ಎಪಿಎಂಸಿ ದ್ವಾರದಲ್ಲಿ ಕೊರೊನಾ ನಿಯಂತ್ರಿಸುವ ಸುರಂಗ ಸ್ಥಾಪನೆ
ಸಿಐಐ ಜತೆಗೂಡಿ ಯಂಗ್ ಇಂಡಿಯಾದಿಂದ ರಾಜ್ಯದಲ್ಲಿಯೇ ಮೊದಲ ಪ್ರಯತ್ನ
ಹುಬ್ಬಳ್ಳಿ: ಕೊರೊನಾ ತಡೆಯಲು ಸರ್ಕಾರ ಹತ್ತು ಹಲವು ಕ್ರಮ ಕೈಗೊಳ್ಳುತ್ತಿದೆ. ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆಯು ಸ್ಥಳೀಯ ಯಂಗ್ ಇಂಡಿಯಾ ( ವೈಐ) ಹಾಗೂ ಕಾನ್ಫಿಡರೇಷನ್ ಆಫ್ ಇಂಡಿಯನ್ ಇಂಡಸ್ಟ್ರಿ ( ಸಿಐಐ) ಸಹಯೋಗದಲ್ಲಿ ಅಮರಗೋಳದ ಎಪಿಎಂಸಿ ಮಹಾದ್ವಾರದ ಬಳಿ ಸೋಂಕು ಕಳೆಯುವ ಸುರಂಗ ನಿರ್ಮಿಸಿದೆ, ರಾಜ್ಯದಲ್ಲಿಯೇ ಇದೊಂದು ಮೊದಲ ವಿನೂತನ ಪ್ರಯತ್ನವಾಗಿದೆ.
ಬೃಹತ್ ,ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಇಂದು ಬೆಳಗ್ಗೆ ಈ ಸುರಂಗದ ರಚನೆ ಹಾಗೂ ನಿರ್ಮಾಣ ಪರಿಶೀಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದುತ್ತಾ, ಸಾವಿರಾರು ಸಂಖ್ಯೆಯಲ್ಲಿ ಆಗಮಿಸುವ ರೈತರು, ವ್ಯಾಪಾರಸ್ಥರ ಆರೋಗ್ಯ ರಕ್ಷಣೆಗೆ ಇದು ಸಹಕಾರಿಯಾಗಲಿದೆ, ಜಿಲ್ಲಾಡಳಿತ, ಮಹಾನಗರಪಾಲಿಕೆ ಹಾಗೂ ಸ್ಥಳೀಯ ಸಂಘಟನೆಗಳ ಸಹಭಾಗಿತ್ವದಲ್ಲಿ ಈ ಕಾರ್ಯ ಮಾಡಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.
ತಮಿಳುನಾಡಿನ ತಿರುಪ್ಪೂರನಲ್ಲಿ ಯಂಗ್ ಇಂಡಿಯಾ ಸಂಸ್ಥೆ ಇಂತಹ ಪ್ರಯತ್ನ ಮಾಡಿರುವುದನ್ನು ಕಂಡು, ಹುಬ್ಬಳ್ಳಿಯಲ್ಲಿಯೂ ಅದನ್ನು ಅನುಷ್ಠಾನಗೊಳಿಸುವ ಆಸಕ್ತಿ ಉಂಟಾಯಿತು. ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಅಗತ್ಯ ಸಹಕಾರ ನೀಡಲು ಮುಂದಾದಾಗ ನಮ್ಮ ಉತ್ಸಾಹಕ್ಕೆ ಪ್ರೋತ್ಸಾಹ ದೊರೆಯಿತು.
ಪಾರಾದಿ ಅವರಿಂದ ಸ್ಟೀಲ್ ಫ್ರೇಮ್ ಸಿದ್ಧಪಡಿಸಿ, ಹೈ ಪ್ರೆಶರ್ ಉಳ್ಳ ಫಾಗರ್ಸ್, 1 ಅಶ್ವಶಕ್ತಿಯ ಪಂಪ್ ಅಳವಡಿಸಲಾಗಿದೆ. ಸುರಂಗದ 4 ಅಡಿ ಅಂತರದಲ್ಲಿ ವ್ಯಕ್ತಿಗಳು ಬಂದಾಗ ಸೆನ್ಸಾರ್ ಮೂಲಕ ಕಾರ್ಯ ಆರಂಭವಾಗುತ್ತದೆ. ಮನುಷ್ಯ ತೊಯ್ಯದ ಹಾಗೆ ಸೋಂಕು ನಿವಾರಕ ಸಿಂಪಡಣೆಯಾಗುತ್ತದೆ. ಶೇ.1 ರ ಸೋಡಿಯಂ ಹೈಪೋಕ್ಲೋರೈಟ್ ಮಿಶ್ರಿತ ದ್ರಾವಣವನ್ನು ಮಹಾನಗರಪಾಲಿಕೆ ನಿರಂತರವಾಗಿ ಒದಗಿಸಲಿದೆ. ಯಂಗ್ ಇಂಡಿಯಾ ಮತ್ತು ಸಿಐಐ ಒಂದು ಲಕ್ಷ ರೂ.ವೆಚ್ಚದಲ್ಲಿ ಪ್ರಾಯೋಗಿಕವಾಗಿ ಈ ಕಾರ್ಯ ಕೈಗೊಂಡಿದೆ ಎಂದು ಯಂಗ್ ಇಂಡಿಯಾ ಸಂಸ್ಥೆ ಅಧ್ಯಕ್ಷ ಡಾ.ಶ್ರೀನಿವಾಸ ಜೋಷಿ ವಿವರಿಸಿದರು.
ಮಹಾನಗರಪಾಲಿಕೆ ಆಯುಕ್ತ ಮಾತನಾಡಿ, ಹುಬ್ಬಳ್ಳಿ ಎಪಿಎಂಸಿಗೆ ಪ್ರತಿನಿತ್ಯ ಸಾವಿರಾರು ರೈತರು,ವ್ಯಾಪಾರಿಗಳಿಗೆ ಸೋಂಕು ಹರಡುವಿಕೆ ತಡೆಯಲು ಈ ಪ್ರಯತ್ನ ಮಾಡಲಾಗಿದೆ,ಸಾರ್ವಜನಿಕರು ಸ್ವಲ್ಪ ತಾಳ್ಮೆಯಿಂದ ವಾಹನದಿಂದ ಇಳಿದು, ಸುರಂಗದಲ್ಲಿ ಒಮ್ಮೆ ಹಾಯ್ದು ಬರುವ ಅಭ್ಯಾಸ ರೂಢಿಸಿಕೊಂಡರೆ ಒಳ್ಳೆಯದು ಎಂದರು.
ಜಿಲ್ಲಾಧಿಕಾರಿ ದೀಪಾ ಚೋಳನ್, ಮಹಾನಗರ ಪೊಲೀಸ್ ಆಯುಕ್ತ ಆರ್.ದಿಲೀಪ್, ಮಹಾನಗರಪಾಲಿಕೆ ಪರಿಸರ ಇಂಜಿನಿಯರ್ ನಯನ, ಪೊಲೀಸ್ ಇನ್ಸ್ ಪೆಕ್ಟರ್ ಪ್ರಭು ಸೂರಿನ್, ಯಂಗ್ ಇಂಡಿಯಾದ ಸಚಿನ್, ಡಾ.ನಾಗರಾಜನಾಯಕ, ಕಿರಣ ಮಾಳವದೆ, ಸಿಐಐ ಅಧ್ಯಕ್ಷ ವಿ.ಎಸ್.ವಿ.ಪ್ರಸಾದ, ಉಪಾಧ್ಯಕ್ಷ ಅನುಪಮ ಬೇತಾಳ ಮತ್ತಿತರರು ಇದ್ದರು.
Related
You Might Also Like
ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ
ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಚಾಲಕರಿಗೆ 34100 ರೂಪಾಯಿ ಸಂಚಿತ ವೇತನ ನಿಗದಿ ಮಾಡಿರುವ ಸರ್ಕಾರ ಕಳೆದ ನವೆಂಬರ್ 1ರಿಂದಲೇ...
ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಯ ನಾಲ್ಕೂ ನಿಗಮಗಳಲ್ಲಿ 01.01.2020 ರಿಂದ 28.02.2023 ರವರೆಗಿನ ಅವಧಿಯಲ್ಲಿ ಸಂಸ್ಥೆಯ ಸೇವೆಯಿಂದ ಸೇವಾ ವಿಮುಕ್ತಿ ಹೊಂದಿದ ಅಧಿಕಾರಿ/ನೌಕರರಿಗೆ ಪರಿಷ್ಕೃತ...
BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕಾರಿ/ಸಿಬ್ಬಂದಿಗಳಿಗೆ ಇದೇ ಡಿಸೆಂಬರ್ 20ರಂದು ಬಾಕಿ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಸಲು ವ್ಯವಸ್ಥಾಪಕ ನಿರ್ದೇಶಕ ಆರ್. ರಾಮಚಂದ್ರನ್ ಇಂದು...
KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳು ಸೇವೆಯಲ್ಲಿರುವಾಗ ಅಪಘಾತ ಅಥವಾ ಸ್ವಾಭಾವಿಕವಾಗಿ ಮರಣ ಹೊಂದಿದಲ್ಲಿ ಕುಟುಂಬದವರಿಗೆ ಹೆಚ್ಚಿನ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ, ಕೆನರಾ...
KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ
ಕಲಬುರಗಿ: ನಗದು ರಹಿತ ಚಿಕಿತ್ಸೆಗಾಗಿ ಅವಶ್ಯಕವಿರುವ ಸಿಬ್ಬಂದಿಗಳ ವೈಯಕ್ತಿಕ ಹಾಗೂ ಅವರ ಅವಲಂಬಿತರ ಮಾಹಿತಿಯನ್ನು ಸಂಗ್ರಹಿಸಿ ತಂತ್ರಾಂಶದಲ್ಲಿ ನಮೂದಿಸಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ...
ಹೈಕೋರ್ಟ್ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ
ದಾವಣಗೆರೆ: ಹೈಕೋರ್ಟ್ ಆದೇಶದ ಬೆನ್ನಲ್ಲೇ ಶಾಸಕ ಸಿ.ಟಿ.ರವಿ ಅವರನ್ನು ದಾವಣಗೆರೆಯಲ್ಲಿ ಪೊಲೀಸರು ಬಿಡುಗಡೆ ಮಾಡಿದ್ದು. ಅಲ್ಲೇ ನೆರದಿದ್ದ ನೂರಾರು ಬಿಜೆಪಿ ಕಾರ್ಯಕರ್ತರು ಸಿ.ಟಿ.ರವಿಗೆ ಅದ್ದೂರಿ ಸ್ವಾಗತ ಕೋರಿದರು. ಸದನದಲ್ಲಿ...
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ
ಮಂಡ್ಯ: ಸಕ್ಕರೆ ನಾಡಿನಲ್ಲಿ ಮೂರು ದಿನಗಳ ಕಾಲ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಾಳೆ ಅಂದರೆ ಶುಕ್ರವಾರ (ಡಿ.20) ಚಾಲನೆ ಸಿಗಲಿದೆ. ಈ...
ಉತ್ತಮ ಆಡಳಿತ ಸಪ್ತಾಹ: ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಡಿಸಿ
ಬೆಂ.ಗ್ರಾ.: ಉತ್ತಮ ಆಡಳಿತ ಸಪ್ತಾಹ-2024 ರ ಅಂಗವಾಗಿ "ಇಂದೇ ಸಕಾಲ"ದಲ್ಲಿ ಹಿರಿಯ ನಾಗರಿಕರ ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸಿದ ಕೆಲವೇ ನಿಮಿಷಗಳಲ್ಲಿ ಅನುಮೋದಿಸಿ ಜಿಲ್ಲಾಧಿಕಾರಿಗಳಿಂದ ಹಿರಿಯ ನಾಗರಿಕರಿಗೆ...
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಸಿ.ಟಿ.ರವಿ ಬಂಧನ
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಅವಹೇಳನಕಾರಿ ಪದ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಎಂಎಲ್ಸಿ ಸಿ.ಟಿ.ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಎಫ್ಐಆರ್ ದಾಖಲಾದ ಬೆನ್ನಲ್ಲೇ ಸಿ.ಟಿ.ರವಿ...
ಸಾರ್ವಜನಿಕರ ಸಮಸ್ಯೆ ಶೀಘ್ರ ಪರಿಹರಿಸಿ: ಅಧಿಕಾರಿಗಳಿಗೆ ಡಿಸಿ ಸೂಚನೆ
ಬೆಂ.ಗ್ರಾ.: ಉತ್ತಮ ಆಡಳಿತ ಸಪ್ತಾಹ-2024 ದ ಅಂಗವಾಗಿ ಅಧಿಕಾರಿಗಳು ಸಪ್ತಾಹದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಿ ಮತ್ತು ಸುಧಾರಿತ ಸೇವೆ ಒದಗಿಸಿ ಎಂದು ಜಿಲ್ಲಾಧಿಕಾರಿ ಡಾ.ಎನ್...
KSRTC:ಶೇ.96ರಷ್ಟು ನೌಕರರಿಗೆ ಬೇಡದ ಮುಷ್ಕರಕ್ಕೆ ನಮ್ಮ ಬೆಂಬಲವಿಲ್ಲ: ಜಂಟಿಗೆ ಲಿಖಿತ ಹಿಂಬರಹ ಕೊಟ್ಟ ಒಕ್ಕೂಟ
ಬೆಂಗಳೂರು: ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಇದೇ ಡಿ.31 ರಿಂದ ಕರೆ ನೀಡಿರುವ ಮುಷ್ಕರಕ್ಕೆ ನಮ್ಮ ಬೆಂಬಲ ನೀಡದಿರಲು ತೀರ್ಮಾನಿಸಿದ್ದೇವೆ ಎಂದು ಕರ್ನಾಟಕ...
ಕಾರ್ಮಿಕ ಸಂಘಟನೆಗಳು ಕರೆ ಕೊಟ್ಟಿರುವ ಡಿ.31ರ ಮುಷ್ಕರಕ್ಕೆ ನಮ್ಮ ಬೆಂಬಲವಿಲ್ಲ: KSRTC ಅಧಿಕಾರಿಗಳು/ನೌಕರರ ಒಕ್ಕೂಟ
7ನೇ ವೇತನ ಆಯೋಗದಂತೆ ಸರಿ ಸಮಾನ ವೇತನ ಜಾರಿಗೆ ಒತ್ತಾಯ ಕಾರ್ಮಿಕ ಸಂಘಟನೆಗಳ ಮುಷ್ಕರದಲ್ಲಿ ನಾವು ಭಾಗಿಯಾಗುವುದಿಲ್ಲ ಸರ್ಕಾರ ಸರಿ ಸಮಾನ ವೇತನ ಮಾಡಲೇ ಬೇಕು ಇಲ್ಲ...