NEWSಬೆಂಗಳೂರುರಾಜಕೀಯ

ಐಟಿ-ಬಿಟಿ ಸಂಸ್ಥೆಗಳ ಜತೆ ಮತದಾನ ಜಾಗೃತಿ : ಮತದಾನ ದಿನ  ಅನ್ಯಕಾರ್ಯ ಬಿಡಿ ಮತಗಟ್ಟೆಗೆ ಬನ್ನಿ – ತುಷಾರ್ ಗಿರಿನಾಥ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪ್ರಜಾಪ್ರಭುತ್ವದ ಯಶಸ್ಸು ಚುನಾವಣೆಯಲ್ಲಿ ಗರಿಷ್ಠ ಮತದಾನದೊಂದಿಗೆ ಆಂತರಿಕವಾಗಿ ಸಂಬಂಧ ಹೊಂದಿದೆ ಎಂದು ಬೆಂಗಳೂರು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.

ಸ್ವೀಪ್ ಕಾರ್ಯಕ್ರಮದಡಿ ORRCA ಸಹಯೋಗದೊಂದಿಗೆ ಮಾನ್ಯತಾ ಬಿಸಿನೆಸ್ ಪಾರ್ಕ್ ನಲ್ಲಿ ಇಂದು ನಡೆದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ  ಮಾತನಾಡಿದ ಅವರು, ಎಲ್ಲ ಐಟಿ-ಬಿಟಿ ಸಂಸ್ಥೆ, ಕೈಗಾರಿಕಾ ಪ್ರದೇಶಗಳಲ್ಲಿ ಮತದಾನ ಜಾಗೃತಿ ವೇದಿಕೆ (Voter Awareness forum) ಸಿದ್ದಪಡಿಸಕೊಂಡು ಆ ಮೂಲಕ ಮತದಾನ ಮಾಡುವ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಸಾರ್ವತ್ರಿಕ ವಿಧಾನಸಭೆ ಚುನಾವಣೆಗಾಗಿ ಎಲ್ಲ ರೀತಿಯ ತಯಾರಿಯನ್ನು ಮಾಡಿಕೊಳ್ಳಲಾಗಿದೆ.  ಮೇ 10 ರಂದು ಮತದಾನ ನಡೆಯಲಿದೆ. ಆ ದಿನ ಮತದಾನ ಮಾಡುವ ಉದ್ದೇಶಕ್ಕಾಗಿ ಐಟಿ-ಬಿಟಿ ಸಂಸ್ಥೆ, ಕೈಗಾರಿಕಾ ಪ್ರದೇಶಗಳಲ್ಲಿ ಕೆಲಸ ಮಾಡುವವರಿಗೆ ರಜೆಯನ್ನು ನೀಡಲಾಗುತ್ತದೆ.

ಎಲ್ಲರೂ ಮತದಾನ ಮಾಡಬೇಕೆಂಬ ಉದ್ದೇಶದಿಂದ ರಜೆಯನ್ನು ನೀಡಲಾಗುತ್ತದೆ. ಆದರೆ, ಅದನ್ನು ಸಾಕಷ್ಟುಮಂದಿ ದುರುಪಯೋಗಪಡಿಸಿಕೊಳ್ಳುತ್ತಾರೆ. ಈ ಸಂಬಂಧ ಮತದಾನ ದಿನ  ಅನ್ಯಕಾರ್ಯಗಳಿಗೆ ಬಳಸಿಕೊಳ್ಳದೆ ಮತಗಟ್ಟೆಗಳಿಗೆ ಭೇಟಿ ನೀಡಿ ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಬೇಕೆಂದು ಮನವಿ ಮಾಡಿದರು.

ಮತದಾನ ಪಟ್ಟಿಯಲ್ಲಿ ಹೆಸರಿರುವವರಿಗೆ 10 ದಿನದ ಮುಂಚಿತವಾಗಿಯೇ ಮತದಾನ ಮಾಡುವ ಚೀಟಿಯನ್ನು ಮನೆಗೆ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತದೆ. ಜೊತೆಗೆ ಓಟರ್ ಹೆಲ್ಪ್ ಲೈವ್ ತಂತ್ರಾಂಶವನ್ನು ಡೌನ್ಲೋಡ್ ಮಾಡಿಕೊಂಡು ಅದರ ಮೂಲಕ ಮತದಾನ ಮಾಡುವ ಮತಗಟ್ಟೆಯ ಮಾಹಿತಿ ಸೇರಿದಂತೆ ಇನ್ನಿತರೆ ಅಗತ್ಯ ಮಾಹಿತಿಯನ್ನು ಪಡೆದುಕೊಳ್ಳಬಹುದು ಎಂದು ತಿಳಿಸಿದರು.

ಅಂಗವಿಕಲರ ಐಕಾನ್  ರಂಜನಿ ರಾಮಾನುಜಮ್  ಮಾತನಾಡಿ, ಪ್ರತಿಯೊಬ್ಬರೂ ತಪ್ಪದೆ ಮತ ಚಲಾಯಿಸೋಣ, ಎಲ್ಲರೂ ತಪ್ಪದೆ ಮತದಾನ ಮಾಡಿ ಶೇಕಡಾವಾರು ಮತದಾನ ಪ್ರಮಾಣ ಹೆಚ್ಚಿಸೋಣ. ಇದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಈ ವೇಳೆ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಸಂಗಪ್ಪ, ವಲಯ ಆಯುಕ್ತ ಪಿ.ಎನ್.ರವೀಂದ್ರ, ಸ್ವೀಪ್ ನೋಡಲ್ ಅಧಿಕಾರಿ ಸಿದ್ದೇಶ್ವರ್, ಜಂಟಿ ಆಯುಕ್ತರಾದ ಪಲ್ಲವಿ, ಮತದಾನ ಜಾಗೃತಿ ಮೂಡಿಸುವ ನಮ್ಮ ಬೆಂಗಳೂರು ಐಕಾನ್ಸ್ ಗಳಾದ ಮಾಸ್ಟರ್ ಆನಂದ್, ಮೋಹನ್ ಕುಮಾರ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ: ಬಿಬಿಎಂಪಿ ವತಿಯಿಂದ ಮತದಾನ ಜಾಗೃತಿ ಜಾಥಾ:  ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಸಿದ್ದಯ್ಯ ಪುರಾಣಿಕ್ ರಸ್ತೆ, ಬಸವೇಶ್ವರನಗರದಲ್ಲಿರುವ ಸರ್ಕಾರಿ ಹೊಮಿಯೋಪತಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಮತ್ತು ಸರ್ಕಾರಿ ಯುನಾನಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ನಡೆಸಲಾಯಿತು.

ಜಾಥಾ ಕಾರ್ಯಕ್ರಮದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರ ಹಾಗೂ ನೋಡಲ್ ಅಧಿಕಾರಿ ಉಮೇಶ್, ಸಹಾಯಕ ಅಭಿಯಂತರಾದ ವಿಜಯಕುಮಾರ್, ಕಂದಾಯಾಧಿಕಾರಿ ರಾಜೇಂದ್ರನ್, ಕಾಲೇಜು ವಿದ್ಯಾರ್ಥಿಗಳು ಹಾಗೂ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು  ದಾಸರಹಳ್ಳಿ, ಬಸವೇಶ್ವರನಗರ ಹಾಗೂ ಗೋವಿಂದರಾಜನಗರ ವಿವಿಧ ಪ್ರದೇಶದಲ್ಲಿ ಜಾಗೃತಿ ಜಾಥಾ ನಡೆಸಿದರು.

Leave a Reply

error: Content is protected !!
LATEST
ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು