ರಾಮನಗರ: ಲಾರಿಯನ್ನು ಓವರ್ ಟೇಕ್ ಮಾಡಲು ಹೋದ ಓಮಿನಿ ಹಿಂದಿನಿಂದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ರಾಮನಗರದ ಕೆಂಪೇಗೌಡನದೊಡ್ಡಿ ಬಳಿ ನಡೆದಿದೆ.
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ದುರ್ಘಟನೆ ಸಂಭವಿಸಿದ್ದು, ಮೃತರಲ್ಲಿ ಇಬ್ಬರು ಮಹಿಳೆಯರು ಕೂಡ ಇದ್ದಾರೆ. ಓಮಿನಿ ಬೆಂಗಳೂರಿನಿಂದ ಮೈಸೂರಿಗೆ ತೆರಳುವಾಗ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಓಮಿನಿ ಸಂಪೂರ್ಣ ನಜ್ಜುಗುಜ್ಜಾಗಿದೆ.
ಇನ್ನು ಓಮಿನಿಯಲ್ಲಿ ಒಂದು ಮಗು ಸೇರಿ ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಮನಗರ ಜಿಲ್ಲಾಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ. ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳಕ್ಕೆ ರಾಮನಗರ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
![](https://vijayapatha.in/wp-content/uploads/2024/02/QR-Code-VP-1-1-300x62.png)