NEWSನಮ್ಮರಾಜ್ಯ

ಏ.29- 9ಮಂದಿಯಲ್ಲಿ ಕೊರೊನಾ ಪಾಸಿಟಿವ್‌ ದೃಢ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು ಇಂದು (ಏ.29) ಒಂದೇದಿನ 9 ಪ್ರಕರಣಗಳು ಕಂಡುಬಂದಿದ್ದು, ಅದರಲ್ಲಿ ಕಲಬುರಗಿಯಲ್ಲೇ ಎಂಟು ಹೊಸ ಸೋಂಕು ದೃಢಪಟ್ಟಿದ್ದು, ಬೆಳಗಾವಿಯಲ್ಲಿ ಒಂದು ಪತ್ತೆಯಾಗಿದೆ.

ಕರ್ನಾಟಕದಲ್ಲಿ ಈವರೆಗೆ 532 ಮಂದಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿದ್ದು, ಅದರಲ್ಲಿ 20ಮಂದಿ ಮೃತಪಟ್ಟಿದ್ದಾರೆ. ನಿನ್ನೆ 198ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದರು ಈ ಮೂಲಕ ಇಂದು 314ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆದರೆ ಕಲಬುರಗಿಯಲ್ಲಿ ನಿನ್ನೆ 6 ಹೊಸ ಪ್ರಕರಣಗಳು ಪತ್ತೆಯಾಗಿದ್ದವು ಮತ್ತೆ ಇಂದು ಎಂಟು ಹೊಸ ಪ್ರಕರಣಗಳು ಪತ್ತೆಯಾಗುವ ಮೂಲಕ ಕಲಬುರಗಿಯಲ್ಲಿ ತನ್ನ ರುದ್ರನರ್ತನವನ್ನು ಕೊರೊನಾ ವೈರಸ್‌ ಮುಂದುವರಿಸಿದೆ. ಈ ನಡುವೆ ಬೆಂಗಳೂರಿನಲ್ಲಿ ಯಾವುದೇ ಪಾಸಿಟಿವ್‌ ಪ್ರಕರಣ ವರದಿಯಾಗಿಲ್ಲಿ.

ಇನ್ನು ಮೈಸೂರು, ಬೀದರ್‌, ವಿಜಯಪುರದಲ್ಲಿ ಯಾವುದೇ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿಲ್ಲ. ಇನ್ನು ದೇಶದಲ್ಲಿ ಕೊರೊನಾ ಪೀಡಿದರ ಸಂಖ್ಯೆ 30 ಸಾವಿರ ಗಡಿ ದಾಟಿದ್ದು, ಒಂದೆಡೆ ಜನರಲ್ಲಿ ಆತಂಕ ಸೃಷ್ಟಿಸಿದೆ.

ದೇಶದಲ್ಲಿ 31,332 ಕ್ಕೇರಿದ ಸೋಂಕಿತರ ಸಂಖ್ಯೆ

ಇನ್ನು ದೇಶದಲ್ಲಿ ಈವರೆಗೆ 29,451 , ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 1,007 ಮಂದಿ ಮೃತಪಟ್ಟಿದ್ದಾರೆ. 7,696 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 31,40,285  ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 2,18,028 ಜನರು ಮೃತಪಟ್ಟಿದ್ದಾರೆ. 9,59,630 ಮಂದಿ ರೋಗದಿಂದ ಗುಣಮುಖರಾಗಿದ್ದಾರೆ.

 

 

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ