NEWSನಮ್ಮಜಿಲ್ಲೆನಮ್ಮರಾಜ್ಯ

ಕನ್ನಡ ನುಡಿ ಪ್ರತಿಯೊಬ್ಬ ಕನ್ನಡಿಗನ ಉಸಿರಾಗಬೇಕು: ಅಂದಾನೆಪ್ಪ ವಿಭೂತಿ

ವಿಜಯಪಥ ಸಮಗ್ರ ಸುದ್ದಿ

ಗದಗ: ವಿಶ್ವದೆಲ್ಲೆಡೆ ಕರ್ನಾಟಕ ಹೆಸರಾಗಿದೆ, ಜತೆಗೆ ಕನ್ನಡ ನುಡಿ ಪ್ರತಿಯೊಬ್ಬ ಕನ್ನಡಿಗನ ಉಸಿರಾಗಬೇಕು, ಕನ್ನಡವನ್ನು ಪ್ರೀತಿಸಬೇಕು. ಯಾಕೆಂದರೆ ಕನ್ನಡ ನಮ್ಮ ನಾಡಿ ಮಿಡಿತ, ಹೃದಯದ ಬಡಿತ, ಮಾತೃ ಪ್ರೇಮದ ತುಡಿತ, ಹಾಗೂ ಬದುಕಿನ ದುಡಿತ, ಕನ್ನಡ ಪ್ರೀತಿಯೇ ಕನ್ನಡಿಗರಿಗೆ ಶಾಶ್ವತ ಎಂದು ಹಿರಿಯ ಸಾಹಿತಿ ಅಂದಾನೆಪ್ಪ ವಿಭೂತಿ ತಿಳಿಸಿದ್ದಾರೆ.

ಅವರು ಶನಿವಾರ ಬೆಳಗ್ಗೆ ಚಿಕ್ಕಟ್ಟಿ ಶಾಲೆಯ ಸಭಾಭವನದಲ್ಲಿ, ಉತ್ತರ ಕರ್ನಾಟಕ ಕಲಾವಿದರ ಹಾಗೂ ಕಲಾ ಪೋಷಕರ ಸಂಘಟನೆಯಾದ ಕಲಾ ವಿಕಾಸ ಪರಿಷತ್ ಗದಗ ಮತ್ತು ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕನ್ನಡ ಮತ್ತು ಸಂಸ್ಕೃತಿ ಸಂಭ್ರಮ-2025 ಸಮಾರಂಭಲ್ಲಿ ಮಾತನಾಡಿದರು.

ಕರ್ನಾಟಕ ಏಕೀಕರಣ ಹೋರಾಟದ ಮಜಲುಗಳನ್ನು ಮೆಲುಕು ಹಾಕುತ್ತಾ ಹೋರಾಟಗಾರರ ತ್ಯಾಗದ ಬದುಕನ್ನು ಸ್ಮರಿಸಿದ ಅವರು, ಹೆಸರಾಯಿತು ಕರ್ನಾಟಕ ಎನ್ನುವ ವಿಷಯದ ಬಗ್ಗೆ ವಿವರಿಸಿದರು.

ಕಲಾ ವಿಕಾಸ ಪರಿಷತ್ ಪೋಷಕರಾದ ಡಾ. ಜಿ.ಬಿ.ಪಾಟೀಲರು ಮಾತನಾಡಿ, ಕನ್ನಡ ದಿಗ್ಗಜ ಸಾಹಿತಿಗಳನ್ನು ಮತ್ತು ಅವರ ಸಾಂಸ್ಕೃತಿಕ ಪ್ರೀತಿಯನ್ನು ನೆನಪಿಸಿದರು ಕಲಾವಿಕಾಸ ಪರಿಷತ್ ನ ನಾಡ ನುಡಿಯ ಸೇವೆಯನ್ನು ಸ್ಮರಿಸಿಕೊಂಡರು.

ಡಾ. ಜಿ.ಬಿ.ಬೀಡಿನಹಾಳ ತಮ್ಮ ಬಾಲ್ಯದ ಬಡತನವನ್ನು ಬಿಚ್ಚಿಟ್ಟು ಪಟ್ಟ ಪರಿಶ್ರಮ ಮತ್ತು ತಂದೆ ತಾಯಿಗಳ ದೂರದೃಷ್ಟಿಯನ್ನು ಸ್ಮರಿಸಿಕೊಂಡರು. ಕೃಷಿ ಮತ್ತು ಕ್ರೀಡೆಯ ಆಸಕ್ತಿ ಮತ್ತು ಪ್ರೀತಿಯನ್ನು ಹಂಚಿಕೊಂಡರು ಮಾತ್ರವಲ್ಲದೇ ತಮ್ಮ ಸಾಧನೆಗೆ ತಮ್ಮ ತಂದೆ ತಾಯಿಗಳೆ ಕಾರಣ ಈ ಗೌರವವನ್ನು ನನ್ನ ತಂದೆ ತಾಯಿಗಳಿಗೆ ಅರ್ಪಿಸುತ್ತಿದ್ದೇನೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಕಲಾ ವಿಕಾಸ ಪರಿಷತ್‌ನ ಹಿತೈಸಿಗಳೂ ಆದ ವೈದ್ಯ ಡಾ. ಜಿ.ಬಿ.ಬೀಡಿನಹಾಳ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಅಧ್ಯಕ್ಷೀಯ ಭಾಷಣ ಮಾಡಿದ ಭಾರತೀಯ ಶಿಕ್ಷಣ ಸಂಸ್ಥೆಯ ಪ್ರೊ. ಡಾ. ಎಸ್. ವಾಯ್ ಚಿಕ್ಕಟ್ಟಿ ಅವರು ಕಲಾವಿಕಾಸ ಪರಿಷತ್ತಿನೊಂದಿಗಿನ ಬಹುವರ್ಷಗಳ ಸಾಂಸ್ಕೃತಿಕ ನಂಟನ್ನು ನೆನಪು ಮಾಡಿಕೊಂಡರು. ಪ್ರಾಸ್ತಾವಿಕವಾಗಿ ಮಾತನಾಡಿದ ಕಲಾವಿಕಾಸ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಸಿ.ಕೆ.ಎಚ್. ಕಡಣಿ ಶಾಸ್ತ್ರಿಗಳು ಕಲಾ ವಿಕಾಸ ಪರಿಷತ್ತು ನಡೆದು ಬಂದ ದಾರಿ ಮತ್ತು 2025 ನೆಯ ಸಾಲಿನಲ್ಲಿ ಹಮ್ಮಿಕೊಳ್ಳಲಿರುವ ಕಾರ್ಯಕ್ರಮಗಳ ಮಾಹಿತಿ ನೀಡಿದರು.

ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯ ಅಧ್ಯಕ್ಷ ಪಂ. ಫಕೀರೇಶ್ವರ ಶಾಸ್ತ್ರಿಗಳು ಹಿರೇಮಠ (ಬೆಳ್ಳಟ್ಟಿ) ವೇದಿಕೆಯಲ್ಲಿ ಇದ್ದರು. ಕನ್ನಡ ಉಪನ್ಯಾಸಕ ಸಾಹಿತಿ ಶ್ರೀಶೈಲ ಬಡಿಗೇರ ಅವರು ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ಹೇಮಾ ವೆಂಕಟೇಶ ಆಲ್ಕೋಡ ಇವರಿಂದ ಸುಗಮ ಸಂಗೀತ, ಗವಿಸಿದ್ಧಯ್ಯ ಹಳ್ಳಿಕೇರಿಮಠ ಇವರಿಂದ ಜಾನಪದ ಹಾಡುಗಾರಿಕೆ, ಪಾಪನಾಸಿಯ ಸುಧಾ ಪಾಟೀಲ್ ತಂಡದವರಿಂದ ಯೋಗ ಪ್ರದರ್ಶನ ಹಾಗೂ ಚಿಕ್ಕಟಿ ಸಮೂಹ ಶಾಲೆಯ ಮಕ್ಕಳಿಂದ ಭರತ ನಾಟ್ಯ ಜಾನಪದ ನೃತ್ಯ ಪ್ರದರ್ಶನಗಳು ನಡೆದವು.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ