ಕೈಗೊಂಡಿದೆ.

ಇನ್ನು ರಾಜ್ಯದಲ್ಲೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಕರ್ನಾಟಕ ರಾಜ್ಯ ಸರ್ಕಾರ ಕೆಲ ಪ್ರದೇಶಗಳನ್ನು ಸೀಲ್‌ಡೌನ್‌ ಮಾಡಿದೆ. 207 ಸೋಂಕಿತರಿಂದ್ದು, 6 ಮಂದಿ ಅಸುನೀಗಿದ್ದಾರೆ.

Leave a Reply

error: Content is protected !!
LATEST
KSRTC: ಪುರುಷ ನೌಕರರಿಗೂ ಶಿಶುಪಾಲನಾ ರಜೆ ಸೌಲಭ್ಯ- ಇಂದಿನಿಂದಲೇ ಜಾರಿ- ಎಂಡಿ ಆದೇಶ KSRTC: ಶೇ.15ರಷ್ಟು ಬಸ್‌ ಟಿಕೆಟ್‌ ದರ ಹೆಚ್ಚಳ- ಜ.5ರಿಂದ ಜಾರಿಗೆ ಸಚಿವ ಸಂಪುಟ ಸಭೆ ಅಸ್ತು ದಲೈವಾಲ ಜೀವಕ್ಕೆ ಅಪಾಯವಾದರೆ ದೇಶದಲ್ಲಿ ರೈತದಂಗೆ ಆಗಲಿದೆ: ಕುರುಬೂರು ಶಾಂತಕುಮಾರ್‌ ಎಚ್ಚರಿಕೆ KSRTCಗೆ ರಾಷ್ಟ್ರದ ಮಟ್ಟದ ಒಂಬತ್ತು ಪ್ರಶಸ್ತಿಗಳು- 3ರಾಜ್ಯಗಳಲ್ಲಿ ಪ್ರದಾನ KSRTC 4 ನಿಗಮಗಳ ನಷ್ಟ ಪರಿಹಾರಕ್ಕೆ ಬಸ್ ಪ್ರಯಾಣ ದರ ಹೆಚ್ಚಿಸುವುದು ಅನಿವಾರ್ಯ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ KSRTC: ನೌಕರರ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆಗೆ ಜ.6ರಂದು ಸಿಎಂ ಚಾಲನೆ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ 32 ಪತ್ರಕರ್ತರಿಗೆ ಪ್ರಶಸ್ತಿ ಕ್ಯಾನ್ಸರ್ ಗೆದ್ದ ಶಿವಣ್ಣ: ಡಬಲ್‌ ಪವರ್‌ನೊಂದಿಗೆ ಬರುತ್ತೇನೆ ಅಂದ ನಟ  ಹೊಸ ವರ್ಷದ ಸಂಭ್ರಮದಲ್ಲಿದ್ದ ಪ್ರಿಯಕರನಿಗೆ ಇರಿದ ಪ್ರೇಯಸಿ -ಅಷ್ಟಕ್ಕೂ ಆಗಿದ್ದೇನು? ಸಿಡ್ನಿಯಲ್ಲಿ 2025ರ ನೂತನ ವರ್ಷ ಸ್ವಾಗತಿಸಿದ ಮಿಲಿಯನ್‌ಗಿಂತಲೂ ಹೆಚ್ಚು ಜನರು