ಆರೋಗ್ಯ

ಕಡಿಮೆ ದರದಲ್ಲಿ ಗುಣಮಟ್ಟದ ಮಾಸ್ಕ್

ಭುವನೇಶ್ವರಿ ಮಹಿಳಾ ಸ್ವ ಸಹಾಯ ಸಂಘದಿಂದ ತಯಾರಿಕೆ

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ಕೊರೊನಾ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಧರಿಸಲಾಗುತ್ತಿರುವ ಮಾಸ್ಕ್‍ಗೆ ಬೇಡಿಕೆ ಹೆಚ್ಚಾಗುತ್ತಿದೆ. ಬೇಡಿಕೆ ಹೆಚ್ಚಿದಂತೆ ಮಾಸ್ಕ್‍ಗಳ ದರ ಕೂಡ ಹೆಚ್ಚಾಗುತ್ತಿದೆ. ಏತನ್ಮಧ್ಯೆ ಮಾಸ್ಕ್‍ಗಳ ಅವಶ್ಯಕತೆಯನ್ನರಿತ ಚಾಮರಾಜನಗರ ತಾಲೂಕಿನ ಗೂಳಿಪುರದ ಮಹಿಳಾ ಸ್ವ ಸಹಾಯ ಸಂಘವೊಂದು ಗುಣಮಟ್ಟದ ಮಾಸ್ಕ್‌ಗಳನ್ನು ತಯಾರಿಸಿ, ಕಡಿಮೆ ದರದಲ್ಲಿ ಗ್ರಾಹಕರಿಗೆ ಪೂರೈಸಲು ಮುಂದಾಗಿದೆ.

ಗೂಳಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಭುವನೇಶ್ವರಿ ಮಹಿಳಾ ಸ್ವ ಸಹಾಯ ಸಂಘ, ಈ ಉಪಕ್ರಮ ಕೈಗೊಂಡಿದೆ. ಜಿಲ್ಲಾ ಪಂಚಾಯಿತಿಯ ಎನ್.ಆರ್.ಎಲ್.ಎಂ. ಯೋಜನೆಯಡಿ ಸಮುದಾಯ ಬಂಡವಾಳ ನಿಧಿ ಕಾರ್ಯಕ್ರಮದಡಿ ಸಾಲ ಸೌಲಭ್ಯ ಪಡೆದು ಹೊಲಿಗೆ ಯಂತ್ರಗಳನ್ನು ಖರೀದಿಸಿ ಸ್ವ ಉದ್ಯೋಗ ಕೈಗೊಂಡಿರುವಂತಹ ಭುವನೇಶ್ವರಿ ಮಹಿಳಾ ಸ್ವ ಸಹಾಯ ಸಂಘದ ನಾಗರತ್ನಮ್ಮ, ರಾಜಮ್ಮಣ್ಣಿ ಹಾಗೂ ಭಾಗ್ಯಮ್ಮ ಎಂಬುವವರು ಕಡಿಮೆ ದರದಲ್ಲಿ ಗುಣಮಟ್ಟದ ಮಾಸ್ಕ್‍ಗಳನ್ನು ತಯಾರಿಸುತ್ತಿದ್ದಾರೆ.

ಮಹಿಳೆಯರ ಜನಸ್ನೇಹಿ ಕ್ರಮ

ಕೊರೊನಾ ಸೋಂಕಿನ ಹಿನ್ನಲೆಯಲ್ಲಿ ಉಂಟಾಗಿರುವ ಮಾಸ್ಕ್‍ಗಳ ಬೇಡಿಕೆಯನ್ನರಿತ ಈ ಮೂವರು ಮಹಿಳಾ ಮಣಿಯರು, ಸಾಮಾನ್ಯರಿಗೂ ಮಾಸ್ಕ್ ದೊರೆಯುವಂತೆ ಮಾಡುವ ಉದ್ದೇಶದಿಂದ ಈ ಕೆಲಸಕ್ಕೆ ಕೈ ಹಾಕಿದ್ದಾರೆ. ಉತ್ತಮ ರೀತಿಯ ಬಟ್ಟೆ ಹತ್ತಿ ಬಟ್ಟೆ ಉಪಯೋಗಿಸಿ, ಬಳಸಲು ಸುಲಭವಾಗುವ ರೀತಿಯಲ್ಲಿ ಮಾಸ್ಕ್‍ಗಳನ್ನು ಹೊಲಿಯಲಾಗಿದೆ. ಮಾಸ್ಕ್‍ಗಳು ಗುಣಮಟ್ಟದ್ದಾಗಿದ್ದು ಬೆಲೆಯೂ ಕೂಡ ಅತೀ ಕಡಿಮೆ ಇದೆ.

ಎಲ್ಲೆಲ್ಲಿ ಲಭ್ಯ?

ಭುವನೇಶ್ವರಿ ಮಹಿಳಾ ಸ್ವ ಸಹಾಯ ಸಂಘದ ಮಹಿಳೆಯರು ತಾವು ತಯಾರಿಸಿದ ಮಾಸ್ಕ್‍ಗಳನ್ನು ಆರೋಗ್ಯ ಇಲಾಖೆ ಹಾಗೂ ಇತರೆ ಔಷಧಾಲಯಗಳಿಗೆ ಕಡಿಮೆ ದರದಲ್ಲಿ ಸರಬರಾಜು ಮಾಡುತ್ತಿದ್ದಾರೆ. ಎನ್.ಆರ್.ಎಲ್.ಎಂ. ಯೋಜನೆಯಡಿ ಕೈಗೊಂಡಿರುವ ಚಟುವಟಿಕೆಗಳಿಗೆ ಉತ್ತೇಜಿಸಬೇಕಿದೆ. ನಾಗರತ್ನ ಅವರ ದೂರವಾಣಿ ಸಂಖ್ಯೆ: 6362911940 ಆಗಿದ್ದು, ಹೆಚ್ಚಿನ ವಿವರಗಳಿಗೆ ಸಂಪರ್ಕಿಸಬಹುದಾಗಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ