NEWSನಮ್ಮರಾಜ್ಯ

ಕಡಿಮೆ ತೂಕ, ಮುದ್ರೆಯಿಲ್ಲದ ಯಂತ್ರಗಳ ಬಳಕೆ

ನ್ಯಾಯ ಬೆಲೆ ಅಂಗಡಿಗಳ ವಿರುದ್ಧ 16 ಮೊಕದ್ದಮೆ ದಾಖಲು 

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಕಲಬುರಗಿ ಜಿಲ್ಲೆಯ ನ್ಯಾಯ ಬೆಲೆ ಅಂಗಡಿ ಮತ್ತು ಸಗಟು ಮಾರಾಟ ಮಳಿಗೆಗಳಲ್ಲಿ ಸತ್ಯಾಪನೆ ಮತ್ತು ಮುದ್ರೆ ಇಲ್ಲದ ತೂಕದ ಯಂತ್ರಗಳ ಬಳಕೆ ಮತ್ತು ಕಡಿಮೆ ತೂಕದಲ್ಲಿ ಮಾರುತ್ತಿದ್ದ ಅಂಗಡಿಗಳ ಮೇಲೆ ಅಧಿಕಾರಿಗಳ ತಂಡ ದಾಳಿ ಮಾಡಿ 16  ಮೊಕದ್ದಮೆಗಳನ್ನು ದಾಖಲಿಸಿದೆ.

ಕಾನೂನು ಮಾಪನಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ರಫೀಕ್ ಲಾಡಜಿ ನೇತೃತ್ವದ ಅಧಿಕಾರಿಗಳ ತಂಡ ಕಳೆದ ಏಪ್ರಿಲ್ 7 ರಿಂದ 10ರ ವರೆಗೆ ಜಿಲ್ಲೆಯಾದ್ಯಂತ ಸುಮಾರು 82 ನ್ಯಾಯ ಬೆಲೆ ಅಂಗಡಿ ಹಾಗೂ ಸಗಟು ಮಾರಾಟ ಮಳಿಗೆಗಳ ಮೇಲೆ ದಾಳಿ ಮಾಡಿ ತಪಾಸಣೆ ನಡೆಸಿದೆ.

ಇದರಲ್ಲಿ ಕಡಿಮೆ ತೂಕದಲ್ಲಿ ಮಾರುತ್ತಿದ್ದದವರ ಮೇಲೆ 6 ಮೊಕದಮ್ಮೆ ಹಾಗೂ ಸತ್ಯಾಪನೆ  ಮತ್ತು ಮುದ್ರೆ ಇಲ್ಲದ ತೂಕದ  ಯಂತ್ರಗಳ ಬಳಸುತ್ತಿದ್ದಕ್ಕಾಗಿ 10 ಮೊಕದಮ್ಮೆ ಸೇರಿ ಒಟ್ಟು 16 ಮೊಕದಮ್ಮೆ ದಾಖಲಿಸಿ 28000 ರೂ. ಅಭಿ ಸಂಧಾನ ದಂಡ ವಿಧಿಸಲಾಗಿದೆ ಎಂದು ರಫೀಕ್ ಲಾಡಜಿ ತಿಳಿಸಿದಾರೆ.

ದಾಳಿಯ ತಂಡದಲ್ಲಿ ಕಾನೂನು ಮಾಪನಶಾಸ್ತ್ರ ಇಲಾಖೆಯ ನಿರೀಕ್ಷಕರಾದ ಅಮರೇಶ್ ಹೊಸಮನಿ,  ಅಶ್ವತ್ ಕುಮಾರ್ ಪತ್ತಾರ್ ಮತ್ತು ವಿಶ್ವನಾಥ್ ರೆಡ್ಡಿ ಇದ್ದರು.

ನ್ಯಾಯಬೆಲೆ ಅಂಗಡಿಗಳ ತೂಕದಲ್ಲಿ ವ್ಯತ್ಯಾಸವಿದಲ್ಲಿ ಗ್ರಾಹಕರು ದೂರವಾಣಿ ಸಂಖ್ಯೆ: 08472-278678 ಕರೆ ಮಾಡಿ ದೂರು ದಾಖಲಿಸಬಹುದು ಎಂದು ಸಹಾಯಕ ನಿಯಂತ್ರಕ ರಫೀಕ್ ಲಾಡಜಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ