ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕತಗಾಲ ಗ್ರಾಮದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರೊಬ್ಬರು ಕಂಠಮಟ್ಟ ಕುಡಿದು ತೂರಾಡುತ್ತಾ ರಂಪಾಟ ಮಾಡಿದ ಘಟನೆ ವರದಿಯಾಗಿದೆ.
ಸೋಶಿಯಲ್ ಮೀಡಿಯಾದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕನ ರಂಪಾಟದ ವಿಡಿಯೋ ಕೂಡ ವೈರಲ್ ಆಗಿದೆ. ಕುಮಟಾದ ಹೆಗಡೆಕಟ್ಟೆ ಮೂಲದ ಶಿಕ್ಷಕರಾಗಿರುವ ಇವರು ಸರಿಯಾಗಿ ನಿಲ್ಲುವುದಕ್ಕೂ ಸಾಧ್ಯವಾಗದೇ ಅಂಗಡಿಯ ಬಳಿ ತೆವಳಿ ತೂರಾಡಿ ಬಿದ್ದು ಮೂಗಿಗೂ ಗಾಯ ಮಾಡಿಕೊಂಡಿದ್ದಾರೆ.
ಶಾಲಾ ಶಿಕ್ಷಕನ ಅವಸ್ಥೆ ಕಂಡು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದು, ಮಕ್ಕಳಿಗೆ ಬುದ್ದಿ ಹೇಳಬೇಕಾದ ಶಿಕ್ಷಕರೇ ಹೀಗೆ ಮಾಡಿದರೆ ಹೇಗೆ ಎಂದು ಪ್ರಶ್ನೆ ಮಾಡಿದ್ದಾರೆ.
ಇನ್ನು ಕೆಲವು ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದ್ದು, ಇದರಿಂದ ಸಮಸ್ಯೆಯಾಗುತ್ತಿದೆ ಎಂದು ಸ್ಥಳೀಯರು ಅಸಮಾಧಾನ ಹೊರಹಾಕಿದ್ದಾರೆ.
![](https://vijayapatha.in/wp-content/uploads/2024/02/QR-Code-VP-1-1-300x62.png)