NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಕಾಂಗ್ರೆಸ್ ಪಕ್ಷಕ್ಕೆ ವಿಧಾನ ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ ಸೇರ್ಪಡೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ ಗುರುವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಯನೂರು ಮಂಜುನಾಥ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿಯಿಂದ ಜೆಡಿಎಸ್‌ಗೆ ಜಿಗಿದು ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಆಯನೂರು ಅಲ್ಲಿ ಕೇವಲ 8863 ಮತ ಪಡೆದು ದೊಡ್ಡ ಸೋಲು ಕಂಡಿದ್ದರು.

ಬಳಿಕ ರಾಜಕೀಯ ಮರುಹುಟ್ಟು ಪಡೆಯಲು ಅವರು ಕಾಂಗ್ರೆಸ್ ಸೇರಲು ಬಯಸಿದ್ದರು. ಆದರೆ, ಸ್ಥಳೀಯ ಕಾಂಗ್ರೆಸಿಗರು ಇವರ ಸೇರ್ಪಡೆ ವಿರೋಧಿಸಿದ್ದರು. ಈ ನಡುವೆಯೂ ಅವರು ಗುರುವಾರ ಕಾಂಗ್ರೆಸ್ ಸೇರಿದ್ದಾರೆ.

ಈ ಹಿಂದೆ ಲೋಕಸಭೆ ಸದಸ್ಯರೂ ಆಗಿದ್ದರು. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಎದುರಾಳಿಯಾಗಿ ಕಣಕ್ಕಿಳಿದು ಸದ್ದು ಮಾಡಿದ್ದರು. ಜತೆಗೆ ಬಂಗಾರಪ್ಪ ಬಿಜೆಪಿ ಸೇರಿದಾಗ ಆಯನೂರು ಮಂಜುನಾಥ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಚುನಾವಣೆಯಲ್ಲಿ ಸೋತಿದ್ದರು. ಪುನಃ ಬಿಜೆಪಿಗೆ ಸೇರಿ ವಿಧಾನ ಪರಿಷತ್ ಪ್ರವೇಶಿಸಿದ್ದರು. ಜನತಾಪಕ್ಷಕ್ಕೂ ಒಮ್ಮೆ ಹೋಗಿಬಂದಿದ್ದರು.

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ವೇಳೆ ಸಚಿವ ಮಧು ಬಂಗಾರಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಚಂದ್ರಪ್ಪ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಇದ್ದರು.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ