ಕಂಗಾಲಾಗಿರುವ ಜನರ ಜೀವನಕ್ಕೆ ನೆರವಾಗಿ ಆತ್ಮವಿಶ್ವಾಸ ತುಂಬಿ
ಲಾಕ್‍ಡೌನ್ ನಿಬಾಯಿಸಲು ಸಿದ್ಧರಾಗಿ l ಜಿಲ್ಲಾಡಳಿತಕ್ಕೆ ಮಾಜಿ ಪ್ರಧಾನಿ ದೇವೇಗೌಡ ಸಲಹೆ
ಹಾಸನ: ಜನ ಸಾಮಾನ್ಯರು ಹಾಗೂ ರೈತಾಪಿ ಜನರ ಬದುಕು ತೊಂದರೆಗೆ ಸಿಲುಕಿದೆ ಕೂಲಿ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು ಬಡ ಕುಟುಂಬಗಳು ಕೆಲಸ ಇಲ್ಲದೇ ಕಂಗಾಲಾಗಿದ್ದು ಅವರ ಜೀವನಕ್ಕೆ ನೆರವಾಗಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದರು.
ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕಸಭಾ ಸದಸ್ಯರಾದ ಪ್ರಜ್ವಲ್ ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಕೊರೊನಾ ಲಾಕ್‍ಡೌನ್ ಸಮಸ್ಯಯಿಂದ ಸಂಕಷ್ಟಕ್ಕೊಳಗಾದ ಜನರ ಸಮಸ್ಯೆ ಬಗೆಹರಿಸಲು ಜಿಲ್ಲಾಡಳಿತಕ್ಕೆ ಹಲವು ಸಲಹೆಗಳನ್ನು ನೀಡಿದರು.
ಅಕ್ಕಿ ಗೋಧಿ ಬೇಳೆ ಜೊತೆಗೆ ತೀವ್ರ ಬಡತನ ಎದುರಿಸುತ್ತಿರುವವರಿಗೆ ಇತರ ದಿನಬಳಕೆ ಸಾಮಗ್ರಿ ವಿತರಿಸಬೇಕು. ರೈತರ ಉತ್ಪಾದನೆಗಳು ಹಾಳಾಗದಂತೆ ಸೂಕ್ತ ಸಾಗಾಟದ ವ್ಯವಸ್ಥೆ ಮತ್ತು ಮಾರುಕಟ್ಟೆ ಒದಗಿಸಬೇಕು. ಜಿಲ್ಲಾಡಳಿತ, ಎ.ಪಿ.ಎಂ.ಸಿ., ಕೃಷಿ ಮತ್ತು ತೋಟಗಾರಿಕೆ ಇಲಾಖೆ ಹಾಪ್‍ಕಾಮ್ಸ್‍ಗಳ ನೆರವು ಪಡೆದು ರೈತರಿಗೆ ಸಂಪರ್ಕ ಸೇತುವಾಗಬೇಕು ಎಂದು ಹೇಳಿದರು.
ಕೊರೊನಾ ಲಾಕ್‍ಡೌನ್ ನಿರ್ವಾಹಣೆ ನಡುವೆ ಗ್ರಾಮೀಣಾಂತರ ಪ್ರದೇಶಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಜಿಲ್ಲಾ ಪಂಚಾಯ್ತಿ ಸಿ.ಇ.ಓ. ಹಾಗೂ ತಹಸೀಲ್ದಾರರು ನಿಗಾವಹಿಸಬೇಕು. ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಗೆ ಯಾವುದೇ ಕೊರತೆಯಾಗದಂತೆ ಗಮನಹರಿಸಬೇಕು ಎಂದು ಹೇಳಿದರು.
ಲೋಕ ಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಮಾತನಾಡಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮ ಅಭಿನಂದನಾರ್ಹ. ಆದರೆ ಕೆಲವು ಜಿಲ್ಲೆಗಳು ಸರಕು ಸಾಗಣೆಗಳ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸುತ್ತಿವೆ ಹಣ್ಣು ತರಕಾರಿಗಳ ಪೂರೈಕೆಗೆ ಅವಕಾಶ ನಿರ್ಬಂಧಿಸುತ್ತಿವೆ. ಈ ಬಗ್ಗೆ ಜಿಲ್ಲಾಧಿಕಾರಿಯವರು ನೆರೆ ಹೊರೆಯ ಅಧಿಕಾರಿಗಳೊಂದಿಗೆ ಸಂಪರ್ಕಿಸಿ ಸಮಸ್ಯೆ ಬಗೆಹರಿಸಬೇಕು ಎಂದರು.
ಶಾಸಕರಾದ ಎಚ್.ಡಿ. ರೇವಣ್ಣ ಮಾತನಾಡಿ ಎಲ್ಲಾ ಎ.ಪಿ.ಎಂ.ಸಿ.ಗಳಲ್ಲಿ ರೈತರ ಹಿತ ಸಂರಕ್ಷಣೆಯ ಕಾರ್ಯಗಳಾಗಬೇಕು ಮಧ್ಯವರ್ತಿಗಳ ಹಾವಳಿ ತಪ್ಪಿಸಿ ಲಾಭಾಂಶ ರೈತರಿಗೆ ನೇರವಾಗಿ ದೊರೆಯುವಂತಾಗಬೇಕು ಎಂದರು.
ಅರ್ಧಕ್ಕೆ ನಿಂತಿರುವ ಅಥವಾ ಮುಕ್ತಾಯದ ಹಂತದಲ್ಲಿರು ಕಾಮಗಾರಿಗಳಲ್ಲಿ ಯಂತ್ರೋಪಕರಣಗಳನ್ನು ಬಳಸಿ ಮರು ಕೆಲಸಕ್ಕೆ ಅವಕಾಶ ನೀಡಬೇಕು ಹಾಗೂ ಎಲ್ಲಾ ಗ್ರಾಮಗಳ ಕೆರೆಗಳ ಹೂಳು ತೆಗೆಯುವ ಕಾರ್ಯಕ್ಕೆ ಆದ್ಯತೆ ನೀಡಿ ಮಾಡಿಸಬೇಕು ಎಂದು ಹೆಚ್.ಡಿ. ರೇವಣ್ಣ ಹೇಳಿದರು.
ಜಿಲ್ಲಾಧಿಕಾರಿ ಆರ್.ಗಿರೀಶ್ ಪಡಿತರ ವಿತರಣೆ ತರಕಾರಿ ವ್ಯಾಪಾರ ಎ.ಪಿ.ಎಂ.ಸಿ. ವ್ಯವಸ್ಥೆಗಳಿಗೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು. ನಿರಾಶ್ರಿತರು, ಕೂಲಿಕಾರ್ಮಿಕರ ಹಸಿವು ನೀಗಲು ಎಸ್.ಡಿ.ಆರ್.ಎಫ್ ನಿದಿಯಡಿ ತಾಲ್ಲೂಕು ಆಡಳಿತಗಳಿಗೆ ಅನುದಾನ ಬಿಡುಗಡೆ ಮಾಡಿದ್ದು ಅಗತ್ಯಕ್ಕೆ ತಕ್ಕಂತೆ ನಿಯಮಾನುಸಾರ ಕ್ರಮ ವಹಿಸಲಾಗುವುದು ಎಂದರು.
ಶಾಸಕರಾದ ಎ.ಟಿ. ರಾಮಸ್ವಾಮಿ, ಎಚ್.ಕೆ. ಕುಮಾರಸ್ವಾಮಿ, ಸಿ.ಎನ್. ಬಾಲಕೃಷ್ಣ ಹಾಗೂ ಕೆ.ಎಸ್. ಲಿಂಗೇಶ್ ಅವರು ಮಾತನಾಡಿ, ಮದ್ಯ ಅಕ್ರಮವಾಗಿ ಮಾರಾಟವಾಗುತ್ತಿದ್ದು ಇದನ್ನು ಸಂಪೂರ್ಣ ನಿಯಂತ್ರಿಸಬೇಕು. ಆಂಬ್ಯುಲೆನ್ಸ್ ಸೇರಿದಂತೆ ತುರ್ತು ಸೇವಾ ವಾಹನಗಳಲ್ಲಿಯೂ ಮದ್ಯ ಸಾಗಾಟದ ಗುಮಾನಿಯಿದ್ದು, ಗಮನಹರಿಸಬೇಕು ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವಾಹಕ ಅಧಿಕಾರಿ ಬಿ.ಎ. ಪರಮೇಶ್ ಅವರೂ ಸಹ ಕೊರೋನಾ ನಿಯಂತ್ರಣ ಕ್ರಮಗಳು ಹಾಗೂ ಲಾಕ್‍ಡೌನ್ ಪರಿಸ್ಥಿತಿ ನಿಭಾಯಿಸಲು ಮಾಡಿರುವ ಸುಧಾರಣೆಗಳ ಬಗ್ಗೆ ವಿವರಿಸಿದರು. ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ. ಉಪ ವಿಭಾಗಾಧಿಕಾರಿ ಡಾ. ನವೀನ್ ಭಟ್ ವಿವಿಧ ಅಧಿಕಾರಿಗಳು ಹಾಜರಿದ್ದರು.
Related
You Might Also Like
ದೇಶದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಇನ್ನಿಲ್ಲ
ನ್ಯೂಡೆಲ್ಲಿ: ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಇಂದು ರಾತ್ರಿ ನಿಧನಹೊಂದಿದ್ದಾರೆ. 92 ವರ್ಷದ ಮನಮೋಹನ್ ಸಿಂಗ್ ಅವರನ್ನು ವಯೋಸಹಜ ಅನಾರೋಗ್ಯದಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು....
2024ರ ಜನವರಿಯಿಂದ ಈವರೆಗೂ 48 ದೌರ್ಜನ್ಯ ಪ್ರಕರಣಗಳು ದಾಖಲು: ಅಪರ ಜಿಲ್ಲಾಧಿಕಾರಿ ಅಮರೇಶ್
ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ತ್ವರಿತ ವಿಲೇಗೆ ಕ್ರಮ ಬೆಂ.ಗ್ರಾ.: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರ ಮೇಲಿನ ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ವಿಳಂಬ ತೋರದೆ...
KSRTC: ಡಿ.31ರಿಂದ ಕರೆ ಕೊಟ್ಟಿರುವ ಮುಷ್ಕರ ಬೆಂಬಲಿಸದ ನೌಕರರು- ವಿಲವಿಲ ಒದ್ದಾಡುತ್ತಿರುವ ಜಂಟಿ ಸಮಿತಿ ಮುಖಂಡರು
ಮುಷ್ಕರಕ್ಕೆ ಕರೆ ಕೊಟ್ಟು ನಿದ್ದೆಕೂಡ ಮಾಡಲಾಗದ ಪರಿಸ್ಥಿತಿ ತಲುಪಿದ ಹೋರಾಟಗಾರರು ಜಂಟಿ ಪದಾಧಿಕಾರಿಗಳು ಡಿಪೋಗಳಿಗೆ ಹೋದರೂ ಮಾತನಾಡಿಸದ ನೌಕರರು ನೌಕರರ ಬೇಡಿಕೆಗೆ ವಿರುದ್ಧವಾದ ಬೇಡಿಕೆ ಇಟ್ಟು ಮುಷ್ಕರಕ್ಕೆ...
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿ.27ರಂದು BMTC & KSRTC ನಿವೃತ್ತ ನೌಕರರ ಪ್ರತಿಭಟನೆ
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸೆಂಬರ್ 27, 2024 ರಂದು "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರು ವಿನೂತನ ಪ್ರತಿಭಟನೆ ಮೂಲಕ ಶಕ್ತಿ ಪ್ರದರ್ಶನ ಮಾಡಲಿದ್ದಾರೆ...
ಮೈಸೂರು: ದೆಹಲಿ ರೈತ ಹೋರಾಟ ಬೆಂಬಲಿಸಿ ಮೇಣದ ಬತ್ತಿ ಬೆಳಗಿಸಿ ಪ್ರತಿಭಟನೆ
ಮೈಸೂರು: ರೈತರ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿಯಾಗಬೇಕೆಂದು ಪಂಜಾಬ್ ಹರಿಯಾಣ ಕನೋರಿ ಬಾರ್ಡರ್ನಲ್ಲಿ 29 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಂಯುಕ್ತ...
KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋಣ
ಬೆಂಗಳೂರು: ಪ್ರತಿ ನಾಲ್ಕು ವರ್ಷಕ್ಕೊಮ್ಮೆ ಬಂದು ಉದ್ಭವವಾಗುವ ಈ ಮಹಾನುಭಾವ ತಮ್ಮ ಸ್ವಾರ್ಥ ಹಾಗೂ ಆರ್ಥಿಕವಾಗಿ ಸಬಲರಾಗಲು ಸರ್ಕಾರದ ಹಾಗೂ ಸಾರಿಗೆ ನಿಗಮದ ಆಡಳಿತ ಮಂಡಳಿಯ ಮುಂದೆ...
KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್ ಬಸ್ಗಳು- ಸಚಿವರಿಂದ ಲೋಕಾರ್ಪಣೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್ ಬಸ್ಗಳಿಗೆ ಮೆಜೆಸ್ಟಿಕ್ನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗ ಸಚಿವರಾದ ರಾಮಲಿಂಗರೆಡ್ಡಿ ಮತ್ತು...
KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ
ಬೆಂಗಳೂರು: ಶಕ್ತಿ ಯೋಜನೆ ಕರ್ನಾಟಕ ಸರ್ಕಾರದ ಮಹಿಳಾ ಸಬಲೀಕರಣದೆಡೆಗಿನ ದಿಟ್ಟ ಹೆಜ್ಜೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ತಮ್ಮ ಪ್ರತಿಯೊಂದು ಸುಳ್ಳಿನ ಸರಮಾಲೆಯ ಟ್ಟೀಟ್ಗೂ ನಾವು...
ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್
ಹುಬ್ಬಳ್ಳಿ: ಹುಬ್ಬಳ್ಳಿಯ ಸಾಯಿನಗರದಲ್ಲಿ ಅಡುಗೆ ಅನಿಲ ಸ್ಫೋಟದಿಂದ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡು ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಗೆ ಇಂದು ಗೃಹ...
KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!?
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲೂ ವೇತನ ಹೆಚ್ಚಳವಾಗಬೇಕು ಅದಾದ ಬಳಿಕ ಅರಿಯರ್ಸ್ ಕೊಡಬೇಕು ಎಂದರೆ ಹೋರಾಟ ಮಾಡುವುದು ನೌಕರರು. ಅದಕ್ಕೆ ಕರೆ ಕೊಡುವುದು...
BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್
ಬೆಂಗಳೂರು: ಕಳೆದ ಬಾರಿ ಮಳೆಯಿಂದಾದ ಅನಾಹುತಗಳು ಮತ್ತೆ ಮರುಕಳಿಸಬಾರದು ಎಂಬ ದೃಷ್ಟಿಯಿಂದ ಯಲಹಂಕ ವಲಯದ ಟಾಟಾನ ಗರದಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲು...
ಡಿ.31 ರಂದು ಇಳಕಲ್ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್ ಸಮಾವೇಶ
ಬಾಗಲಕೋಟೆ: ರಾಷ್ಟ್ರೀಯ ಸಂಘರ್ಷ ಸಮಿತಿಯ NACಯ ರಾಷ್ಟ್ರೀಯ ಅಧ್ಯಕ್ಷ ಕಮಾಂಡರ್ ಅಶೋಕ್ ರಾವುತ್ ಅವರ ನೇತೃತ್ವದಲ್ಲಿ ಒದೇ ಡಿ.31 ರಂದು ಇಳಕಲ್ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್...