ಉಡುಪಿ: ಕಾಂಗ್ರೆಸ್‌ನಿಂದ ಬಿ ಫಾರಂ ಸಿಗದೆ ಬಂಡಾಯವೆದ್ದು ನಾಮಪತ್ರ ಸಲ್ಲಿಸಿದ ಕಾಂಗ್ರೆಸ್‌ನ ಮಂದಿ ತಮ್ಮ ತಮ್ಮ ನಾಮಪತ್ರವನ್ನು ಇಂದು ವಾಪಸ್ ಪಡೆದುಕೊಳ್ಳಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರಿನಲ್ಲಿ ಸುದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆಯಲಿದ್ದಾರೆ. ಹಲವು ಕ್ಷೇತ್ರಗಳಲ್ಲಿ ಬಂಡಾಯ ಎದ್ದಿದ್ದ ನಾಯಕರ ಮನವೊಲಿಕೆ ಮಾಡಲಾಗಿದೆ. ಹೀಗಾಗಿ ಆ ಬಂಡಾಯ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆಯಲಿದ್ದಾರೆ ಎಂದರು.
ಇನ್ನು ರಾಜ್ಯದಲ್ಲಿ ಅತಿ ಭ್ರಷ್ಟ ಸರ್ಕಾರ ಎಂದರೆ ಅದು ಬಿಜೆಪಿ ಸರ್ಕಾರ. ಅವರದ್ದೇ ಪಕ್ಷದ ಆನೇಕ ನಾಯಕರು ಭ್ರಷ್ಟಾಚಾರದ ಬಗ್ಗೆ ಹೇಳಿದ್ದಾರೆ. 40 ಪರ್ಸೆಂಟ್ ಸರ್ಕಾರವನ್ನು ಕಿತ್ತೊಗೆಯಬೇಕು. ಭ್ರಷ್ಟಾಚಾರ ನಿರ್ಮೂಲನೆ ಮಾಡುವುದು ನಮ್ಮ ಗುರಿ ಎಂದು ಹೇಳಿದರು.
ಇನ್ನು ಬಿಜೆಪಿಯ ಹಿಂದುತ್ವದ ಹೋರಾಟ ಫಲ ಕೊಡಲ್ಲ. ನಾವು ಜನರ ಬದುಕಿನ ಬಗ್ಗೆ ಮಾತನಾಡುತ್ತೇವೆ ಬಿಜೆಪಿಯವರು ಜನರ ಭಾವನೆಗಳ ಬಗ್ಗೆ ಮಾತನಾಡುತ್ತಾರೆ ಎಂದು ಕಿಡಿಕಾರಿದರು.
ಸಿಎಂ ಅಭ್ಯರ್ಥಿ ವಿಚಾರವಾಗಿ ಮಾತನಾಡಿದ ಶಿವಕುಮಾರ್, ನಾವು ರಾಜಕಾರಣಿಗಳು ಖಾವಿ ಹಾಕಿಲ್ಲ. ಬಿಳಿ ಬಟ್ಟೆ ಹಾಕಿದ್ದೇವೆ ಎಂದು ಮಾರ್ಮಿಕವಾಗಿ ಹೇಳಿದರು.