NEWSನಮ್ಮರಾಜ್ಯರಾಜಕೀಯ

ಕಾಂಗ್ರೆಸ್​ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಳಿಸಲು ಸಿಎಂ ಕಚೇರಿಯಿಂದಲೇ ಯತ್ನ: ಡಿಕೆಶಿ ಗಂಭೀರ ಆರೋಪ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾಂಗ್ರೆಸ್​ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಳಿಸಲು ಮತ್ತು ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಅನುಮೋದಿಸಲು ಮುಖ್ಯಮಂತ್ರಿ ಕಚೇರಿಯಿಂದಲೇ ಯತ್ನಿಸಲಾಗುತ್ತಿದೆ. ಈ ಬಗ್ಗೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಕಾಂಗ್ರೆಸ್​ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಳಿಸುವ ಯತ್ನ ನಡೆಯುತ್ತಿದೆ. ಸಿಎಂ ಕಚೇರಿ, ಸಿಎಂ ಲೀಗಲ್ ಟೀಂನಿಂದ ಅಧಿಕಾರ ದುರ್ಬಳಕೆ ಮಾಡಲಾಗುತ್ತಿದೆ. ನಮ್ಮ ಅಭ್ಯರ್ಥಿಗಳ ಅಫಿಡವಿಟ್​​ ಡೌನ್​ಲೋಡ್​ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಇನ್ನು ಖುದ್ದು ಸಿಎಂ ಕಚೇರಿಯ ಸೂಚನೆ ಮೇರೆಗೆ ಇದೆಲ್ಲ ನಡೆಯುತ್ತಿದೆ. ಇದಕ್ಕೆ ಸಿಎಂ ಬೊಮ್ಮಾಯಿಯೇ ನೇರಹೊಣೆ ಹೊರಬೇಕಾಗುತ್ತೆ. ಮುಖ್ಯಮಂತ್ರಿಗಳ ಕಚೇರಿಯ ಕಾಲ್ ಡೀಟೇಲ್ಸ್ ತೆಗೆಯಬೇಕು ಈ ಬಗ್ಗೆ ಚುನಾವಣಾ ಆಯೋಗ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಅರ್ಜಿಗಳಲ್ಲಿ ಸಮಸ್ಯೆ ಇದೆ ಆದರೂ ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಅನುಮೋದಿಸಬೇಕು ಎಂದು ಸಿಎಂ ಕಚೇರಿಯಿಂದಲೇ ಒತ್ತಡ ಹಾಕುತ್ತಿದ್ದಾರೆ. ಯಾವುದೇ ಒತ್ತಡಕ್ಕೆ ಮಣಿಯದಂತೆ ಅಧಿಕಾರಿಗಳಿಗೆ ಚುನಾವಣಾ ಆಯೋಗ ಸೂಚಿಸಬೇಕು ಎಂದು ಒತ್ತಾಯಿಸಿದರು.

ವಿಜಯಪುರ, ಕಲ್ಯಾಣ ಕರ್ನಾಟಕ ಭಾಗದ ನಾಯಕರು ಬಿಜೆಪಿ ತೊರೆದು ಕಾಂಗ್ರೆಸ್​ ಸೇರುತ್ತಿದ್ದಾರೆ. ಕಾಂಗ್ರೆಸ್​ ಪಕ್ಷದ ತತ್ವ, ಸಿದ್ಧಾಂತಗಳನ್ನು ಒಪ್ಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಕಷ್ಟ ಕಾಲದಲ್ಲಿ ಬಿಜೆಪಿ ಯಾವ ರೀತಿ ನಡಿಸಿಕೊಂಡಿತ್ತು ಅಂತಾ ಗೊತ್ತಿದೆ ಎಂದರು.

ಇನ್ನು ಯಾರಾದರೂ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಇಚ್ಛೆ ಇದ್ದರೇ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೇರ್ಪಡೆಯಾಗಿ. ನಮಗೆ ಶಕ್ತಿ ತುಂಬಿ. ಇವತ್ತು ಬಿಜೆಪಿಯಿಂದ ಅರವಿಂದ್ ಚೌಹಾಣ್, ಮಾಜಿ ಶಾಸಕ ವಿಶ್ವನಾಥ ಪಾಟೀಲ್ ಹೆಬ್ಬಾರ್,   ಹಲವಾರು ಜನ ಸೇರುತ್ತಿದ್ದಾರೆ ಎಂದು ಶಿವಕುಮಾರ್​ ಹೇಳಿದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು