NEWS

ಏ.28ರಂದು ಕಲಬುರಗಿಯಲ್ಲಿ ಆರು ಸೇರಿ 8 ಕೊರೊನಾ ಸೋಂಕಿತರು ಪತ್ತೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕದಲ್ಲಿ ಇಂದು ಮಧ್ಯಾಹ್ನದವರೆಗೆ 8 ಹೊಸ ಕೊರೊನಾ ಸೋಂಕಿತರ ಪ್ರಕರಣಗಳು ಖಚಿತವಾಗಿದ್ದು, ಒಟ್ಟಾರೆ ಸೊಂಕಿತರ ಸಂಖ್ಯೆ 520ಕ್ಕೆ ಏರಿದೆ. ಇದುವರೆಗೆ ಒಟ್ಟು 198 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನು 20 ಮಂದಿ ಮೃತಪಟ್ಟಿದ್ದಾರೆ.

ಇಂದು ಒಂದೇದಿನ ಮತ್ತೆ ಕಲಬುರಗಿ ಜಿಲ್ಲೆ ಹೊಸ ಆರು ಪ್ರಕರಣಗಳು ಕಂಡುಬಂದಿದ್ದು, ಉಳಿದಂತೆ ಬೆಂಗಳೂರು ಮತ್ತು ಗದಗದಲ್ಲಿ ತಲಾ ಒಂದು ಪ್ರಕರಣ ಕಂಡು ಬಂದಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಗಣನಿಯವಾಗಿ ಏರಿಕೆ ಆಗುತ್ತಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಕಲಬುರಗಿಯಲ್ಲಿ ಆರರಲ್ಲಿ ನಾಲ್ವರು ಮಹಿಳೆಯರು ಮತ್ತು ಇಬ್ಬರು ಪುರುಷರು ಇದ್ದಾರೆ. ಇನ್ನು ಬೆಂಗಳೂರು ಮತ್ತು ಗದಗದಲ್ಲಿ ಒಬ್ಬೊಬ್ಬ ಪುರುಷನಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ 29,451 ಕ್ಕೇರಿದ ಸೋಂಕಿತರ ಸಂಖ್ಯೆ

ಇನ್ನು ದೇಶದಲ್ಲಿ ಈವರೆಗೆ 29,451 , ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 939 ಮಂದಿ ಮೃತಪಟ್ಟಿದ್ದಾರೆ. 6,868 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 30,66,417  ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 2,11,663 ಜನರು ಮೃತಪಟ್ಟಿದ್ದಾರೆ. 9,22,448, ಮಂದಿ ರೋಗದಿಂದ ಗುಣಮುಖರಾಗಿದ್ದಾರೆ.

 

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ