ಕೆ.ಆರ್.ಪೇಟೆ: ಕನ್ನಡ ರಾಜ್ಯೋತ್ಸವ ನಿತ್ಯೋತ್ಸವವಾಗಬೇಕು ಎಂದು ತೆಂಡೆಕೆರೆ ಬಾಳೆಹೊನ್ನೂರು ಶಾಖಾಮಠದ ಪೀಠಾಧಿಗಳಾದ ಶ್ರೀ ಗಂಗಾಧರ ಶಿವಾಚಾರ್ಯ ಸ್ವಾಮೀಜಿ ಕರೆ ನೀಡಿದರು.
vijayapatha.in - ವಿಜಯಪಥ.ಇನ್ ನಿಮಗೆ ವಿಶ್ವಾಸನೀಯ ಸುದ್ದಿಗಳನ್ನು ಪ್ರಸಾರ ಮಾಡುತ್ತಿದೆ ಎಂದು ಅನಿಸಿದರೆ ನಮಗೆ ಆರ್ಥಕವಾಗಿ ಬಲ ನೀಡಿ. ಇನ್ನಷ್ಟು ಸತ್ಯನಿಷ್ಠ ವರದಿಗಳನ್ನು ಮಾಡುವುದಕ್ಕೆ ಬೆಂಬಲ ನೀಡಿ. ಕನಿಷ್ಠ 100 ರೂ. ಒಮ್ಮೆಗೆ ಹಾಕಿ. ನಮ್ಮನ್ನು ಪ್ರೋತ್ಸಾಹಿಸಿ.
ಅವರು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಹೊನ್ನೇನಹಳ್ಳಿ ವೇಣು ನೇತೃತ್ವದಲ್ಲಿ ಇಂದು ಆಯೋಜಿಸಿದ್ದ 69ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಸಾವಿರಾರು ವರ್ಷಗಳ ಭವ್ಯ ಇತಿಹಾಸ ಹಾಗೂ ಪರಂಪರೆ ಹೊಂದಿರುವ ಕನ್ನಡ ಭಾಷೆಯು ಅತ್ಯಂತ ಶ್ರೀಮಂತ ಭಾಷೆಯಾಗಿದ್ದು ಎಂಟು ಜ್ಞಾನ ಪೀಠ ಪ್ರಶಸ್ತಿಗಳನ್ನು ಪಡೆದ ಹೆಗ್ಗಳಿಕೆ ಕನ್ನಡ ಭಾಷೆಗೆ ಸಲ್ಲುತ್ತದೆ. ಕನ್ನಡ ಭಾಷೆ, ನೆಲ ಜಲಕ್ಕೆ ಹಾಗೂ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ಎದುರಾದ ಸಂದರ್ಭದಲ್ಲಿ ಕನ್ನಡಿಗರು ಬೀದಿಗಿಳಿದು ಹೋರಾಟ ನಡೆಸಲು ಸದಾ ಸಿದ್ದರಾಗಿರಬೇಕು ಎಂದು ಸ್ವಾಮೀಜಿ ಕರೆ ನೀಡಿದರು.
ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಸುಷ್ಮಾ, ಕರವೇ ಪದವೀಧರ ಘಟಕದ ಗೌರವ ಅಧ್ಯಕ್ಷ ಚಿಕ್ಕೋನಹಳ್ಳಿ ಚೇತನ್ ಕುಮಾರ್, ಕರವೇ ಜಿಲ್ಲಾಧ್ಯಕ್ಷ ವೇಣು, ಉಪಾಧ್ಯಕ್ಷ ಸಾಸಲು ಗುರುಮೂರ್ತಿ, ಕರವೇ ತಾಲೂಕು ಘಟಕದ ಅಧ್ಯಕ್ಷ ಟೆಂಪೋ ಶ್ರೀನಿವಾಸ್, ನಗರ ಘಟಕದ ಅಧ್ಯಕ್ಷ ಮದನ್ ಸೇರಿದಂತೆ ನೂರಾರು ಕರವೇ ಕಾರ್ಯಕರ್ತರು ಭಾಗವಹಿಸಿದ್ದರು.