ಒಗ್ಗಟ್ಟಿನಿಂದ ಹೋರಾಡಿದರೆ ಕೋವಿಡ್-19 ನಿಯಂತ್ರಣ ಸಾಧ್ಯ
ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ l ಪ್ರಧಾನಿ ನರೇಂದ್ರ ಮೋದಿ ಅಭಿಮತ
ನ್ಯೂಡೆಲ್ಲಿ: ದೇಶದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಕುರಿತು ಹಾಗೂ ಸಮುದಾಯದಲ್ಲಿ ಹರಡುವ ಸಾಧ್ಯತೆಗಳ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಳವಳ ವ್ಯಕ್ತಪಡಿಸಿದ್ದಾರೆ.
ಇಂದು ಕೋವಿಡ್-19 ಕುರಿತು ಹಮ್ಮಿಕೊಂಡಿದ್ದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಲ್ಲಿ, ದೇಶದಲ್ಲಿ ಅತಿ ಹೆಚ್ಚು ಕೋವಿಡ್-19 ಹೊಂದಿರುವ ನಗರಗಳನ್ನು ಹಾಟ್ ಸ್ಪಾಟ್ ಗಳೆಂದು ಗುರುತಿಸಿ, ಸೀಲ್ ಡೌನ ಮಾಡುವ ಮೂಲಕ ಹಾಗೂ ಇತರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಮೂಲಕ ರಾಜ್ಯಗಳು ಮಾಡುತ್ತಿರುವ ನಿಯಂತ್ರಣ ಪ್ರಯತ್ನ ಶ್ಲಾಘಿಸಿದ್ದಾರೆ.
ಕೋವಿಡ್-19 ನಿಯಂತ್ರಣಕ್ಕೆ ನಾವು ಒಗ್ಗಟ್ಟಿನಿಂದ ಹೋರಾಡಿದರೆ ಮಾತ್ರವೇ ಯಶಸ್ವಿಯಾಗಲು ಸಾಧ್ಯ, ದೇಶದಲ್ಲಿ ಕೋವಿಡ್ ಪ್ರಕರಣಗಳ ಬೆಳವಣಿಗೆಯ ದರ ಲಾಕ್ ಡೌನ್ ನಂತರ ಶೇ. 28 ರಿಂದ ಶೇ. 14 ಕ್ಕೆ ಇಳಿದಿರುವುದು ಸಮಾಧಾನದ ಸಂಗತಿ. ರೋಗಿಗಳಿಗೆ ವೈದ್ಯಕೀಯ ಚಿಕಿತ್ಸೆ ನೀಡುವ ಕುರಿತು ಹೆಚ್ಚು ಗಮನ ಹರಿಸಬೇಕಾಗಿದೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರವು ದೇಶದ 142 ನಗರಗಳನ್ನು ಹಾಟ್ ಸ್ಪಾಟ್ ಗಳೆಂದು ಗುರುತಿಸಲಾಗಿದೆ. ಈ ಹಾಟ್ ಸ್ಪಾಟ್ ಗಳಲ್ಲಿ ತೀವ್ರ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕಾದ ಅಗತ್ಯವಿದೆ. ಈ ವರೆಗೆ 2.84 ಲಕ್ಷ ಪಿಪಿಇ ಕಿಟ್ ಗಳನ್ನು ಪೂರೈಸಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೂರೈಸಲಾಗುವುದು. ಪ್ರತಿ ಎರಡು ದಿನಗಳಿಗೊಮ್ಮೆ 2 ಲಕ್ಷ ಮಾಸ್ಕ್ ಗಳನ್ನು ಒದಗಿಸಲು ಕ್ರಮ ವಹಿಸಲಾಗುತ್ತಿದೆ.
ದೇಶದಲ್ಲಿ ಕೋವಿಡ್-19 ಪರೀಕ್ಷಾ ಪ್ರಯೋಗಾಲಯಗಳ ಸಂಖ್ಯೆ 220ಕ್ಕೆ ಹೆಚ್ಚಿಸಲಾಗಿದೆ. ಪ್ರಸ್ತುತ ದಿನಕ್ಕೆ 15,000 ರೋಗಿಗಳ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಏಪ್ರಿಲ್ 30 ರ ವೇಳೆಗೆ ಪರೀಕ್ಷಾ ಪ್ರಯೋಗಾಲಯಗಳ ಸಂಖ್ಯೆಯನ್ನು 300 ಕ್ಕೆ ಹೆಚ್ಚಿಸಲಾಗುವುದು. ಮೇ 31ರ ವೇಳೆಗೆ ಪ್ರತಿ ದಿನ 1 ಲಕ್ಷ ರೋಗಿಗಳನ್ನು ಪರೀಕ್ಷೆ ನಡೆಸುವ ಗುರಿ ಹೊಂದಲಾಗಿದೆ.ಕೋವಿಡ್-19 ಪರೀಕ್ಷಾ ಸೌಲಭ್ಯ ಹೆಚ್ಚಿಸುವ ನಿಟ್ಟಿನಲ್ಲಿ ಐಸಿಎಂಆರ್ ಗೆ ಅರ್ಜಿ ಸಲ್ಲಿಸುವಂತೆ ಖಾಸಗಿ ಪ್ರಯೋಗಾಲಯಗಳು ಮತ್ತು ವೈದ್ಯಕೀಯ ಕಾಲೇಜುಗಳಿಗೆ ಸಲಹೆ ನೀಡುವಂತೆ ಪ್ರಧಾನ ಮಂತ್ರಿಯವರು ಸೂಚಿಸಿದರು.
ಪ್ರದಾನ ಮಂತ್ರಿಗಳ ನೇತೃತ್ವದಲ್ಲಿ ಕೋವಿಡ್ 19 ರ ವಿರುದ್ಧದ ಸಮರದಲ್ಲಿ ಗೆಲುವು ನಿಶ್ಚಿತ ಎಂಬ ವಿಶ್ವಾಸವನ್ನು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ವ್ಯಕ್ತಪಡಿಸಿದರು. ಪ್ರಧಾನ ಮಂತ್ರಿಯವರು ನಗರಗಳಲ್ಲಿ ಸಿಲುಕಿಕೊಂಡಿರುವ ಕಾರ್ಮಿಕರನ್ನು ಹಳ್ಳಿಯ ಜನರು ಸ್ವೀಕರಿಸದ ಕಾರಣ ಹಳ್ಳಿಗಳಿಗೆ ಕಳುಹಿಸದಂತೆ ಸಲಹೆ ನೀಡಿದರು.
ಮೀನು ಸಂಸ್ಕರಣಾ ಚಟುವಟಿಕೆಗಳಿಗೆ ವಿನಾಯಿತಿ
ಮೀನುಗಾರಿಕೆ ಮತ್ತು ಮೀನು ಸಂಸ್ಕರಣಾ ಚಟುವಟಿಕೆಗಳಿಗೆ ಏಪ್ರಿಲ್ 10ರಂದು ಲಾಕ್ ಡೌನ್ ನಿಂದ ವಿನಾಯಿತಿ ನೀಡಲಾಗಿದೆ. ಇದರಿಂದ ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಮೀನುಗಾರರಿಗೆ ಅನುಕೂಲವಾಗಲಿದೆ ಎಂದು ಪ್ರಧಾನ ಮಂತ್ರಿ ತಿಳಿಸಿದ್ದಾರೆ
ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಅಗತ್ಯ ವಸ್ತುಗಳ ಮಾರಾಟವಾಗುತ್ತಿರುವ ಬಗ್ಗೆ ವ್ಯಾಪಕ ದೂರುಗಳಿದ್ದು, ರಾಜ್ಯ ಸರ್ಕಾರಗಳು ಈ ಕುರಿತು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಭಾರತ ಸರ್ಕಾರ ಅಭಿವೃದ್ಧಿ ಪಡಿಸಿರುವ ಆರೋಗ್ಯ ಸೇತು ಮೊಬೈಲ್ ಆಪ್ ಅನ್ನು ಜನಪ್ರಿಯಗೊಳಿಸಲು ಸಲಹೆ ನೀಡಿದರು. ಈ ಆಪ್ ನ ಸಹಾಯದಿಂದ ವ್ಯಕ್ತಿಯು ಮುನ್ನೆಚ್ಚರಿಕೆ ವಹಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ವಿಡಿಯೋ ಕಾನ್ಷರೆನ್ಸ್ ನಲ್ಲಿ ಭಾಗವಹಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿ ಜನ ಸಂದಣಿಯಾಗದಂತೆ ಎಚ್ಚರ ವಹಿಸುವಂತೆ ಎಲ್ಲ ಮುಖ‍್ಯಮಂತ್ರಿಗಳಿಗೆ ಸೂಚಿಸಿದರು.
ಪ್ರಧಾನ ಮಂತ್ರಿಯವರ ವಿಶೇಷ ಸೂಚನೆಗಳು
* ಯಾವುದೇ ಕಾರಣಕ್ಕೂ ಲಾಕ್ ಡೌನ್ ನಲ್ಲಿ ಸಡಿಲಗೊಳಿಸಬಾರದು. ಲಾಕ್ ಡೌನ್ ವಿಸ್ತರಣೆ ಕುರಿತು ಸಲಹೆಗಳು ಬಂದಿವೆ.
* ಮುಂದಿನ 15 ದಿನಗಳಲ್ಲಿ ಲಾಕ್ ಡೌನ್ ಅನುಷ್ಠಾನದ ಕುರಿತು ಇನ್ನು ಒಂದೆರಡು ದಿನಗಳಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು.
* ಮುಂದಿನ ಎರಡು ವಾರಗಳ ಕಾಲ ಲಾಕ್ ಡೌನ್ ಹಿಂದಿನ 3 ವಾರಗಳಿಗಿಂತ ವಿಭಿನ್ನವಾಗಿರುತ್ತದೆ.
* ವಿಶೇಷವಾಗಿ ಆರ್ಥಿಕ ಚಟುವಟಿಕೆಗಳಿಗೆ ಸಹಾಯವಾಗುವಂತೆ, ಕೃಷಿ ಮತ್ತು ಕೈಗಾರಿಕೆ ಹಾಗೂ ಕಾರ್ಮಿಕರಿಗೆ ಉದ್ಯೋಗದ ದೃಷ್ಟಿಯಿಂದ ಕೆಲವು ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ರೂಪಿಸಲಿದೆ.
* ಸರ್ಕಾರಿ ಕಚೇರಿಗಳು ಭಾಗಶಃ ನೌಕರರೊಂದಿಗೆ ಕಾರ್ಯ ನಿರ್ವಹಿಸಲಿದೆ.
* ಪ್ರಧಾನ ಮಂತ್ರಿಯವರು ಮುಖ್ಯಮಂತ್ರಿಗಳು ನೀಡಿರುವ ರಚನಾತ್ಮಕ ಹಾಗೂ ಅನುಷ್ಠಾನ ಯೋಗ್ಯ ಸಲಹೆಗಳ ಕುರಿತು ಮೆಚ್ಚುಗೆ ವ್ಯಕ್ತ ಪಡಿಸಿದರು.
* ಮುಂದಿನ ಮೂರು ನಾಲ್ಕು ವಾರ 130 ಕೋಟಿ ಜನರಿಗೆ ಬಹಳ ಪ್ರಮುಖ ಅವಧಿ. ಈ ಅವಧಿಯಲ್ಲಿ ನಾವು ಮಾಡಿರುವ ಪ್ರಯತ್ನದ ಪರಿಣಾಮ ಏನಾಗುವುದು ಎಂಬುದರ ಕುರಿತು ಸಿದ್ಧರಾಗಿರಬೇಕು. ಪರಿಸ್ಥಿತಿ ಬಿಗಡಾಯಿಸಿದರೆ ಎದುರಿಸಲು ಸನ್ನದ್ಧರಾಗಿರಬೇಕು.
* ಕೇಂದ್ರ ಸರ್ಕಾರ ಸಂಪೂರ್ಣವಾಗಿ ರಾಜ್ಯಗಳೊಂದಿಗೆ ಇದೆ. ದೇಶದಲ್ಲಿ ವೈದ್ಯಕೀಯ ಸೌಲಭ್ಯಗಳ ದೃಷ್ಟಿಯಿಂದ ಸುಧಾರಣೆ ಆಗಿದೆ.
* ವೈದ್ಯಕೀಯ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸುವುದನ್ನು ಸಹಿಸಲಾಗದು ಎಂದು ಪ್ರಧಾನಿಯವರು ಸೂಚಿಸಿದರು.
Related
You Might Also Like
ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ (77) ಇಂದು ಬಾರದ ಲೋಕಕ್ಕೆ ಪಯಾಣ ಬೆಳೆಸಿದ್ದಾರೆ. ಇತ್ತೀಚೆಗಷ್ಟೇ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಹಾಗಾಗಿ ಕಳೆದ 4...
ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ
ಬೆಳಗಾವಿ: ಕಾರಿಗೆ ನಾಯಿಯೊಂದು ಅಡ್ಡ ಬಂದ ಪರಿಣಾಮ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ...
BMTC ಕಂಡಕ್ಟರ್: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ – ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನುತ್ತಿರುವ ಕಿರಾತಕ
ಬೆಂಗಳೂರು: ಎಂ.ಎಸ್.ಪಾಳ್ಯದಿಂದ-ಯಲಹಂಕ ಮಾರ್ಗದಲ್ಲಿ ಟಿಕೆಟ್ ಕೊಡುತ್ತಲೇ ಮುಗ್ದ ಯುವತಿಯನ್ನು ಕಂಡಕ್ಟರ್ ಪಟಾಯಿಸಿದ್ದು, ಮದುವೆಯಾದ ಮೂರೇ ತಿಂಗಳಿಗೆ ಾತನ ಅಸಲಿ ಮುಖ ಬಯಲಾಗಿರುವ ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ....
KSRTC: ಪ್ರಯಾಣಿಕರು ಕಳೆದುಕೊಂಡಿದ ಬೆಲೆ ಬಾಳುವ ಬ್ಯಾಗ್ ಮರಳಿಸಿ ಪ್ರಾಮಾಣಿಕತೆ ಮೆರೆದ ತುರುವೇಕೆರೆ ಘಟಕದ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲನಾ ಸಿಬ್ಬಂದಿ, ಅಂದರೆ ಚಾಲಕ ನಿರ್ವಾಹಕರು ಪ್ರಾಮಾಣಿಕತೆ ಮೆರೆಯು ಮೂಲಕ ಇತರರಿಗೆ ಮಾದರಿಯಾಗುತ್ತಿರುವುದು ನಿರಂತರವಾಗಿದೆ. ಇದು ಒಂದು ರೀತಿ...
ಮೈಸೂರು: ಬೇಡಿಕೆ ಈಡೇರಿಕೆಗೆ ಮೀನಮೇಷ ಎಣಿಸುತ್ತಿರುವ ಪ್ರಧಾನಿ, ಕೃಷಿ ಮಂತ್ರಿಗಳ ಪ್ರತಿಕೃತಿ ದಹಿಸಲು ಯತ್ನಿಸಿದ ರೈತರ ಬಂಧನ
ಮೈಸೂರು: ರೈತ ವಿರೋಧಿ ಕೇಂದ್ರ ಸರ್ಕಾರದ ವರ್ತನೆ ಖಂಡಿಸಿ ದಲೈವಾಲ ಹೋರಾಟವನ್ನು ಬೆಂಬಲಿಸಿ ಪ್ರಧಾನ ಮಂತ್ರಿ ಹಾಗೂ ಕೃಷಿ ಮಂತ್ರಿಗಳ ಪ್ರತಿಕೃತಿ ದಹನ ಮಾಡಲು ಮೆರವಣಿಗೆಯಲ್ಲಿ ಹೋಗುತ್ತಿದ್ದಾಗ...
ಹೈಪರ್‌ಟೆನ್ಷನ್: ಭಾರತದ ಯುವಜನತೆಗೆ ಅಡಗಿದ ಅಪಾಯ: ಡಾ.ಸಾಯಿಶಂಕರ್
ಬೆಂಗಳೂರು: ಯುವ ದಿನ, ಜನವರಿ 12 ರಂದು, ಸ್ವಾಮಿ ವಿವೇಕಾನಂದರ ಪ್ರೇರಣಾದಾಯಕ ಜೀವನ ಮತ್ತು ಉಪದೇಶಗಳನ್ನು ಆಚರಿಸುತ್ತದೆ. ಅವರ ಉಪದೇಶಗಳು ಪೀಳಿಗೆಗಳನ್ನು ಪ್ರೇರೇಪಿಸುತ್ತಿವೆ ಎಂದು ಏಮ್ಸ್ ಮತ್ತು...
ಹುಬ್ಬಳ್ಳಿ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿಗೆ ಸಿಎಂ ಒತ್ತಾಯಿಸಿ: ಸಚಿವರಿಗೆ ವಾಯವ್ಯ ವಲಯ ನೌಕರರ ಕೂಟ ಮನವಿ
ಹುಬ್ಬಳ್ಳಿ: ಚುನಾವಣಾ ಪೂರ್ವ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಭರವಸೆಯಂತೆ ಸಾರಿಗೆ ನೌಕರರಿಗೂ ಸರ್ಕಾರಿ ನೌಕರರಂತೆ ಸರಿಸಮಾನ ವೇತನ (7 ನೇ ವೇತನ ಆಯೋಗ ಮಾದರಿಯಲ್ಲಿ) ನೀಡುವಂತೆ...
“ಕೆಎಸ್‌ಆರ್‌ಟಿಸಿ ಆರೋಗ್ಯ” ಯೋಜನೆ ಕುರಿತು ನೌಕರರಿಗೆ ಪತ್ರ ಬರೆದು ಖುಷಿ ಹಂಚಿಕೊಂಡ ಸಂಸ್ಥೆ ಎಂಡಿ ಅನ್ಬುಕುಮಾರ್
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬ ನೌಕರರು ಉತ್ತಮ ಆರೋಗ್ಯದಿಂದ ಇರಬೇಕು ಎಂಬ ಸದುದ್ದೇಶದಿಂದ "ಕೆಎಸ್‌ಆರ್‌ಟಿಸಿ ಆರೋಗ್ಯ" ಯೋಜನೆಯನ್ನು ರೂಪಿಸಿದ್ದು, ಮುಖ್ಯಮಂತ್ರಿಗಳು...
BMTC: ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯಕ್ಕೆ ನೌಕರರಿಂದ ದಾಖಲೆ ಸಂಗ್ರಹಿಸಲು ಮೂವರು ಅಧಿಕಾರಿಗಳ ನಿಯೋಜನೆ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕಾರಿಗಳು/ನೌಕರರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ನೀಡುವುದಕ್ಕೆ ಬೇಕಾದ ದಾಖಲೆಗಳನ್ನು ಸಂಗ್ರಹಿಸಲು ಮೂವರು ಅಧಿಕಾರಿಗಳನ್ನೊಳಗಂಡ ಮೇಲ್ವಿಚಾರಣೆ ತಂಡಗಳನ್ನು ರಚಿಸಿ ವ್ಯವಸ್ಥಾಪಕ...
ಮುಂದಿನ ಪೀಳಿಗೆ ಉಳಿವಿಗಾಗಿ ಸಾವಯವ ಕೃಷಿ ಅವಶ್ಯಕ: ಸಚಿವ ಮುನಿಯಪ್ಪ
ಜಿಲ್ಲಾ ಮಟ್ಟದ ಸಾವಯವ ಮತ್ತು ಸಿರಿಧಾನ್ಯಗಳ ಮೇಳ-2025 ಸಿರಿಧಾನ್ಯಗಳ ಸೇವನೆಯಿಂದ ಆರೋಗ್ಯ ವೃದ್ಧಿ ಬೆಂಗಳೂರು: ಮುಂದಿನ ಪೀಳಿಗೆಗೆ ಗುಣಮಟ್ಟದ ಆಹಾರ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ. ಹಾಗಾಗಿ...
ಲೋಕ ಸೇವಾ ಆಯೋಗಗಳು ಕಾರ್ಯಾಂಗಕ್ಕೆ ಅಭೂತಪೂರ್ವ ಕೊಡುಗೆ ನೀಡುವ ಪ್ರಜಾ ಪ್ರಭುತ್ವದ ಸ್ತಂಭಗಳು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಲೋಕ ಸೇವಾ ಆಯೋಗಗಳು ಅರ್ಹತೆ ಮತ್ತು ನ್ಯಾಯಪರತೆಯನ್ನು ಎತ್ತಿಹಿಡಿದು, ಕಾರ್ಯಾಂಗಕ್ಕೆ ಅಭೂತಪೂರ್ವ ಕೊಡುಗೆಯನ್ನು ನೀಡುವ ಪ್ರಜಾಪ್ರಭುತ್ವದ ಸ್ತಂಭಗಳಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ರಾಜ್ಯ ಲೋಕಸೇವಾ...