CrimeNEWSನಮ್ಮರಾಜ್ಯ

ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಬಿಗ್‌ ರಿಲೀಫ್‌ ನೀಡಿದ ಹೈ ಕೋರ್ಟ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣದಲ್ಲಿ ವಿಚಾರಣೆ ಎದರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರಿಗೆ ಹೈ ಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ.

ರಾಜ್ಯದಲ್ಲಿ ಇನ್ನು ಕೆಲವೆ ಕೆಲವು ದಿನಗಳಲ್ಲಿ ವಿಧಾನಸಭಾ ಕ್ಷೇತ್ರಗಳ ಚುನಾವಣೆ ಬರುತ್ತಿದ್ದು, ಈ ಚುನಾವಣೆಯಲ್ಲಿ ಡಿಕೆಶಿ ಅವರನ್ನು ಮಾನಸಿಕವಾಗಿ ಹಿಂಸಿಸಬೇಕು ಎಂಬ ಉದ್ದೇಶದಿಂದಲೋ ಏನೋ ಗೊತ್ತಿಲ್ಲ.

ಆದರೆ ಈ ಸಂದರ್ಭದಲ್ಲಿ ಡಿಕೆಶಿ ಮತ್ತು ಅವರ ಕುಟುಂಬದವರಿಗೆ ಸಿಬಿಐ (CBI) ನೋಟಿಸ್ ಕೊಡುತ್ತಲೇ ಇದೆ. ಹೀಗೆ ಸುಖಾಸುಮ್ಮನೆ ಹಿಂಸೆ ಕೊಡುವ ಕೆಲಸವನ್ನು ಮಾಡುತ್ತಾ ಇದ್ದಾರೆ ಎಂಬ ವಿಚಾರವನ್ನು ಶಿವಕುಮಾರ್‌ ಅವರ ಪರ ವಕೀಲರಾದ ಜಾದವ್ ಕೋರ್ಟ್ ಗಮನಕ್ಕೆ ತಂದಿದ್ದರು.

ಡಿಕೆಶಿ ಅವರು ಈ ಪ್ರಕರಣದಲ್ಲಿ ಆರೋಪಿ. ಆದರೆ ಅವರನ್ನು ಹೊರತುಪಡಿಸಿ ಅವರ ಪುತ್ರಿಯನ್ನು ವಿಚಾರಣೆಗೆ ಹಾಜರಾಗುವಂತೆ ಕರೆಯುತ್ತಿದ್ದಾರೆ. ಇದರಿಂದ ಅವರ ಕುಟುಂಬಕ್ಕೆ ತೊಂದರೆ ಆಗುತ್ತಿದೆ. ಚುನಾವಣೆಗೆ ಅಡ್ಡಿಪಡಿಸಬೇಕು, ಮಾನಸಿಕ ಹಿಂಸೆ ಕೊಡಬೇಕು ಅಂತಲೇ ಈ ರೀತಿ ಮಾಡಲಾಗುತ್ತಿದೆ ಎಂದು ಕೋರ್ಟ್ ಗಮನಕ್ಕೆ ತಂದರು.

ಈ ಸಂದರ್ಭದಲ್ಲಿ ನ್ಯಾಯಮೂರ್ತಿಗಳು ಅವರ ಪುತ್ರಿ ಚುನಾವಣೆ ಸ್ಪರ್ಧೆ ಮಾಡುತ್ತಿಲ್ಲ ಅಲ್ವಾ? ವಿಚಾರಣೆಗೆ ಹಾಜರಾಗಲು ತೊಂದರೆ ಏನಿದೆ? ವಿಚಾರಣೆಗೆ ಸಹಕರಿಸಬೇಕು ಅಲ್ವಾ ಎಂದು ಪ್ರಶ್ನೆ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಸಿಬಿಐ ಪರ ವಕೀಲ ಪ್ರಸನ್ನಕುಮಾರ್ ವಾದ ಮಂಡಿಸಿ, ಡಿಕೆಶಿ ಅವರ ಮಗಳ ಹೆಸರಿನಲ್ಲಿ 150 ಕೋಟಿ ರೂ. ಆಸ್ತಿ ಇದೆ. ಅದರ ಮೌಲ್ಯ ಏನು ಅಂತ ತಿಳಿದುಕೊಳ್ಳಬೇಕು. ತನಿಖೆ ಇನ್ನೂ 6 ತಿಂಗಳು ನಡೆಯಲಿದೆ. ಬಳಿಕ ಅಂತಿಮ ವರದಿ ಸಲ್ಲಿಸಬೇಕು ಎಂದು ವಾದಿಸಿದರು.

ಈ ವೇಳೆ ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಪೀಠ ಮೂಲ ಅರ್ಜಿಯೊಂದು ವಿಚಾರಣೆಗೆ ಬಾಕಿ ಉಳಿದಿದೆ. ಅದು ಇನ್ನೂ ಇತ್ಯರ್ಥ ಆಗದೇ ಇರುವ ಹಿನ್ನೆಲೆ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿದೆ. ಹೈಕೋರ್ಟ್ ಏಕಸದಸ್ಯ ಪೀಠ ಈ ಆದೇಶ ಹೊರಡಿಸಿದ್ದು, ಫೆಬ್ರವರಿ 24ಕ್ಕೆ ತನಿಖಾ ಪ್ರಗತಿ ವರದಿ ಸಲ್ಲಿಸಲು ಸೂಚಿಸಿ ವಿಚಾರಣೆ ಮುಂದೂಡಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ KSRTC ಬಸ್‌-ಬೈಕ್ ನಡುವೆ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ