ರಾಜಕೀಯವಿದೇಶ

ಕೊರೊನಾ ನಿಗ್ರಹಕ್ಕೆ 200 ಕೋಟಿ ರೂ. ಬಿಡುಗಡೆ :  ಸಿಎಂ ಯಡಿಯೂರಪ್ಪ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ವೈರಾಣು ನಿಗ್ರಹಕ್ಕೆ ಸರ್ಕಾರ ಟಾಸ್ಕ್ ಪೋರ್ಸ್ ಸಮಿತಿ ರಚಿಸಿ 200 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ವಿಧಾನ ಸೌಧದಲ್ಲಿ ಇಂದು ಕೋರೋನಾ ಕುರಿತು ಹಮ್ಮಿಕೊಂಡಿದ್ದ ತುರ್ತು ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ತೀರ್ಮಾನಗಳ ಬಗ್ಗೆ ಮಾತನಾಡಿದ ಅವರು ಆರೋಗ್ಯ ಸಚಿವ ಶ್ರೀರಾಮುಲು ಅವರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ರಚಿಸಲಾಗಿದ್ದು ಅದರಲ್ಲಿ ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸದಸ್ಯರಾಗಿರುತ್ತಾರೆ. ಈ ಸಮಿತಿ ಪ್ರತಿ ದಿನ ಸಭೆ ಸೇರಿ ಸರ್ಕಾರ ಕೈಗೊಳ್ಳಬೇಕಾದ ಕ್ರಮಗಳ ಬಗಗೆ ಜನರಿಗೆ ತಿಳಿಸುವುದಲ್ಲದೆ, ದಿನಕ್ಕೆರಡು ಬಾರಿ ಬುಲೆಟಿನ್ ಸಹ ಬಿಡುಗಡೆ ಮಾಡಲಿದೆ ಎಂದರು.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶದಿಂದ ಬಂದ ಪ್ರಯಾಣಿಕರನ್ನು ಪ್ರತ್ಯೇಖವಾಗಿ ಇರಿಸಲಾಗಿದೆ. ವಿಧಾನ ಸೌಧ, ವಿಕಾಸಸೌಧಕ್ಕೆ ಜನ ಬಾರದಂತೆ ನಿಷೇಧ ಹೇರಲಾಗಿದೆ. ರಾಜ್ಯದಲ್ಲಿ ಕಾಣಿಸಿಕೊಂಡಿರುವ ಹಕ್ಕಿ ಜ್ವರ, ಮಂಗನ ಕಾಯಿಲೆ ಹಾಗೂ ಹಂದಿ ಜ್ವರವನ್ನು ಸಹ ನಿಗ್ರಹ ಮಾಡುವುದಾಗಿ ತಿಳಿಸಿ, ಮಾರ್ಚ್ 31ರ ತನಕ ಯಾವುದೇ ಸಾರ್ವಜನಿಕ ಸಮಾರಂಭಗಳಲ್ಲಿ ಜನ ಭಾಗವಹಿಸಬಾರದು. 100ರಿಂದ 150 ಜನ ಒಳಪಟ್ಟು ಮದುವೆ ಸಮಾರಂಭ ಕೈಗೊಳ್ಳಲು ತಿಳಿಸಲಾಗಿದೆ ಎಂದು ತಿಳಿಸಿದರು.

ನಂತರ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಹಾಗೂ ಸದಸ್ಯರಾದ ಸಿದ್ದರಾಮಯ್ಯ ಎಲ್ಲಾ ಆಸ್ಪತ್ರೆಗಳಲ್ಲೂ ವೆಂಟಿಲೇಟರ್ ವ್ಯವಸ್ಥೆ ಮಾಡಬೇಕು. ಖಾಸಗಿ ಆಸ್ಪತ್ರಗಳಲ್ಲೂ ಸಹ ಕೋರೋನಾ ಪೀಡಿತ ರೋಗಿಗಳನ್ನು ನಿರಾಕರಿಸದೆ ದಾಖಲಿಸಿಕೊಳ್ಳಬೇಕು. ನೊಂದಾಯಿತ ಸೊಂಕಿತರ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಬೇಕು ಎಂದು ತಿಳಿಸಿದರು.

ನಂತರ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ ಕೊರೊನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ಇದನ್ನು ಆರೋಗ್ಯದ ತುರ್ತು ಪರಿಸ್ಥತಿ ಎಂದು ಘೋಷಿಸಿದೆ. ಜನರು ಇದಕ್ಕಾಗಿ ಹೆದರುವ ಬದಲಾಗಿ ಇದನ್ನು ತಡೆಗಟ್ಟಲು ಎಲ್ಲರೂ ಸಮರೋಪಾದಿಯಲ್ಲಿ ಕೈಜೋಡಿಸಬೇಕೆಂದು ತಿಳಿಸದರು.

ಹೊರದೇಶದಿಂದ ಬಂದ ಪ್ರಯಾಣಿಕರನ್ನು ಪ್ರತ್ಯೇಖವಾಗಿ ಇರಿಸಲಾಗಿದೆ. ಇವರನ್ನು ಗುರುತಿಸುವ ನಿಟ್ಟಿನಲ್ಲಿ ಅವರ ಬಲಗೈಗೆ ಠಸ್ಸೆ ಹಾಕಲಾಗಿದೆ. ಚೀನದಲ್ಲಿ 80881 ಕರೋನಾ ದೃಢ ಪ್ರಕರಣಗಳಲ್ಲಿ 68709 ಜನ ಗುಣಮುಖರಾಗಿದ್ದಾರೆ. ಇದರ ಒಟ್ಟು ಸಾವಿನ ಸಂಖ್ಯೆ 0.5 ರಿಂದ 3.4 ರಷ್ಟಿದೆ. ಕೊರೊನಾ ತಗುಲಿದರೆ ಸಾವು ನಿಶ್ಚಿತ ಎಂದು ಜನ ಭಾವಿಸಬಾರದು. ಶಂಕಿತ ಸೊಂಕು ಇರುವವರು ಆದಷ್ಟು ಜನರಿಂದ ದೂರವಿರಬೇಕು. ಸರ್ಕಾರ ಟಾಸ್ಕ್‍ಪೋರ್ಸ್ ರಚಿಸಿ 200 ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ. ಆರೋಗ್ಯ ಇಲಾಖೆಯ 104 ಸಂಖ್ಯೆಯ ಸಹಾಯವಾಣಿಯನ್ನು ಸಹ ಸ್ಥಾಪಿಸಲಾಗಿದೆ. ಕೋರೋನಾ ಶಂಕಿತರನ್ನು ಸ್ವಯಂಚಾಲಿತ ದೂರವಾಣಿ ಸಂಪರ್ಕ ಕಲ್ಪಿಸಿ ನಿಗಾ ವಹಿಸಲಾಗಿದೆ ಎಂದು ತಿಳಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ