NEWSನಮ್ಮಜಿಲ್ಲೆರಾಜಕೀಯ

ಕೆಪಿಸಿಸಿ ಅಧ್ಯಕ್ಷರೇ ನೀವು ಹೊಡಿ, ಬಡಿ ರಾಜಕಾರಣದ ಬ್ರ್ಯಾಂಡ್ ಅಂಬಾಸಿಡರ್ ಆಗಲು ಹೊರಟಿದ್ದೀರಾ: ರಾಜ್ಯ ಬಿಜೆಪಿ ಪ್ರಶ್ನೆ

ವಿಜಯಪಥ ಸಮಗ್ರ ಸುದ್ದಿ

ಮದ್ದೂರು: ಮಂಡ್ಯದ ಮದ್ದೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ತಲೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೊಡೆದಿದ್ದಕ್ಕೆ ರಾಜ್ಯ ಬಿಜೆಪಿ ಸರಣಿ ಟ್ವೀಟ್ ಮಾಡಿದೆ. ಟ್ವಿಟ್ಟರ್​ನಲ್ಲಿ ಡಿಕೆಶಿಯವರೇ ನೀವು ರಾಜಕಾರಣಿಯೋ ಅಥವಾ ರೌಡಿಯೋ? ಎಂದು ಪ್ರಶ್ನಿಸಿದೆ.

ಸಾರ್ವಜನಿಕ ಜೀವನದಲ್ಲಿದ್ದುಕೊಂಡು ಒಬ್ಬ ವ್ಯಕ್ತಿಯ ಮೇಲೆ ಸಾರ್ವಜನಿಕವಾಗಿ, ಮಾಧ್ಯಮಗಳ ಎದುರು ಹಲ್ಲೆ ಮಾಡುವುದು ಶಿವಕುಮಾರ್​ ಅವರ ಉಗ್ರ ಮನಸ್ಥಿತಿಯನ್ನು ತೋರಿಸುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.

ಈ ಹಿಂದೆ ಸೆಲ್ಫಿ ತೆಗೆಯಲು ಬಂದ ಕಾರ್ಯಕರ್ತನ ಮೇಲೆ ಡಿಕೆಶಿ ಹಲ್ಲೆ ಮಾಡಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ಗತಕಾಲದ ನೆನಪು ಕಾಡಿತೇ? ಅವರಿಗೆ ರೌಡಿ ಕೊತ್ವಾಲನೊಂದಿಗಿದ್ದ ಗತಕಾಲದ ನೆನಪು ಕಾಡಿತೇ? ಎಂದು ಪ್ರಶ್ನಿಸಿದ ರಾಜ್ಯ ಬಿಜೆಪಿ, ಒಂದು ರಾಷ್ಟ್ರೀಯ ಪಕ್ಷದ ರಾಜ್ಯ ಅಧ್ಯಕ್ಷನಾಗಿದ್ದುಕೊಂಡು ಸಾರ್ವಜನಿಕವಾಗಿ ಒಬ್ಬ ವ್ಯಕ್ತಿಯ ಮೇಲೆ ಈ ರೀತಿ ಹಲ್ಲೆ ಮಾಡುವುದು ಅಕ್ಷಮ್ಯ ಎಂದಿದೆ. ಅಲ್ಲದೆ ‘ರೌಡಿಡಿಕೆಶಿ’ ಟ್ಯಾಗ್ ಮಾಡಿ ವ್ಯಂಗ್ಯ ಮಾಡಿದೆ.

ಕಾರ್ಯಕರ್ತ ಹತ್ತಿರ ಬಂದ ಎಂಬ ಕಾರಣಕ್ಕೆ ಸಾರ್ವಜನಿಕವಾಗಿ ಹಲ್ಲೆ ಮಾಡುವ ಶಿವಕುಮಾರ್ ಅವರ ಬಳಿ ಜನಸಾಮಾನ್ಯರು ಹೋದರೆ ಗತಿಯೇನು ? ಕೆಪಿಸಿಸಿ ಅಧ್ಯಕ್ಷರೇ, ನೀವು ಹೊಡಿ, ಬಡಿ ರಾಜಕಾರಣದ ಬ್ರ್ಯಾಂಡ್ ಅಂಬಾಸಿಡರ್ ಆಗಲು ಹೊರಟಿದ್ದೀರಾ ಎಂದು ಪ್ರಶ್ನಿಸಿದೆ.

ಕೆಪಿಸಿಸಿ ಅಧ್ಯಕ್ಷರ ಹದ್ದು ಮೀರಿದ ವರ್ತನೆಗಳು ಇತ್ತೀಚೆಗೆ ಮಿತಿ ಮೀರುತ್ತಿದೆ. ʼನಾನು ಮಾತಾಡುವಾಗ ಮಧ್ಯ ಮಾತಾಡಿದ್ರೆ ಒದ್ದು ಹೊರಹಾಕುವೆʼ ಎಂದು ಇತ್ತೀಚೆಗೆ @DKShivakumar ಗದರಿಸಿದ್ದರು. ಸಾರ್ವಜನಿಕವಾಗಿ ಹೊಡೆಯುವುದು, ಒದೆಯೋದು, ಕಾರ್ಯಕರ್ತರ ಮೊಬೈಲನ್ನು ಕಿತ್ತೆಸೆಯುವುದು ಇದೆಲ್ಲ ರೌಡಿ ಲಕ್ಷಣ ಅಲ್ಲದೆ ಮತ್ತೇನು ಎಂದೂ ಪ್ರಶ್ನಿಸಿದೆ.

ಆಗಿದ್ದೇನು?
ಜಿ.ಮಾದೇಗೌಡರ ಆರೋಗ್ಯ ವಿಚಾರಿಸಲು ಡಿ.ಕೆ.ಶಿವಕುಮಾರ್ ಕೆ.ಎಂ.ದೊಡ್ಡಿಗೆ ಆಗಮಿಸಿದ್ದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಹಿಂಭಾಗ ಬರುತ್ತಿದ್ದರು. ಅಲ್ಲದೇ ಹಿಂಭಾಗದಿಂದ ಬಂದು ಶಿವಕುಮಾರ್ ಹೆಗಲ ಮೇಲೆ ಕೈ ಹಾಕಿದ ಆರೋಪ ಕೇಳಿಬಂದಿದ್ದು, ಕಾರ್ಯಕರ್ತನ ತಲೆ ಮೇಲೆ ಪಟಾರ್ ಅಂತ ಬಾರಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಕೊಟ್ಟ ಏಟಿಗೆ ಕಾರ್ಯಕರ್ತರು ತಬ್ಬಿಬ್ಬಾಗಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು