NEWSದೇಶ-ವಿದೇಶ

ಏ.14ರ ನಂತರ ಲಾಕ್‌ಡೌನ್‌ ಪ್ರಸ್ತಾಪ ಇಲ್ಲ

ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಸ್ಪಷ್ಟನೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಏಪ್ರಿಲ್ 14ರ ನಂತರ ಲಾಕ್‍ಡೌನ್ ಮುಂದುವರಿಸುವ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ತಿಳಿಸಿದ್ದಾರೆ.

ಏ.14ರ ನಂತರ ಲಾಕ್‍ಡೌನ್ ಮುಂದುವರಿಸುವ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ. ಲಾಕ್‍ಡೌನ್ ಮುಂದುವರಿಯಲಿದೆ ಎಂಬ ಸುದ್ದಿ ಕೇಳಿ ನನಗೆ ಶಾಕ್ ಆಯ್ತು. ಹಾಗೆಯೇ ಸರ್ಕಾರ ಮುಂದೆ ಈ ರೀತಿಯ ಯಾವ ಯೋಜನೆಗಳು ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಭಾರತದಲ್ಲಿ ಕೊರೊನಾ ಸೋಂಕಿತರು ಮತ್ತು ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ತಡೆಗೆ ಸರ್ಕಾರ ಲಾಕ್‍ಡೌನ್ ವಿಸ್ತರಿಸಲಿದೆ ಎಂಬ ಚರ್ಚೆಗಳು ಆರಂಭಗೊಂಡಿವೆ. ಈ ನಡುವೆ ವಾಟ್ಸಪ್ ಸೇರಿದಂತೆ ಸೋಶಿಯಲ್ ಮೀಡಿಯಾದಲ್ಲಿ ಕೆಲ ಸುಳ್ಳು ಸುದ್ದಿಗಳು ವೈರಲ್ ಆಗುತ್ತಿವೆ. ಹಾಗಾಗಿ ಸೋಮವಾರ ರಾಜೀವ್ ಗೌಬಾ ಸ್ಪಷ್ಟನೆ ನೀಡುವ ಮೂಲಕ ಎಲ್ಲ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಜತೆಗೆ ಸಾವಿನ ಸಂಖ್ಯೆಯಲ್ಲೂ ಏರಿಕೆ ಆಗುತ್ತಿದೆ. ಆದರೂ ಜನರು ಮಾತ್ರ ನಮಗೂ ಇದಕ್ಕೂ ಸಂಬಂಧ ಇಲ್ಲ ಎಂಬಂತೆ ವರ್ತಿಸುತ್ತಿರುವುದು ಆತಂಕವನ್ನು ಉಂಟು ಮಾಡಿದೆ.

 

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...