NEWSದೇಶ-ವಿದೇಶ

ಒಗ್ಗಟ್ಟಿನಿಂದ  ಹೋರಾಡಿದರೆ ಕೋವಿಡ್-19 ನಿಯಂತ್ರಣ ಸಾಧ್ಯ

ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ l ಪ್ರಧಾನಿ ನರೇಂದ್ರ ಮೋದಿ ಅಭಿಮತ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ದೇಶದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಕುರಿತು ಹಾಗೂ ಸಮುದಾಯದಲ್ಲಿ ಹರಡುವ ಸಾಧ್ಯತೆಗಳ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಳವಳ ವ್ಯಕ್ತಪಡಿಸಿದ್ದಾರೆ.

ಇಂದು ಕೋವಿಡ್-19 ಕುರಿತು ಹಮ್ಮಿಕೊಂಡಿದ್ದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಲ್ಲಿ, ದೇಶದಲ್ಲಿ ಅತಿ ಹೆಚ್ಚು ಕೋವಿಡ್-19 ಹೊಂದಿರುವ ನಗರಗಳನ್ನು ಹಾಟ್ ಸ್ಪಾಟ್ ಗಳೆಂದು ಗುರುತಿಸಿ, ಸೀಲ್ ಡೌನ ಮಾಡುವ ಮೂಲಕ ಹಾಗೂ ಇತರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಮೂಲಕ ರಾಜ್ಯಗಳು ಮಾಡುತ್ತಿರುವ ನಿಯಂತ್ರಣ ಪ್ರಯತ್ನ ಶ್ಲಾಘಿಸಿದ್ದಾರೆ.

ಕೋವಿಡ್-19 ನಿಯಂತ್ರಣಕ್ಕೆ ನಾವು ಒಗ್ಗಟ್ಟಿನಿಂದ  ಹೋರಾಡಿದರೆ ಮಾತ್ರವೇ ಯಶಸ್ವಿಯಾಗಲು ಸಾಧ್ಯ,  ದೇಶದಲ್ಲಿ ಕೋವಿಡ್ ಪ್ರಕರಣಗಳ ಬೆಳವಣಿಗೆಯ ದರ ಲಾಕ್ ಡೌನ್ ನಂತರ ಶೇ. 28 ರಿಂದ ಶೇ. 14 ಕ್ಕೆ ಇಳಿದಿರುವುದು ಸಮಾಧಾನದ ಸಂಗತಿ. ರೋಗಿಗಳಿಗೆ ವೈದ್ಯಕೀಯ ಚಿಕಿತ್ಸೆ ನೀಡುವ ಕುರಿತು ಹೆಚ್ಚು ಗಮನ ಹರಿಸಬೇಕಾಗಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರವು ದೇಶದ 142 ನಗರಗಳನ್ನು ಹಾಟ್ ಸ್ಪಾಟ್ ಗಳೆಂದು ಗುರುತಿಸಲಾಗಿದೆ. ಈ ಹಾಟ್ ಸ್ಪಾಟ್ ಗಳಲ್ಲಿ ತೀವ್ರ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕಾದ ಅಗತ್ಯವಿದೆ.  ಈ ವರೆಗೆ 2.84 ಲಕ್ಷ ಪಿಪಿಇ ಕಿಟ್ ಗಳನ್ನು ಪೂರೈಸಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೂರೈಸಲಾಗುವುದು. ಪ್ರತಿ ಎರಡು ದಿನಗಳಿಗೊಮ್ಮೆ 2 ಲಕ್ಷ ಮಾಸ್ಕ್ ಗಳನ್ನು ಒದಗಿಸಲು ಕ್ರಮ ವಹಿಸಲಾಗುತ್ತಿದೆ.

ದೇಶದಲ್ಲಿ ಕೋವಿಡ್-19 ಪರೀಕ್ಷಾ ‍ಪ್ರಯೋಗಾಲಯಗಳ ಸಂಖ್ಯೆ 220ಕ್ಕೆ ಹೆಚ್ಚಿಸಲಾಗಿದೆ. ಪ್ರಸ್ತುತ ದಿನಕ್ಕೆ 15,000 ರೋಗಿಗಳ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಏಪ್ರಿಲ್ 30 ರ ವೇಳೆಗೆ ಪರೀಕ್ಷಾ ಪ್ರಯೋಗಾಲಯಗಳ ಸಂಖ್ಯೆಯನ್ನು 300 ಕ್ಕೆ ಹೆಚ್ಚಿಸಲಾಗುವುದು. ಮೇ 31ರ ವೇಳೆಗೆ ಪ್ರತಿ ದಿನ 1 ಲಕ್ಷ ರೋಗಿಗಳನ್ನು ಪರೀಕ್ಷೆ ನಡೆಸುವ ಗುರಿ ಹೊಂದಲಾಗಿದೆ.ಕೋವಿಡ್-19 ಪರೀಕ್ಷಾ ಸೌಲಭ್ಯ ಹೆಚ್ಚಿಸುವ ನಿಟ್ಟಿನಲ್ಲಿ ಐಸಿಎಂಆರ್ ಗೆ ಅರ್ಜಿ ಸಲ್ಲಿಸುವಂತೆ ಖಾಸಗಿ ಪ್ರಯೋಗಾಲಯಗಳು ಮತ್ತು ವೈದ್ಯಕೀಯ ಕಾಲೇಜುಗಳಿಗೆ ಸಲಹೆ ನೀಡುವಂತೆ ಪ್ರಧಾನ ಮಂತ್ರಿಯವರು ಸೂಚಿಸಿದರು.

ಪ್ರದಾನ ಮಂತ್ರಿಗಳ ನೇತೃತ್ವದಲ್ಲಿ ಕೋವಿಡ್ 19 ರ ವಿರುದ್ಧದ ಸಮರದಲ್ಲಿ ಗೆಲುವು ನಿಶ್ಚಿತ ಎಂಬ ವಿಶ್ವಾಸವನ್ನು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ವ್ಯಕ್ತಪಡಿಸಿದರು. ಪ್ರಧಾನ ಮಂತ್ರಿಯವರು ನಗರಗಳಲ್ಲಿ ಸಿಲುಕಿಕೊಂಡಿರುವ ಕಾರ್ಮಿಕರನ್ನು ಹಳ್ಳಿಯ ಜನರು ಸ್ವೀಕರಿಸದ ಕಾರಣ ಹಳ್ಳಿಗಳಿಗೆ ಕಳುಹಿಸದಂತೆ ಸಲಹೆ ನೀಡಿದರು.

ಮೀನು ಸಂಸ್ಕರಣಾ ಚಟುವಟಿಕೆಗಳಿಗೆ ವಿನಾಯಿತಿ

ಮೀನುಗಾರಿಕೆ ಮತ್ತು ಮೀನು ಸಂಸ್ಕರಣಾ ಚಟುವಟಿಕೆಗಳಿಗೆ ಏಪ್ರಿಲ್ 10ರಂದು ಲಾಕ್ ಡೌನ್ ನಿಂದ ವಿನಾಯಿತಿ ನೀಡಲಾಗಿದೆ. ಇದರಿಂದ ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಮೀನುಗಾರರಿಗೆ ಅನುಕೂಲವಾಗಲಿದೆ ಎಂದು ಪ್ರಧಾನ ಮಂತ್ರಿ ತಿಳಿಸಿದ್ದಾರೆ

ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಅಗತ್ಯ ವಸ್ತುಗಳ ಮಾರಾಟವಾಗುತ್ತಿರುವ ಬಗ್ಗೆ ವ್ಯಾಪಕ ದೂರುಗಳಿದ್ದು, ರಾಜ್ಯ ಸರ್ಕಾರಗಳು ಈ ಕುರಿತು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಭಾರತ ಸರ್ಕಾರ ಅಭಿವೃದ್ಧಿ ಪಡಿಸಿರುವ ಆರೋಗ್ಯ ಸೇತು ಮೊಬೈಲ್ ಆಪ್ ಅನ್ನು ಜನಪ್ರಿಯಗೊಳಿಸಲು ಸಲಹೆ ನೀಡಿದರು. ಈ ಆಪ್ ನ ಸಹಾಯದಿಂದ ವ್ಯಕ್ತಿಯು ಮುನ್ನೆಚ್ಚರಿಕೆ ವಹಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ವಿಡಿಯೋ ಕಾನ್ಷರೆನ್ಸ್‍ ನಲ್ಲಿ ಭಾಗವಹಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿ ಜನ ಸಂದಣಿಯಾಗದಂತೆ ಎಚ್ಚರ ವಹಿಸುವಂತೆ ಎಲ್ಲ ಮುಖ‍್ಯಮಂತ್ರಿಗಳಿಗೆ ಸೂಚಿಸಿದರು.

ಪ್ರಧಾನ ಮಂತ್ರಿಯವರ ವಿಶೇಷ ಸೂಚನೆಗಳು

* ಯಾವುದೇ ಕಾರಣಕ್ಕೂ ಲಾಕ್ ಡೌನ್ ನಲ್ಲಿ ಸಡಿಲಗೊಳಿಸಬಾರದು. ಲಾಕ್ ಡೌನ್ ವಿಸ್ತರಣೆ ಕುರಿತು ಸಲಹೆಗಳು ಬಂದಿವೆ.

* ಮುಂದಿನ 15 ದಿನಗಳಲ್ಲಿ ಲಾಕ್ ಡೌನ್ ಅನುಷ್ಠಾನದ ಕುರಿತು ಇನ್ನು ಒಂದೆರಡು ದಿನಗಳಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು.

* ಮುಂದಿನ ಎರಡು ವಾರಗಳ ಕಾಲ ಲಾಕ್ ಡೌನ್  ಹಿಂದಿನ 3 ವಾರಗಳಿಗಿಂತ ವಿಭಿನ್ನವಾಗಿರುತ್ತದೆ.

* ವಿಶೇಷವಾಗಿ ಆರ್ಥಿಕ ಚಟುವಟಿಕೆಗಳಿಗೆ ಸಹಾಯವಾಗುವಂತೆ, ಕೃಷಿ ಮತ್ತು ಕೈಗಾರಿಕೆ ಹಾಗೂ ಕಾರ್ಮಿಕರಿಗೆ ಉದ್ಯೋಗದ ದೃಷ್ಟಿಯಿಂದ ಕೆಲವು ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ರೂಪಿಸಲಿದೆ.

*  ಸರ್ಕಾರಿ ಕಚೇರಿಗಳು ಭಾಗಶಃ ನೌಕರರೊಂದಿಗೆ ಕಾರ್ಯ ನಿರ್ವಹಿಸಲಿದೆ.

*  ಪ್ರಧಾನ ಮಂತ್ರಿಯವರು ಮುಖ್ಯಮಂತ್ರಿಗಳು ನೀಡಿರುವ ರಚನಾತ್ಮಕ ಹಾಗೂ ಅನುಷ್ಠಾನ ಯೋಗ್ಯ ಸಲಹೆಗಳ ಕುರಿತು ಮೆಚ್ಚುಗೆ ವ್ಯಕ್ತ ಪಡಿಸಿದರು.

* ಮುಂದಿನ ಮೂರು ನಾಲ್ಕು ವಾರ 130 ಕೋಟಿ ಜನರಿಗೆ ಬಹಳ ಪ್ರಮುಖ ಅವಧಿ. ಈ ಅವಧಿಯಲ್ಲಿ ನಾವು ಮಾಡಿರುವ ಪ್ರಯತ್ನದ ಪರಿಣಾಮ ಏನಾಗುವುದು ಎಂಬುದರ ಕುರಿತು ಸಿದ್ಧರಾಗಿರಬೇಕು. ಪರಿಸ್ಥಿತಿ ಬಿಗಡಾಯಿಸಿದರೆ ಎದುರಿಸಲು ಸನ್ನದ್ಧರಾಗಿರಬೇಕು.

*  ಕೇಂದ್ರ ಸರ್ಕಾರ ಸಂಪೂರ್ಣವಾಗಿ ರಾಜ್ಯಗಳೊಂದಿಗೆ ಇದೆ. ದೇಶದಲ್ಲಿ ವೈದ್ಯಕೀಯ ಸೌಲಭ್ಯಗಳ ದೃಷ್ಟಿಯಿಂದ ಸುಧಾರಣೆ ಆಗಿದೆ.

* ವೈದ್ಯಕೀಯ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸುವುದನ್ನು ಸಹಿಸಲಾಗದು ಎಂದು ಪ್ರಧಾನಿಯವರು ಸೂಚಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ