Please assign a menu to the primary menu location under menu

NEWSನಮ್ಮಜಿಲ್ಲೆ

ಉಳ್ಳವರು ಇಲ್ಲದವರಿಗೆ ನೆರವು ಕಲ್ಪಿಸುವುದೇ ನಿಜ ಧರ್ಮ

ಶೃಂಗೇರಿ ಶಾರದಾ ಪೀಠದ ಆಡಳಿತಾಧಿಕಾರಿ ಡಾ.ವಿ. ಆರ್. ಗೌರಿ ಶಂಕರ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಜನ ಸೇವೆಯೇ ಜನಾರ್ಧನನ ಸೇವೆ ! ಉಳ್ಳವರು ಇಲ್ಲದವರಿಗೆ ಸಕಾಲದಲ್ಲಿ ನೆರವು ಕಲ್ಪಿಸಬೇಕು !! ಅದುವೇ ನಿಜವಾದ ಮಾನವ ಧರ್ಮ !! ಎಂದು ಶ್ರೀ ಶೃಂಗೇರಿ ಶಾರದಾ ಪೀಠದ ಆಡಳಿತಾಧಿಕಾರಿ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪದ್ಮಶೀ ಪ್ರಶಸ್ತಿ ಪುರಸ್ಕೃತ ಡಾ.ವಿ. ಆರ್. ಗೌರಿ ಶಂಕರ್ ತಿಳಿಸಿದರು.

ಇಂದು ನಗರದ ಶಂಕರಪುರಂ ಬಡಾವಣೆಯ ಶೃಂಗೇರಿ ಶಂಕರ ಮಠದ ಆವರಣದಲ್ಲಿ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಬಸವನಗುಡಿ ಪ್ರದೇಶದಲ್ಲಿ ವಾಸಿಸುತ್ತಿರುವ ಕಡು ಬಡವರು ಹಾಗೂ ಇದೇ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೋವಿಡ್-19 ಸೈನಿಕರು ಎಂದೇ ಬಣ್ಣಿಸಲಾಗುವ ಅರೆ ವೈದ್ಯಕೀಯ ಸಿಬ್ಬಂದಿ, ಪೌರ ಕಾರ್ಮಿಕರು ಹಾಗೂ ಪೊಲೀಸರಿಗೆ ಧವಸ-ಧಾನ್ಯಗಳ ಆಹಾರ ಕಿಟ್ ವಿತರಿಸಿ ಔಪಚಾರಿಕವಾಗಿ ಮಾತನಾಡುತ್ತಿದ್ದರು.

ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ನಿಯಮ ಪಾಲಿಸಿ ಇಂದು ಒಂದು ಸಾವಿರ ಮಂದಿಗೆ ಆಹಾರ ಕಿಟ್‍ಗಳನ್ನು ವಿತರಿಸಿದ್ದೇವೆ. ಮುಂದಿನ ಮೂರು ದಿನಗಳಲ್ಲಿ ಅರ್ಹರ ಮನೆ-ಮನೆಗೇ ತೆರಳಿ ಐದು ಸಾವಿರ ಆಹಾರ ಕಿಟ್‍ಗಳನ್ನು ವಿತರಿಸಲು ಸಂಕಲ್ಪ ಮಾಡಿದ್ದೇವೆ ಎಂದರು.

ಸಮಯಕ್ಕಾದವನೇ ನೆಂಟ ಎಂದು ಬಣ್ಣಿಸುತ್ತಾರೆ. ಬಡವರು ಸಂಕಷ್ಟದಲ್ಲಿ ಸಿಲುಕಿರುವಾಗ ಸಹೃದಯರ ಸಹಕಾರದಿಂದ ಶ್ರೀ ಮಠವು ಈ ಪವಿತ್ರ ಕಾರ್ಯಕ್ಕೆ ಮುಂದಾಗಿದೆ. ಯಾವುದೇ ಜಾತಿ-ಮತ, ಭೇದ-ಭಾವ ಅಥವಾ ತಾರತಮ್ಯ ಇಲ್ಲದೇ ಈ ಕಾರ್ಯವನ್ನು ಸಾಕಾರಗೊಳಿಸಲು ಯೋಜಿಸಲಾಗಿದೆ ಎಂದರು.

ಶ್ರೀ ಮಠದ ಭಕ್ತಾಧಿಗಳೂ ಹಾಗೂ ಮಹಾ ದಾನಿಗಳೂ ಅದ ಟಿ ಸಿ ವೆಂಕಟೇಶ್, ಬಿ ಎಸ್ ಕಿರಣ್ ಕುಮಾರ್, ಎನ್ ನಿರಂಜನ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು... KSRTC: ಪ್ರಯಾಣಿಕರು ಕಳೆದುಕೊಂಡಿದ ಬೆಲೆ ಬಾಳುವ ಬ್ಯಾಗ್‌ ಮರಳಿಸಿ ಪ್ರಾಮಾಣಿಕತೆ ಮೆರೆದ ತುರುವೇಕೆರೆ ಘಟಕದ ನೌಕರರು ಇಂದು ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ -ಕಿಚಡಿ ಮುದ್ದೆ, ಪೊಂಗಲ್‌ ರುಚಿಯ ಸವಿ ಮೈಸೂರು: ಬೇಡಿಕೆ ಈಡೇರಿಕೆಗೆ ಮೀನಮೇಷ ಎಣಿಸುತ್ತಿರುವ ಪ್ರಧಾನಿ, ಕೃಷಿ ಮಂತ್ರಿಗಳ ಪ್ರತಿಕೃತಿ ದಹಿಸಲು ಯತ್ನಿಸಿದ ರೈತರ ಬ... ಹೈಪರ್‌ಟೆನ್ಷನ್: ಭಾರತದ ಯುವಜನತೆಗೆ ಅಡಗಿದ ಅಪಾಯ: ಡಾ.ಸಾಯಿಶಂಕರ್ ಹುಬ್ಬಳ್ಳಿ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿಗೆ ಸಿಎಂ ಒತ್ತಾಯಿಸಿ: ಸಚಿವರಿಗೆ ವಾಯವ್ಯ ವಲಯ ನೌಕರರ ಕೂಟ ಮನವಿ "ಕೆಎಸ್‌ಆರ್‌ಟಿಸಿ ಆರೋಗ್ಯ" ಯೋಜನೆ ಕುರಿತು ನೌಕರರಿಗೆ ಪತ್ರ ಬರೆದು ಖುಷಿ ಹಂಚಿಕೊಂಡ ಸಂಸ್ಥೆ ಎಂಡಿ ಅನ್ಬುಕುಮಾರ್‌ BMTC: ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯಕ್ಕೆ ನೌಕರರಿಂದ ದಾಖಲೆ ಸಂಗ್ರಹಿಸಲು ಮೂವರು ಅಧಿಕಾರಿಗಳ ನಿಯೋಜನೆ ಮುಂದಿನ ಪೀಳಿಗೆ ಉಳಿವಿಗಾಗಿ ಸಾವಯವ ಕೃಷಿ ಅವಶ್ಯಕ: ಸಚಿವ ಮುನಿಯಪ್ಪ