NEWS

ಏ.19 ಮತ್ತು 20ರಂದು ಐದು ಕೊರೊನಾ ಪಾಸಿಟಿವ್‌

ಕಳೆದ ವಾರಕ್ಕೆ ಹೋಲಿಸಿದರೆ ಇಳಿಮುಖದಲ್ಲಿ ಸಾಗುತ್ತಿದೆ ಸೋಂಕಿತರ ಪ್ರಮಾಣ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಿನ್ನೆಯಿಂದ ಇಂದು ಮಧ್ಯಾಹ್ನದವರೆಗೆ 5 ಹೊಸ ಕೊರೊನಾ ಸೋಂಕಿತ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 395ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಪಾಸಿಟಿವ್‌ ಪ್ರಕಣ ಕೆಳೆದ ವಾರಕ್ಕೆ ಹೋಲಿಸಿದರೆ ಈ ವಾರದಲ್ಲಿ ಗಣನೀಯವಾಗಿ ಕಡಿಮೆ ಆಗುತ್ತಿರುವುದು ಕಂಡು ಬಂದಿದೆ. ಇದು ಹೀಗೆಯೇ ಮುಂದುವರಿದರೆ ಲಾಕ್‌ಡೌನ್‌ ಮುಗಿಯುವ ವೇಳೆಗೆ ಹತೋಟಿಗೆ ಬರುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದೆ.

ಇನ್ನು ರಾಜ್ಯದಲ್ಲಿ ಸಾವಿನ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಕೊರೊನಾ ಪಾಸಿಟಿವ್‌ 17,265, ಗುಣಮುಖರಾಗಿರುವವರು 2,547 ಮತ್ತು ಸೋಂಕಿನಿಂದ ಮೃತಪಟ್ಟವರು 543ಕ್ಕೆ ಏರಿದೆ.

ವಿಶ್ವಾದ್ಯಂತ ಈವರೆಗೆ ಸೋಂಕಿತರ ಸಂಖ್ಯೆ 24,04,249, ಗುಣಮುಖರಾದವರು 6,24,725 ಮಂದಿ, ಇನ್ನು 1,65,234 ಮಂದಿ ಸೋಂಕಿನಿಂದ ಅಸುನೀಗಿದ್ದಾರೆ ಎಂದು ವಿಶ್ವಾರೋಗ್ಯ ಸಂಸ್ಥೆ ವರದಿ ತಿಳಿಸಿದೆ.

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ನಿನ್ನೆಯಿಂದ ಇಂದು ಮಧ್ಯಾಹ್ನದ ವರೆಗೂ 395 ಇದೆ. ಇದು ಇನ್ನು ಕಡಿಮೆ ಆಗಬೇಕೆಂದರೆ ಎಲ್ಲರೂ ಮನೆಯಲ್ಲೇ ಇದ್ದು, ಅಗತ್ಯವಿದ್ದರಷ್ಟೇ ಹೊರ ಬರುವ ಪರಿಪಾಠವನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಪಾಲಿಸಬೇಕಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ