CrimeNEWSಸಿನಿಪಥ

ಕನ್ನಡ ಚಿತ್ರರಂಗದ ಹಿರಿಯ ನಟ ಟಿ.ಎಸ್. ಲೋಹಿತಾಶ್ವ ಇನ್ನು ನೆನಪು ಮಾತ್ರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಟಿ.ಎಸ್. ಲೋಹಿತಾಶ್ವ ಅವರು ಮಂಗಳವಾರ ನಿಧನರಾಗಿದ್ದಾರೆ.

80 ವರ್ಷದ ಲೋಹಿತಾಶ್ವ ಅವರಿಗೆ ಇತ್ತೀಚಿಗೆ ತೀವ್ರ ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ಕುಮಾರಸ್ವಾಮಿ ಲೇಔಟ್ ನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಜೀವರಕ್ಷಕ ಸಾದನ (ವೆಂಟಿಲೇಟರ್) ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ.

ಆಗಸ್ಟ್‌ 5, 1942ರಲ್ಲಿ ತುಮಕೂರಿನ ತೊಂಡಗೆರೆ ಗ್ರಾಮದಲ್ಲಿ ಜನಿಸಿದರು. ನಾಟಕಕಾರಾಗಿದ್ದ ನಟ ಲೋಹಿತಾಶ್ವ ಅವರು ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿಯಲ್ಲಿ ಇಂಗ್ಲಿಷ್‌ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿಯನ್ನು ಮುಗಿಸಿದರು. ಬಳಿಕ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಕರ್ತವ್ಯ ಆರಂಭಿಸಿದರು. ಜೊತೆಗೆ ನಟನೆಯಲ್ಲೂ ಅಭಿರುಚಿ ಹೊಂದಿದ್ದ ಲೋಹಿತಾಶ್ವ ಅವರು ನಾಟಕಕಾರನಾಗಿ ಚಿರಪರಿಚಿತರಾಗಿದ್ದರು.

ಲೋಹಿತಾಶ್ವ ಅವರು 1971ರಲ್ಲಿ ವತ್ಸಲಾ ಎನ್ನುವವರನ್ನು ವಿವಾಹವಾದರು. ಮೂವರು ಮಕ್ಕಳ ಮುದ್ದಿನ ತಂದೆಯಾಗಿರುವ ಲೋಹಿತಾಶ್ವ ಅವರ ಪುತ್ರ ಶರತ್ ಲೋಹಿತಾಶ್ವ ಅವರು ಕೂಡ ಕನ್ನಡ ಚಿತ್ರರಂಗದಲ್ಲಿ ಜನಪ್ರಿಯತೆ ಪಡೆದಿದ್ದಾರೆ.

ತಮ್ಮ ಧ್ವನಿ ಮೂಲಕವೇ ಪ್ರೇಕ್ಷಕರ ಗಮನ ಸೆಳೆಯುತ್ತಿದ್ದ ಲೋಹಿತಾಶ್ವ ಅವರು ಈವರೆಗೂ ಐದು ನೂರಕ್ಕೂ ಹೆಚ್ಚು ಕನ್ನಡ ಚಲನಚಿತ್ರಗಳಲ್ಲಿ ಹಾಗೂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಕನ್ನಡ ಧಾರಾವಾಹಿಗಳಲ್ಲಿ ಇತಿಹಾಸ ಸೃಷ್ಟಿಸಿದ್ದ ನಟ ಶಂಕರ್‌ ನಾಗ್‌ ಅಭಿನಯದ ಮಾಲ್ಗುಡಿ ಡೇಸ್‌ ಧಾರಾವಾಹಿಯಲ್ಲಿ ಲೋಹಿತಾಶ್ವ ಅವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದರು.

ಗಿರೀಶ್‌ ಕಾಸರವಳ್ಳಿಯವರ ಗೃಹಭಂಗ, ಜಿ.ವಿ ಅಯ್ಯರ್‌ ನಿರ್ದೇಶನದ ನಾಟ್ಯರಾಣಿ ಶಕುಂತಲಾ, ಕೆ.ಎಂ ಚೈತನ್ಯಾ ನಿರ್ದೇಶನದ ಓಂ ನಮೋ ಸೇರಿದಂತೆ ಅನೇಕ ಧಾರಾವಾಹಿಗಳಲ್ಲಿ ನಟಿಸಿ ಲೋಹಿತಾಶ್ವ ಅವರು ಕರ್ನಾಟಕದ ಮನೆ ಮಾತಾಗಿದ್ದರು.

1981ರ ಮುನಿಯನ ಮಾದರಿ, ಸಾಂಗ್ಲಿಯಾನ, ಅಭಿಮನ್ಯು, ದಾದಾ, ಎ.ಕೆ 47, ಗೀತಾ, ಇಂದ್ರಜಿತ್‌, ಜಯಸಿಂಹ, ಕಾಡಿನ ರಾಜ, ಲಾಕಪ್ ಡೆತ್‌, ಕಲಾವಿದ, ಚಿನ್ನಾ, ಮಿಡಿದ ಹೃದಯಗಳು, ಮೈಸೂರು ಜಾಣ, ರೆಡಿಮೇಡ್‌ ಗಂಡ, ಎಸ್‌.ಪಿ ಸಾಂಗ್ಲಿಯಾನ ಭಾಗ-2, ಸ್ನೇಹಲೋಕ, ಸುಂದರ ಕಾಂಡ, ತುಂಬಿದ ಮನೆ, ಸವ್ಯಾ ಸಾಚಿ, ಶಾಂತಿ ನಿವಾಸ, ಸಮಯದ ಗೊಂಬೆ, ನೀ ಬರೆದ ಕಾದಂಬರಿ, ಹಲೋ ಡ್ಯಾಡಿ, ಏಕಲವ್ಯ, ಆಪತ್ಭಾಂಧವ, ಚಾಣಕ್ಯ, ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿ ಕನ್ನಡ ಮೇರು ನಟರ ಜೊತೆ ತೆರೆ ಹಂಚಿಕೊಂಡಿದ್ದರು.

ಇನ್ನು ಕಿಚ್ಚ ಸುದೀಪ್‌ ಅಭಿನಯದ ಚಂದು ಸಿನಿಮಾ ಹಾಗೂ ಚಾಲೆಂಜಿಂಗ್ ಸ್ಟಾರ್‌ ದರ್ಶನ್ ಅಭಿನಯದ ಸಾರಥಿ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು ಹವ್ಯಾಸಿ ರಂಗ ಕಲಾವಿದರಾಗಿರುವ ಲೋಹಿತಾಶ್ವ ಅವರು 47 ಮಾವಳ್ಳಿ ಸರ್ಕಲ್‌, ಭರತ ದರ್ಶನ, ಚಸ್ನಾಳ ದುರಂತ, ದಂಗೆ ಮುಂಚಿನ ದಿನಗಳು, ಹುಲಿಯ ನೆರಳು, ಹುಟ್ಟಾವ ಬಡಿದರೇ, ಕತ್ತಲೆ ದಾರಿ ದೂರ, ಹುಲಿಯ ನೆರಳು, ಮೆರವಣಿಗೆ ಸೇರಿದಂತೆ ಅನೇಕ ನಾಟಕಗಳಲ್ಲಿ ನಟಿಸಿದ್ದಾರೆ. 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಲೋಹಿತಾಶ್ವ ಅವರು ಕರ್ನಾಟಕ ರಾಜ್ಯ ನಾಟಕ ಅಕಾಡೆಮಿ ಪ್ರಶಸ್ತಿ ಹಾಗೂ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ