NEWSಉದ್ಯೋಗಬೆಂಗಳೂರು

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವಸ್ತ್ರ ಸಂಹಿತೆ ಹಿಂಪಡೆಯಲು ಆಮ್ ಆದ್ಮಿ ಪಕ್ಷ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಅಕ್ಟೋಬರ್ 28 ಮತ್ತು 29ರಂದು ಸಿ ಗ್ರೂಪಿನ ಹುದ್ದೆ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರೀಕ್ಷೆ ನಡೆಸುತ್ತಿದ್ದು, ಈ ಪರೀಕ್ಷೆಗೆ ಹಾಜರಾಗಲು ಪರೀಕ್ಷಾರ್ಥಿಗಳಿಗೆ ವಸ್ತ್ರ ಸಂಹಿತೆ ವಿಧಿಸಲಾಗಿದೆ. ಇದು ಕಾನೂನು ಬಾಹಿರ. ಅಕ್ಟೋಬರ್ 28 ಮತ್ತು 29ರ ಪರೀಕ್ಷೆಗೆ ಸೂಚಿಸಿರುವ ವಸ್ತ್ರ ಸಂಹಿತೆಯನ್ನು ಹಿಂಪಡೆಯಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಆಗ್ರಹಿಸಿದ್ದಾರೆ.

ನಗರದ ಪಕ್ಷದ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ.5 ರಂದು ಒಂದೇ ದಿನ ಮೂರು ಪರೀಕ್ಷೆ ನಡೆಸುತ್ತಿರುವುದರಿಂದ ಅಭ್ಯರ್ಥಿಗಳಿಗೆ ಅನ್ಯಾಯ ಆಗುತ್ತದೆ. ಅಧಿಕಾರಿಗಳ ಬೇಜವಾಬ್ದಾರಿ ಎದ್ದು ಕಾಣುತ್ತಿದೆ. ಇವರೆಲ್ಲ ಪರೀಕ್ಷೆ ಬರೆಯದೆ ದುಡ್ಡು ಕೊಟ್ಟು ಅಧಿಕಾರಕ್ಕೆ ಬಂದಿದ್ದಾರೆ ಎನಿಸುತ್ತದೆ.

ತಕ್ಷಣವೇ ರಾಜ್ಯ ಸರ್ಕಾರ ಪರೀಕ್ಷೆಯನ್ನು ಮುಂದೂಡಬೇಕು. ಬುರ್ಖಾ ಹಾಕಿ ಬರುವ ಮುಸ್ಲಿಂ ಹೆಣ್ಣು ಮಕ್ಕಳಿಗೆ ಒಂದೂವರೆ ಗಂಟೆ ಮುಂಚೆ ಬರುವಂತೆ ಹೇಳಿದ್ದಾರೆ. ದೂರದ ಊರಿನಿಂದ ಬರುವವರು ತಡವಾಗಿ ಬಂದರೆ ಅವರ ಕತೆ ಏನು? ಈ ನಿಯಮಗಳನ್ನು ಬದಲಾಯಿಸಬೇಕು ಎಂದು ಒತ್ತಾಯಿಸಿದರು.

ಹುಲಿ ಉಗುರು ವಿವಾದದ ಬಗ್ಗೆ ಮಾತನಾಡಿ, ಕಾನೂನು ಬಾಹಿರವಾಗಿ ಹುಲಿ ಉಗುರು ಇಟ್ಟುಕೊಂಡಿರುವವರನ್ನೆಲ್ಲ ಬಂಧಿಸಬೇಕು. ನಟ ದರ್ಶನ್, ಜಗ್ಗೇಶ್ ನಿಖಿಲ್ ಅವರನ್ನು ಬಂಧಿಸಿ. ಎಲ್ಲರಿಗೂ ಒಂದೇ ಕಾನೂನು ಇರಬೇಕು ಎಂದರು.

ರಾಮನಗರವನ್ನು ಬೆಂಗಳೂರಿಗೆ ಸೇರಿಸಲು ವಿರೋಧ ವ್ಯಕ್ತಪಡಿಸಿದ ಅವರು, ಕುಮಾರಸ್ವಾಮಿಯವರು 110 ಹಳ್ಳಿಗಳನ್ನು ಬಿಬಿಎಂಪಿ ವಲಯಕ್ಕೆ ಸೇರಿಸಿದರು. ಎಚ್‌.ಡಿ. ಕುಮಾರಸ್ವಾಮಿ ಮತ್ತು ಡಿ.ಕೆ. ಶಿವಕುಮಾರ್ ಅವರಿಗೆ ರಿಯಲ್ ಸ್ಟೇಟ್ ಮಾತ್ರ ಗೊತ್ತು, ಅಭಿವೃದ್ಧಿ ಗೊತ್ತಿಲ್ಲ. ಅಂದು ಬಿಬಿಎಂಪಿ ವಲಯಕ್ಕೆ ಸೇರಿದ 110 ಹಳ್ಳಿಗಳಿಗೆ ಇಂದಿಗೂ ಸರಿಯಾದ ನೀರಿನ ವ್ಯವಸ್ಥೆ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಚಿತ್ರ ನಿಯಮಗಳನ್ನು ಹಿಂಪಡೆಯಿರಿ: 700 ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಸಲಾಗುತ್ತಿದ್ದು, ಸುಮಾರು 2.5 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. ಪರೀಕ್ಷಾರ್ಥಿಗಳಿಗೆ ವಿಚಿತ್ರ ನಿಮಯಗಳನ್ನು ಮಾಡಲಾಗಿದೆ. ಅದರಲ್ಲೂ, ಮಹಿಳೆಯರಿಗೆ ತಾಳಿ ಸೇರಿ ಎಲ್ಲ ಆಭರಣಗಳನ್ನು ಬಿಚ್ಚಿಟ್ಟು ಬರುವಂತೆ ಸೂಚಿಸಿದೆ.

ಪೂರ್ತಿ ತೋಳಿನ ಬಟ್ಟೆ ಧರಿಸಬಾರದು, ಜೀನ್ಸ್ ಧರಿಸಬಾರದು ಎಂದಿದ್ದು, ಅರ್ಧ ತೋಳಿನ ಬಟ್ಟೆ ಧರಿಸಲು ಸೂಚಿಸಿದ್ದಾರೆ. ಇದು ನಿಯಮ ಬಾಹಿರ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ಲೋಹಿತ್ ಹನುಮಾಪುರ ಹೇಳಿದರು.

ಈ ನಿಯಮಗಳು ನಮ್ಮ ಸಂವಿಧಾನ ಮತ್ತು ಧರ್ಮಕ್ಕೆ ವಿರುದ್ಧವಾಗಿವೆ. ಆ ಅಧಿಕಾರಿಗಳಿಗೆ ಈ ಬಗ್ಗೆ ಜ್ಞಾನ ಇಲ್ಲ ಎನಿಸುತ್ತದೆ. ದೂರದ ಊರಿನಿಂದ ಬಂದ ಪರೀಕ್ಷಾರ್ಥಿಗಳು ಚಿನ್ನದ ಆಭರಣಗಳನ್ನು ಎಲ್ಲಿಟ್ಟು ಹೋಗಬೇಕು. ನವೆಂಬರ್ 5 ರಂದು ಕಲ್ಯಾಣ ಕರ್ನಾಟಕ ಭಾಗದಲ್ಲಿ ಪೊಲೀಸ್ ಪೇದೆ ಹುದ್ದೆ ನೇಮಕಾತಿಗೆ ಪರೀಕ್ಷೆ ನಡೆಸುತ್ತಿದ್ದು, ಅದೇ ದಿನ ಕೇಂದ್ರ ಸರ್ಕಾರ ಬ್ಯಾಂಕಿಂಗ್ ಪರೀಕ್ಷೆ ಕೂಡ ನಡೆಸುತ್ತಿದೆ.

ಇದರ ಜತೆ ಮತ್ತೊಂದು ಪರೀಕ್ಷೆ ಕೂಡ ಅಂದೇ ನಡೆಯಲಿದ್ದು, ಇದರಿಂದ ಎರಡು ಮೂರು ಪರೀಕ್ಷೆ ಬರೆಯುವವರಿಗೆ ತೊಂದರೆಯಾಗುತ್ತದೆ, ಇದು ಕೇಂದ್ರ ಮತ್ತು ರಾಜ್ಯದ ನಡುವೆ ಹೊಂದಾಣಿಕೆ ಇಲ್ಲ ಎನ್ನುವುದನ್ನು ಸೂಚಿಸುತ್ತದೆ ಎಂದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ