NEWS

ಏಳನೇ ವೇತನ ಆಯೋಗದ ಜಾರಿಯಾಗಲಿದೆ ಎಂಬ  ನೌಕರರ ನಿರೀಕ್ಷೆಗೆ ಮತ್ತೆ ತಣ್ಣೀರೆರಚಿದ ಸರ್ಕಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಲೋಕಸಭೆ ಚುನಾವಣೆಯ ನೀತಿ ಸಂಹಿತಿ ಮುಗಿದ ಬಳಿಕ ಏಳನೇ ವೇತನ ಆಯೋಗದ ಜಾರಿಯಾಗಲಿದೆ ಎಂಬ ನಿರೀಕ್ಷೆಯಲ್ಲಿ ಸರ್ಕಾರಿ ನೌಕರರು ಇದ್ದರು. ಆದರೆ ಅವರ ನಿರೀಕ್ಷೆಗೆ ರಾಜ್ಯ ಸರ್ಕಾರ ತಣ್ಣೀರೆರಚಿದೆ.

ಈ ಮೂಲಕ ಏಳನೇ ವೇತನ ಆಯೋಗದ ಜಾರಿಯಾಗುತ್ತದೆ ಇದರಿಂದ ನಮ್ಮ ವೇತನ ಹೆಚ್ಚಳವಾಗುತ್ತದೆ ಎಂಬ ಆಸೆಯಲ್ಲಿದ್ದ ನೌಕರರಿಗೆ ಸರ್ಕಾರ ಮತ್ತೆ ನಿರಾಸೆಯುಂಟುಮಾಡಿದೆ.

ಹೌದು! ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಗುರುವಾರ (ಜುಲೈ 04) ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿ ಏಳನೇ ವೇತನ ಆಯೋಗದ ಜಾರಿ ಕುರಿತು ಚರ್ಚೆಯಾಗಲಿದೆ ಎನ್ನುವ ನಿರೀಕ್ಷೆ ಇತ್ತು. ಅದರಂತೆ ಕೆಲ ದಿನಗಳ ಹಿಂದೆಯಷ್ಟೇ ಈ ಸಂಬಂಧ ಸರ್ಕಾರಿ ನೌಕರರ ಸಂಘದ ನಿಯೋಗ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತ್ತು. ಈ ವೇಳೆ ಏಳನೇ ವೇತನ ಆಯೋಗದ ಜಾರಿ ಅನುಷ್ಠಾನದ ಕುರಿತು ಮುಖ್ಯಮಂತ್ರಿಗಳು ಭರವಸೆ ನೀಡಿದ್ದರು.

ಆದರೆ, ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಿನ್ನೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಏಳನೇ ವೇತನ ಆಯೋಗದ ಜಾರಿ ಕುರಿತು ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ. ಈ ಮೂಲಕ ಲೋಕಸಭೆ ಚುನಾವಣೆ ನಂತರ 7ನೇ ವೇತನ ಆಯೋಗ ಜಾರಿಗೆ ಬರುತ್ತೆ ಎಂದು ಕಾಯುತ್ತಿದ್ದ ಸರ್ಕಾರಿ ನೌಕರರಲ್ಲಿ ಮತ್ತೆ ಬೇಸರ ಮೂಡಿಸಿದೆ.

ನೀತಿ ಸಂಹಿತೆ ಹಿಂದೆ ಪಡೆದ ನಂತರ ನಡೆದಿರುವ ಮೂರನೇ ಸಚಿವ ಸಂಫುಟ ಸಭೆ ಇದಾಗಿದ್ದು, ಈ ಬಗ್ಗೆ ಚರ್ಚೆ ಮಾಡದಿರುವುದು ಸರ್ಕಾರಿ ನೌಕರರಿಗೆ ನಿರಾಸೆಯಾದಂತಾಗಿದೆ. ಸಿಎಂ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಹಲವು ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. ಆದರೆ, 7ನೇ ವೇತನ ಆಯೋಗ ಜಾರಿಗೆ ಯಾವುದೇ ನಿರ್ಧಾರಕ್ಕೆ ಬರಲಿಲ್ಲ.

ಇನ್ನು ಈ ಬಗ್ಗೆ ಸಂಪುಟ ಸಭೆಯ ಬಳಿಕ ಕಾನೂನು, ನ್ಯಾಯ, ಮಾನವಹಕ್ಕುಗಳು, ಸಂಸದೀಯ ವ್ಯವಹಾರ ಮತ್ತು ಶಾಸನರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್‌.ಕೆ. ಪಾಟೀಲ ಅವರು ಸುದ್ದಿಗೋಷ್ಠಿ ನಡೆಸಿ, ಸಂಪುಟ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ತೀರ್ಮಾನಗಳ ಕುರಿತು ಮಾಹಿತಿ ನೀಡಿದರು.

ಡಾ. ಜಸ್ಟೀಸ್ ಕೆ ಭಕ್ತವತ್ಸಲ ಆಯೋಗವು ಮಾಡಿರುವ ಶಿಫಾರಸ್ಸನ್ನು ಕೈಬಿಡುವ ಹಾಗೂ ಹಾಲಿ ವ್ಯವಸ್ಥೆಗೆ ಸಂಬಂಧಿಸಿದಂತೆ ಸರ್ಕಾರದ ಆದೇಶ ಸಂಖ್ಯೆ: ಹಿಂವಕ 114 ಬಿಸಿಎ 2022 (ಭಾ-1) ದಿನಾಂಕ: 04.11.2023 ರಲ್ಲಿ ಜಾರಿಗೊಳಿಸಿರುವ 03 ಶಿಫಾರಸುಗಳ ಪೈಕಿ “To bring all urban and Local Bodies Election wing under the control of DPAR” ಎಂಬ ಶಿಫಾರಸನ್ನು ಕೈಬಿಡುವ ಬಗ್ಗೆ ತೀರ್ಮಾನಿಸಲಾಗಿದೆ.

ಇನ್ನು ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯ ಚುನಾವಣಾ ಘಟಕಗಳನ್ನು ಆಯಾ ಇಲಾಖೆಗಳ ನಿಯಂತ್ರಣದಲ್ಲಿ ಉಳಿಸಿ, ಪ್ರಸ್ತುತ ಚಾಲ್ತಿಯಲ್ಲಿರುವ ವ್ಯವಸ್ಥೆಯನ್ನು ಮುಂದುವರಿಸಲು ಸಚಿವ ಸಂಪುಟ ನಿರ್ಣಯಿಸಿದೆ ಎಂದು ತಿಳಿಸಿದರು.

ಕೆಜಿಐಡಿ ವಿಮಾ ಯೋಜನೆಯ ಕಡ್ಡಾಯ ವಿಮಾದಾರರಿಗೆ 2018-20 ದ್ವೈವಾರ್ಷಿಕ ಅವಧಿಗೆ ಅಧಿಲಾಭಾಂಶ (Bonus) ಘೋಷಣೆ ಮಾಡಲು ಪ್ರಸ್ತಾಪಿಸಲಾಗಿದ್ದು, 01.04.2018 ರಿಂದ 31.03.2020ರ ದ್ವೈವಾರ್ಷಿಕ ಅವಧಿಯಲ್ಲಿ ಚಾಲ್ತಿಯಲ್ಲಿದ್ದ ಎಲ್ಲ ಪಾಲಿಸಿಗಳಿಗೆ ವಿಮಾ ಮೊತ್ತದ ಮೇಲೆ ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ ₹80 ರಂತೆ ಲಾಭಾಂಶ (ಬೋನಸ್) ಘೋಷಿಸಲು

ಮತ್ತು ಅವಧಿ ಪೂರ್ಣ, ಮರಣಜನ್ಯ ಹಾಗೂ ವಿಮಾ ತ್ಯಾಗ ಮೌಲ್ಯಗಳಿಂದ 01.04.2020 ರಿಂದ 31.03.2022 ರ ಅವಧಿಯಲ್ಲಿ ಹೊರ ಹೋಗಿರುವ ವಿಮಾ ಪಾಲಿಸಿಗಳಿಗೆ ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ ₹80ರಂತೆ ಮಧ್ಯಂತರ ಲಾಭಾಂಶವನ್ನು (ಇಂಟರೀಮ್ ಬೋನಸ್) ಘೋಷಿಸಲು ಸಚಿವ ಸಂಪುಟ ನಿರ್ಣಯಿಸಿದೆ ಎಂದು ವಿವರ ನೀಡಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ